ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Team Udayavani, May 21, 2020, 7:23 AM IST
ಬೆಂಗಳೂರು: ಕೋವಿಡ್ 19 ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಸೇರಿದಂತೆ ರಾಜ್ಯ ಸರ್ಕಾರದ ನಿರ್ಣಯಗಳ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಸರ್ಕಾರದ ತೀರ್ಮಾನಗಳ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಇದುವರೆಗೂ ಸರ್ಕಾರಕ್ಕೆ ಎಲ್ಲ ರೀತಿಯ ಬೆಂಬಲ ಕೊಟ್ಟಿದ್ದೇವೆ. ಆದರೆ, ಸರ್ಕಾರ ದುರಾಡಳಿತ ಮುಂದು ವರಿಸಿದೆ. ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಅನ್ಯಾಯವಾಗುತ್ತಿದೆ. ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರಗಳನ್ನು ಬರೆದರೂ, ಸೌಜನ್ಯಕ್ಕೂ ಉತ್ತರ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಂಚಾಯ್ತಿ ಚುನಾವಣೆ ನಡೆಸದಿದ್ದರೆ ಹೋರಾಟ: ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಶೀಘ್ರವೇ ಚುನಾವಣೆ ನಡೆಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದರು. ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿ, ಈಗ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರತಿಭಟನೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆಯನ್ನು ವಿಧಾನಸೌಧದ ಕೊಠಡಿಯಲ್ಲಿ ಮಾಡುವುದು ವಾಡಿಕೆ. ಆದರೆ, ಸರ್ಕಾರ ಅದಕ್ಕೂ ಅವಕಾಶ ನೀಡಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ