
ಬಿಜೆಪಿ ಜನಸ್ಪಂದನವನ್ನು ‘ಬಿಜೆಪಿ ಭ್ರಷ್ಟೋತ್ಸವ’ ಎಂದು ಕರೆದ ಕಾಂಗ್ರೆಸ್
Team Udayavani, Sep 10, 2022, 10:55 AM IST

ಬೆಂಗಳೂರು: ಸರ್ವರ ವಿಕಾಸ, ಸಮೃದ್ಧ ಕರ್ನಾಟಕದತ್ತ! ದೃಢ ಹೆಜ್ಜೆಗಳು ಎಂಬ ಧ್ಯೇಯದಡಿ ಬಿಜೆಪಿಯು ದೊಡ್ಡಬಳ್ಳಾಪುರದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ʻಜನಸ್ಪಂದನʼ ಸಮಾವೇಶ ನಡೆಸುತ್ತಿದೆ. ಇದನ್ನು ವ್ಯಂಗ್ಯವಾಡಿರುವ ಕಾಂಗ್ರೆಸ್, ಕರ್ನಾಟಕ ಜನತೆಗೆ ಬಿಜೆಪಿಯು ಏನು ಮಾಡಿದೆ ಎಂದು ಪ್ರಶ್ನಿಸಿದೆ.
ಬಿಜೆಪಿ ಭ್ರಷ್ಟೋತ್ಸವ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿರುವ ಕಾಂಗ್ರೆಸ್, ರಾಜ್ಯದ ಜನತೆಗೆ ಯಾವ ಸಾಧನೆ, ಯೋಜನೆ, ಸ್ಪಂದನೆ ಮಾಡಿದ್ದರೆಂದು ಸರ್ಕಾರ ಸಮಾವೇಶ ಮಾಡುತ್ತಿದೆ? ಬಿಜೆಪಿ ಸರ್ಕಾರ ಕರ್ನಾಟಕದ ಜನತೆಗೆ, ಕನ್ನಡ ನಾಡು ನುಡಿಗೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಿದೆ? ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ನಾಡಿನ ಸಾಹಿತಿಗಳಿಗೆ ಅವಮಾನಿಸಿದ್ದೇ ನಿಮ್ಮ ಸಾಧನೆಯೇ ಬಸವರಾಜ ಬೊಮ್ಮಾಯಿ ಅವರೇ ಎಂದು ಪ್ರಶ್ನಿಸಿದೆ.
ಕೈಗೊಂಬೆ ಸಿಎಂ ಅವರ ಒಂದು ವರ್ಷದ ವಾರ್ಷಿಕೋತ್ಸವಕ್ಕೆ ಸಜ್ಜಾಗಿರುವ ಸರ್ಕಾರ ತಮ್ಮ ಸಾಧನೆ ಏನು ಎಂದು ನಾಡಿನ ಜನತೆಗೆ ಉತ್ತರಿಸಬೇಕು. ಪಠ್ಯಪುಸ್ತಕಗಳಲ್ಲಿ ಅವಾಂತರ ಸೃಷ್ಟಿಸಿದ ಸರ್ಕಾರ ಇನ್ನೂ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಲಿಲ್ಲ. ದೇಶದ್ರೋಹಿಗಳನ್ನು ದೇಶಭಕ್ತರನ್ನಾಗಿ ಬಿಂಬಿಸಿದ್ದೇ ಸಾಧನೆಯೇ ಎಂದಿದೆ.
ಇದನ್ನೂ ಓದಿ:ವಿಧಾನಮಂಡಲ ಕಲಾಪ: ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಜಾತಿ, ಮತ, ಪಂಥಗಳು ಅದೆಷ್ಟೇ ದ್ವೇಷದ ಗೋಡೆಗಳನ್ನು ಎಬ್ಬಿಸಿದರೂ ನಾವೆಲ್ಲರೂ ಸಹೋದರ ಸಮಾನರು ಎಂಬುದೇ ಸತ್ಯ ಎಂದು ಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಆದರೆ ಜಾತಿ, ಧರ್ಮಗಳನ್ನು ಒಡೆದಾಳುವ ಇರಾದೆ ಹೊಂದಿದ ಬಿಜೆಪಿಗೆ ನಾರಾಯಣ ಗುರುಗಳ ತತ್ವಗಳು ತಡೆಗೋಡೆಯಂತೆ ಭಾಸವಾಗುವುದು ಸಹಜ. ಆ ಕಾರಣಕ್ಕಾಗಿಯೇ ಗುರುಗಳಿಗೆ ನಿರಂತರ ಅವಮಾನ ಮಾಡುತ್ತಿದೆ. ಮಹಿಳೆಯರಿಗೆ, ಶೋಷಿತರಿಗೆ ಅಕ್ಷರದ ದಾಸೋಹ ನಡೆಸಿದ, “ಅಕ್ಷರದವ್ವ” ಎಂದೇ ಖ್ಯಾತರಾದ ಸಾವಿತ್ರಿ ಬಾ ಪುಲೆ ಅವರ ಪಠ್ಯವನ್ನು ಕೈಬಿಟ್ಟ ಸರ್ಕಾರ ಪಠ್ಯಪುಸ್ತಕಗಳಲ್ಲಿ ಬುಲ್ ಬುಲ್ ಹಕ್ಕಿ ಹಾರಿಸುತ್ತಿದೆ! ಶಿಕ್ಷಣ ವಿರೋಧಿಯಾಗಿ ವರ್ತಿಸಿದ್ದು, ಮಹನೀಯರಿಗೆ ಅವಮಾನಿಸಿದ್ದು ನಿಮ್ಮ ಒಂದು ವರ್ಷದ ಸಾಧನೆಯೇ ಬೊಮ್ಮಾಯಿಯವರೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಸಾಹಿತ್ಯವನ್ನೇ ಅರಿಯದ, ಸುಳ್ಳು ಹೇಳುವುದನ್ನು, ಇತಿಹಾಸ ತಿರುಚುವುದನ್ನು ಕಾಯಕ ಮಾಡಿಕೊಂಡಿರುವ ಬಿಜೆಪಿಯ ಬಾಡಿಗೆ ಭಾಷಣಕಾರನೂ ಮಕ್ಕಳ ಭವಿಷ್ಯ ರೂಪಿಸುವ ಪಠ್ಯದಲ್ಲಿ ಜಾಗ ಪಡೆದದ್ದಕ್ಕಿಂತ ದುರಂತ ಬೇರೊಂದಿಲ್ಲ. ಪಠ್ಯ ಪುಸ್ತಕ ರಚನೆಗೆ ಅಪ್ರಬುದ್ಧರನ್ನು ಕೂರಿಸಿ ಅವಾಂತರ ಎಬ್ಬಿಸಿದ್ದು ಸರ್ಕಾರದ ಮಹಾ ಸಾಧನೆಗಳಲ್ಲೊಂದು ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನಪದ ಪ್ರಪಂಚ ಪ್ರಶಸ್ತಿ ಪ್ರದಾನ; ಅಧಿಕಾರಕ್ಕೆ ಬಂದ ಕೂಡಲೇ ವಿಶೇಷ ಅನುದಾನ: ಸಿದ್ದರಾಮಯ್ಯ

360 ಡಿಗ್ರಿ ಬ್ರ್ಯಾಂಡಿಂಗ್ ಪ್ರಚಾರ ನಡೆಸಲು ಕಾಂಗ್ರೆಸ್ ಮುಖಂಡರಿಗೆ ಟಾಸ್ಕ್

ಪ್ರತಿಪಕ್ಷದ ನಾಯಕರನ್ನು ಹೀಗಳೆದಾಗ ಭಾರತದ ಗೌರವಕ್ಕೆ ಧಕ್ಕೆ ಉಂಟಾಗುವುದಿಲ್ಲವೇ : ಸಿದ್ದರಾಮಯ್ಯ

ಬೆಂಗಳೂರು ಏರೋ ಇಂಡಿಯಾ ಶೋ ; ಮಾಂಸ ಮಾರಾಟ ಬಂದ್

ದಾಖಲೆ ಸಮೇತ ದೂರು ನೀಡಿದರೆ ದೂರುದಾರಿಗೂ ರಕ್ಷಣೆ : ಲೋಕಾಯುಕ್ತ ಪಾಟೀಲ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
