ಕೇಂದ್ರ, ರಾಜ್ಯದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ
Team Udayavani, Sep 12, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿನ ಪ್ರವಾಹ ಸಂತ್ರಸ್ತರ ಸಂಕಷ್ಟಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಕೇಂದ್ರ ಸರ್ಕಾರ ಪ್ರವಾಹ ಪೀಡಿತ ಪ್ರದೇಶಗಳ ಜನರ ಕಷ್ಟಗಳಿಗೆ ಸ್ಪಂದಿಸದೆ ಪ್ರತಿಪಕ್ಷಗಳ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳು ಮತ್ತು ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.