
Congress finalises ನಾಳೆ 24 ಮಂದಿ ಸಚಿವರಾಗಿ ಪ್ರಮಾಣವಚನ; ಏಕೈಕ ಎಂಎಲ್ ಸಿ
Team Udayavani, May 26, 2023, 10:09 PM IST

ಹೊಸದಿಲ್ಲಿ: ಎರಡು ದಿನಗಳ ತೀವ್ರ ಚರ್ಚೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಂಪುಟದ ನೂತನ ಸದಸ್ಯರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು, ಶನಿವಾರ ಬೆಳಗ್ಗೆ 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಕೇಂದ್ರದ ಉನ್ನತ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಗಂಟೆಗಳ ಮಾತುಕತೆಯ ನಂತರ ನಿರ್ಧಾರವನ್ನು ಅಂತಿಮಗೊಳಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಸಮತೋಲನಗೊಳಿಸುವ ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಿದ್ದಾರೆ.
ಮೂಲಗಳ ಪ್ರಕಾರ, ಶನಿವಾರ ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿಯಲ್ಲಿ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ, ರಹೀಂ ಖಾನ್, ಸಂತೋಷ್ ಲಾಡ್, ಕೆ ಎನ್ ರಾಜಣ್ಣ, ಪಿರಿಯಾಪಟ್ಟಣ ವೆಂಕಟೇಶ್, ಎಚ್. ಸಿ. ಮಹದೇವಪ್ಪ, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಆರ್.ಬಿ. ತಿಮ್ಮಾಪುರ, ಬಿ ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಡಿ ಸುಧಾಕರ್, ಚೆಲುವರಾಯ ಸ್ವಾಮಿ, ಮಂಕಾಳ ವೈದ್ಯ,ಶಿವಾನಂದ ಪಾಟೀಲ್ ,ಎಂಸಿ ಸುಧಾಕರ್, ಹೆಚ್.ಕೆ. ಪಾಟೀಲ್, ಶರಣಪ್ರಕಾಶ ಪಾಟೀಲ್, ಎಸ್ ಎಸ್ ಮಲ್ಲಿಕಾರ್ಜುನ, ಶರಣಬಸಪ್ಪ ದರ್ಶನಾಪುರ ಸೇರಿದ್ದಾರೆ.
ಚಾಮರಾಜ ನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರನ್ನು ಡೆಪ್ಯೂಟಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.
ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ನೂತನ ಸಚಿವರ ಪಟ್ಟಿಯಲ್ಲಿ ಏಕೈಕ ಎಂಎಲ್‌ಸಿ ಎನ್‌ಎಸ್ ಬೋಸರಾಜು ಅವರ ಹೆಸರಿಗೂ ಅನುಮೋದನೆ ನೀಡಲಾಗಿದೆ.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ಕಳೆದ ಮೂರು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿದ್ದು, ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ.
ಖರ್ಗೆ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಒಟ್ಟು 34 ಮಂದಿ ಸಚಿವರಾಗಬಹುದು. ವಿಸ್ತೃತ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಲ್ವರು ಹೊಸ ಸಚಿವರು ಮತ್ತು ಒಕ್ಕಲಿಗ ಸಮುದಾಯದಿಂದ ಸಮಾನ ಸಂಖ್ಯೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ ತಲಾ ಇಬ್ಬರು, ಮುಸ್ಲಿಂ ಸಮುದಾಯದಿಂದ ಒಬ್ಬರು, ಬ್ರಾಹ್ಮಣ ಮತ್ತು ಮಹಿಳೆ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
