ಅಲ್ಪಸಂಖ್ಯಾತರ ಮತಕ್ಕಾಗಿ ಜೊಲ್ಲು ಸುರಿಸುವ ಕಾಂಗ್ರೆಸ್: ಸಚಿವ ಅರಗ ಜ್ಞಾನೇಂದ್ರ

Team Udayavani, Nov 10, 2022, 11:43 AM IST

7

ಮೈಸೂರು: ಅಲ್ಪ ಸಂಖ್ಯಾತರ ಮತ ಪಡೆಯಲು ಕಾಂಗ್ರೆಸ್ ನಾಯಕರು ಜೊಲ್ಲು ಸುರಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ಹಿಂದೂ‌ ಪದ ಕುರಿತು ಅಶ್ಲೀಲವಾಗಿ ಮಾತನಾಡಿದ್ದ ಸತೀಶ್ ಜಾರಕೊಹೊಳಿ ಅವರು ವಿಷಾದದ ಮಾತನ್ನು ಹೇಳಿದ್ದಾರೆ. ಹೇಳೋದೆಲ್ಲ ಹೇಳಿ ಅದೇನೋ ಆಯಿತು ಎನ್ನುವ ಗಾದೆಯಂತೆ ಈಗ ವಿಷಾದ ವ್ಯಕ್ತಪಡಿಸಿದರೆ ಜನ ನಂಬಲ್ಲ. ಅಲ್ಪ ಸಂಖ್ಯಾತರನ್ನು ಓಲೈಸಿಕೊಂಡು ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಬರೀ ಜೊಲ್ಲು ಸುರಿಸುವುದೇ ಆಗಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಬಂದಾಗ ಅಲ್ಪ‌ಸಂಖ್ಯಾತರನ್ನು ಓಲೈಸುವುದು ಹಳೆಯ ಕಲೆ ಆಗಿದೆ. ಮುಂದೆ ಅವರಿಗೆ ತಕ್ಕ ಪ್ರತಿಫಲ ಸಿಗಲಿದೆ ಎಂದರು.

ಸಿಐಡಿ ವರದಿ ಬಂದ ನಂತರ ಪರೀಕ್ಷೆ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಂತಿಮ ವರದಿ ಕೊಡುವವರೆಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಿಎಸ್ಐ ಅಕ್ರಮ ನೇಮಕಾತಿ ಕುರಿತಂತೆ ತನಿಖೆ‌ ನಡೆಯುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ 107 ಜನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚು ಮಾತನಾಡುವುದು ಸೂಕ್ತವಲ್ಲ. ಅಕ್ರಮ ಕುರಿತು ಸಿಐಡಿ ಅಂತಿಮ ವರದಿ ನೀಡುವ ತನಕ ಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪಾರದರ್ಶಕವಾಗಿ ನಡೆಯುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಲಾಭಿ, ಒತ್ತಡದ ಪ್ರಶ್ನೆಯಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆ ಸುಧಾರಿಸಲು ಮತ್ತು ತ್ವರಿತಗತಿಯಲ್ಲಿ ಪ್ರಕರಣ ದಾಖಲಿಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ. ಆನ್ ಲೈನ್ ನಲ್ಲಿ ದೂರು ದಾಖಲು, 112 ಸಹಾಯವಾಣಿಗೆ ಕರೆ ಮಾಡಿದರೆ ನಗರ ಪ್ರದೇಶದಲ್ಲಿ 9 ನಿಮಿಷ, ಗ್ರಾಮಾಂತರ ಪ್ರದೇಶದಲ್ಲಿ 20 ನಿಮಿಷಕ್ಕೆ ಹಾಜರಾಗಿ ಕ್ರಮ ಕೈಗೊಳ್ಳಲಾಗುವುದು. ವಂಚನೆ ಪ್ರಕರಣಗಳಲ್ಲಿ ಶಿಸ್ತುಕ್ರಮಕ್ಕೆ ಬದಲಾವಣೆ ತರಲಾಗಿದೆ. ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆಯನ್ನು ಈಗಾಗಲೇ ತೆರೆಯಲಾಗಿದೆ. ಮಹಿಳಾ ಠಾಣೆಯಿದ್ದರೂ ಸಾಮಾನ್ಯ ಠಾಣೆಗಳಲ್ಲಿ ಮೂವರು ಮಹಿಳಾ ಸಿಬ್ಬಂದಿ ಇರುವುದು ಕಡ್ಡಾಯವಾಗಿದೆ. ಕೆಲವೆಡೆ ಹೆಚ್ಚಿನ ಸಿಬ್ಬಂದಿ ಕಾರ್ಯನಿರ್ವಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ‌ ಸರ್ಕಾರ ಅಧಿಕಾರಕ್ಕೆ‌ ಬಂದ ಸಂದರ್ಭದಲ್ಲಿ ಶೇ.35ರಷ್ಟು ಹುದ್ದೆಗಳು‌ ಖಾಲಿ‌ ಇದ್ದವು. ಈಗ 12 ಸಾವಿರಕ್ಕೆ ಬಂದು‌ ನಿಂತಿದೆ. ಮತ್ತೆ 5 ಸಾವಿರ ಪೊಲೀಸರ ನೇಮಕಾತಿಗೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡ ಇಲ್ಲದ ಠಾಣೆಗಳಿಗೆ ಹೊಸದಾಗಿ ಕಟ್ಟಡಗಳನ್ನು‌ ನಿರ್ಮಿಸುತ್ತಿದ್ದು, 117 ಕೋಟೆ ವೆಚ್ಚದಲ್ಲಿ ಹೊಸ ಠಾಣೆಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

ಹರಿಯಾಣದಲ್ಲಿ ನಡೆದ ಅಖಿಲ ಭಾರತ ಗೃಹ ಸಚಿವರ ಸಮ್ಮೇಳನದಲ್ಲಿ‌ ಕರ್ನಾಟಕ ಪೊಲೀಸ್ ಬಗ್ಗೆ ಪ್ರಸಂಶೆ ವ್ಯಕ್ತವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.