ಅಭ್ಯರ್ಥಿಗಳ ಆಯ್ಕೆ: ಕಾಂಗ್ರೆಸ್ ಸಭೆ
Team Udayavani, Nov 11, 2022, 6:25 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಜ್ಯ ಉಸ್ತುವಾರಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಗರದ ಹೊರವಲಯದ ರೆಸಾರ್ಟ್ನಲ್ಲಿ ಸಭೆ ನಡೆಸಿದರು.
ಬೆಂಗಳೂರು ಉತ್ತರ, ದಕ್ಷಿಣ, ಸೆಂಟ್ರಲ್, ಗ್ರಾಮಾಂತರ ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಗೆ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾಹಿತಿ ಸಂಗ್ರಹಿಸಲಾಯಿತು.
ಪುಲಕೇಶಿನಗರ ಕ್ಷೇತ್ರದ ಟಿಕೆಟ್ ಸಂಬಂಧ ಮಾಜಿ ಮೇಯರ್ ಸಂಪತ್ರಾಜ್ ವಿಚಾರ ಪ್ರಸ್ತಾಪಿಸಲು ಮುಂದಾದಾಗ ಸುರ್ಜೇವಾಲ ತಡೆದರು. ಸರ್ ಸಿವಿ ರಾಮನ್ ನಗರ ವಿಚಾರದಲ್ಲಿ ನೀವು ಹೇಳಿ ಎಂದು ತಾಕೀತು ಮಾಡಿದರು.
ಪುಲಕೇಶಿ ನಗರಕ್ಕೆ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್ ಎಂದು ತಿಳಿಸಿದರು ಎಂದು ಹೇಳಲಾಗಿದೆ. ಶುಕ್ರವಾರವೂ ಸಭೆ ಮುಂದುವರಿಯಲಿದ್ದು, ತುಮಕೂರು, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳ ವಿಧಾನಸಭೆ ಕ್ಷೇತ್ರಗಳಿಗೆ ಸಂಬಂಧಿಸಿ ಮಾಹಿತಿ ಸಂಗ್ರಹ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ