ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಸರ್ವನಾಶವಾಗಬೇಕು: ಬಿ ಎಸ್ ಯಡಿಯೂರಪ್ಪ

Team Udayavani, Jan 13, 2021, 4:56 PM IST

ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ಸರ್ವನಾಶವಾಗಬೇಕು: ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ದೇಶ ಅಭಿವೃದ್ಧಿಗೆ ಮಾರಕವಾಗಿರುವ ಕಾಂಗ್ರೆಸ್ ಸಂಪೂರ್ಣ ಸರ್ವನಾಶ ಆಗಬೇಕು. ಕಾಂಗ್ರೆಸ್ ಮುಕ್ತ ಕರ್ನಾಟಕ ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗ್ರಾಮಪಂಚಾಯತಿ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಲು ಹಮ್ಮಿಕೊಂಡಿದ್ದ ಜನಸೇವಕ ಸಮಾವೇಶದ  ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ  ಮಾರಕವಾದ ಕಾಂಗ್ರೆಸ್ ದೇಶದಲ್ಲಿ ಉಳಿಯಬಾರದು. ಪ್ರಪಂಚದಲ್ಲಿ ದೊಡ್ಡ ಪಕ್ಷ ಬಿಜೆಪಿ. ಅಧಿಕ ಎಸ್ ಸಿ – ಎಸ್ ಟಿ ಸಂಸತ್ ಸದಸ್ಯರಿರುವ ಪಕ್ಷ ನಮ್ಮದು.

ಭಾರತ್ ಮಾತಕೀ ಜೈ ಎಂದರೆ ಕಾಂಗ್ರೆಸ್ ನಲ್ಲಿ ನಡುಕ ಉಂಟಾಗಲಿದೆ. ಈ ಜಯಘೋಷ ಸ್ವಾತಂತ್ರ್ಯ ಸಂಗ್ರಾಮಕ್ಕೆ ನಾಂದಿ ಆಯಿತು. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಆಗಬೇಕು ಈ ನಿಟ್ಟಿನಲ್ಲಿ ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿಯಲ್ಲಿ ಶೇ. 75ಕ್ಕೂ ಅಧಿಕ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ‌145-150 ಸೀಟು ಗೆಲ್ಲಲು ಈಗಿಂದಲೇ ಸಂಘಟನಾ ಕಾರ್ಯ ಆಗಬೇಕು ಎಂದರು.

ಇದನ್ನೂ ಓದಿ:ಸಚಿವ ಸ್ಥಾನ ಸಿಗದಿರುವ ಅಸಮಾಧಾನವಿದೆ, ಅನಿವಾರ್ಯತೆಯೂ ಇದೆ: ಪರಣ್ಣ ಮುನವಳ್ಳಿ

ಯಾರು ಮನೆ ಇಲ್ಲವೆಂದು ಚಿಂತಿಸಬಾರದು. ಮುಂದಿನ ಎರಡುವರೆ ವರ್ಷದಲ್ಲಿ ರಾಜ್ಯದಲ್ಲಿ ಎಲ್ಲರಿಗೂ ಸೂರು ಒದಗಿಸಲಾಗುವುದು. ದುಡಿಯುವ ಕೈಗೆ ಕೆಲಸ ಇರಬೇಕು. ಹಳ್ಳಿ ಬಿಟ್ಟು ನಗರಕ್ಕೆ ಬರುವ ಯುವಪೀಳಿಗೆಗೆ ಹಳ್ಳಿಗಳಲ್ಲಿ ಕೆಲಸ ನೀಡಲಾಗುವುದು. ಗ್ರಾ.ಪಂ ಸದಸ್ಯರಿಂದ ತುಂಬಾ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಸುತ್ತಿದ್ದರೂ, ಒಂದು ದಿನ ವಿಶ್ರಾಂತಿ ಪಡೆಯಲಿಲ್ಲ. ಅವರು ನಮಗೆಲ್ಲ ಆದರ್ಶ ಎಂದರು.

ಪ್ರತಿ ಹಳ್ಳಿಯಲ್ಲಿ ಯುವಮೋರ್ಚಾ ಬಲಿಷ್ಠವಾಗಬೇಕು. ತಾಪಂ, ಜಿಪಂನಲ್ಲಿ ಶೇ. 80 ರಷ್ಟು ಸ್ಥಾನ ಬಿಜೆಪಿ ಗೆಲ್ಲಲಿದೆ. ಮತದಾರರೇ ಜನಪ್ರತಿನಿಧಿಗಳಿಗೆ ಪ್ರಭುಗಳು. ಜನರಿಗೆ ಯೋಜನೆ ತಲುಪಿಸಬೇಕು. ಇತ್ತೀಚೆಗೆ ನಡೆದ ಎಲ್ಲ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಇಲ್ಲಿಯವರೆಗೆ ಬೇರೆಯವರ ಅವಲಂಬನೆಯಿಂದ ಅಧಿಕಾರ ಹಿಡಿದ್ದೇವೆ. ಆದ್ದರಿಂದ ಸ್ವತ ಬಲದಿಂದ ಅಧಿಕಾರಕ್ಕೆ ಬರಬೇಕು ಎಂದರು.

ಸಾಧನೆ ಮಾತನಾಡಬೇಕು. ಮಾತು ಸಾಧನೆಯಾಗಬಾರದು. ನಮ್ಮ ಕೆಲಸ ಗುರುತಿಸಬೇಕು. ಇದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆರ್ ಆರ್ ಎಸ್ ನ ಪ್ರಚಾರಕರು ಸಂಸಾರದ ಬಗ್ಗೆ ಚಿಂತನೆ ಮಾಡದೇ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿ, ಗ್ರಾಪಂ‌ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆ ಯಾಗಿದ್ದಾರೆ. ಗ್ರಾಮ ಸ್ವರಾಜ್ಯ ಪರಿಕಲ್ಪನೆಯಡಿ ಅಭಿವೃದ್ಧಿ ಕಾರ್ಯ ಮಾಡಬೇಕು. 3500 ಗ್ರಾಪಂ ಬಿಜೆಪಿಯಲ್ಲಿ ಅಧಿಕಾರ ಹಿಡಿದಿದ್ದೇವೆ. ಕನಕಪುರ, ಮಂಡ್ಯ ಹಾಸನದಲ್ಲಿ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಬಾದಾಮಿಯಲ್ಲಿ 18 ಗ್ರಾಪಂ ಬಿಜೆಪಿ ವಶವಾಗಿದೆ. ಹಾಸನದಲ್ಲಿ ಪರಿವರ್ತನೆಯಾಗಿದೆ. ಮಂಡ್ಯದಲ್ಲಿ 80 ಸ್ಥಾನ ಬಿಜೆಪಿ ಸದಸ್ಯರು ಗೆದ್ದಿದ್ದಾರೆ. ಪರಿವರ್ತನೆಯ ಗಾಳಿ ಬೀಸಿದೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಖಚಿತವಾಗಿ ಗೆಲ್ಲಲಿದ್ದೇವೆ ಎಂದರು.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ಬಿಜೆಪಿ ಗ್ರಾಪಂ ನಲ್ಲಿ 50 ಸಾವಿರಕ್ಕೂ ಅಧಿಕ ಸ್ಥಾನ ಗಳಿಸಿದೆ. ಜಿ.ಪಂ ಚುನಾವಣೆ, ಬಿಬಿಎಂಪಿ ಹೆಚ್ಚಿನ ಸ್ಥಾನ ಗೆಲ್ಲಿಸಬೇಕು. ಬಿಜೆಪಿಯ ಮುಖ್ಯ ಉದ್ದೇಶ ಜನಸೇವೆಯಾಗಿದೆ. ಬೇರೆ ಪಕ್ಷಕ್ಕಿಂತ ಬಿಜೆಪಿ ಭಿನ್ನವಾಗಿದೆ. ಬಿಜೆಪಿ ಒಂದು ರಾಜ್ಯ, ದೇಶದಲ್ಲಿ ಮಾತ್ರವಲ್ಲ ವಿಶ್ವದಲ್ಲಿ ಹೆಸರುವಾಸಿಯಾಗಿದೆ. ಗ್ರಾಪಂ ಸದಸ್ಯರಿಗೆ ಅಭಿನಂದನೆ ಎಂದರು.

ಟಾಪ್ ನ್ಯೂಸ್

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಅಪ್ಪ ಅರ್ಥವಾದರೂ ಮಗನ ನಡೆ ಅರ್ಥವಾಗುತ್ತಿಲ್ಲ: ಶಂಕರ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಅನಿಲ್‌ ದೇಶ್‌ಮುಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯರ ಮುಷ್ಕರ

BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ‌ನಿರಾಣಿ ಸೂಚನೆ

BGML ಜಮೀನು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ಸಚಿವ ‌ನಿರಾಣಿ ಸೂಚನೆ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಕುಣಿಗಲ್ : ನೀರಿನಲ್ಲಿ ಕೊಚ್ಚಿಹೋದ ನಾಲ್ವರ ಮೃತದೇಹ ಪತ್ತೆ, ಮೂರು ದಿನದ ಕಾರ್ಯಚರಣೆ ಮುಕ್ತಾಯ

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್

gangavati crime

ನಿಯಮ ಉಲ್ಲಂಘನೆ : ಬೀಜ ಸಂಸ್ಕರಣಾ ಘಟಕಗಳಿಗೆ ಅಧಿಕಾರಿಗಳಿಂದ ನೋಟೀಸ್

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.