ಬಣ ಬಿಡದಿದ್ದರೆ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ
ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ನಡೆ ಬಗ್ಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ
Team Udayavani, Dec 1, 2020, 6:31 AM IST
ಬೆಂಗಳೂರು: ಪಕ್ಷ ಸಂಘಟನೆ ಕುರಿತಾಗಿ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬಣ ರಾಜ ಕೀಯ ಸದ್ದು ಮಾಡಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡೆಯ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕರು ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆಯ ಸೋಲಿನ ಪರಾಮರ್ಶೆ ಮತ್ತು ಪಕ್ಷ ಸಂಘಟನೆ ಕುರಿತು ಸೋಮವಾರ ಹಿರಿಯ ನಾಯಕರ ಸಭೆ ನಡೆಸಲಾಗಿದೆ. ಸೋಲಿಗೆ ಆಂತರಿಕ ಕಚ್ಚಾಟವೇ ಕಾರಣ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ, ಕೆ.ಎನ್. ರಾಜಣ್ಣ ಸಹಿತ ಹಿರಿಯ ನಾಯಕರು ಈ ಸಭೆಯಲ್ಲಿ ನೇರವಾಗಿ ಆರೋಪಿಸಿದ್ದಾರೆ.
ಈಗಲೇ “ಮುಖ್ಯಮಂತ್ರಿ’ ಪ್ರಸ್ತಾವ ಏಕೆ?
ವಿಧಾನಸಭೆ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದೆ. ಈಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಏಕೆ? ಆ ಬಣ ಈ ಬಣ ಎಂದು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ಬಣ ಎಂದು ಹೇಳುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿ. ಬೆಂಬಲಿಗರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಗಾಂಧಿ ಹಿಂದುತ್ವಕ್ಕೆ ಕಾಂಗ್ರೆಸ್ ಜೈ
ಬಿಜೆಪಿಯವರು ಸಾವರ್ಕರ್ ಹಿಂದುತ್ವ ಪ್ರತಿಪಾದಿಸುತ್ತಿದ್ದಾರೆ. ನಾವು ಗಾಂಧೀಜಿ ಹಿಂದುತ್ವವನ್ನು ಬಿಂಬಿಸಬೇಕು. ಈ ಬಗ್ಗೆ ಜನರಿಗೆ ಅರ್ಥ ಮಾಡಿಸುವಲ್ಲಿ ನಾವು ವಿಫಲವಾಗಿದ್ದೇವೆ ಎಂದು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ದಲಿತರನ್ನು ತಲುಪಬೇಕು
ದಲಿತರು ಕಾಂಗ್ರೆಸ್‌ನಿಂದ ದೂರವಾಗುತ್ತಿದ್ದಾರೆ ಎನ್ನುವ ಬಗ್ಗೆಯೂ ಕೈ ನಾಯಕರ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು, ಮಾಜಿ ಡಿಸಿಎಂ ಡಾ| ಪರಮೇಶ್ವರ್ ವಿರುದ್ಧ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪರಮೇಶ್ವರ್ ಕೂಡ ಗರಂ ಆಗಿ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
ಮೂಲ-ವಲಸಿಗ ಬಿರುಕು ಬೇಡ
ಮೂಲ ಮತ್ತು ವಲಸಿಗ ಎನ್ನುವ ತಾರತಮ್ಯ ಮಾಡಿದರೆ ಒಗ್ಗಟ್ಟು ಮೂಡುವುದು ಹೇಗೆ? ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯ. ಮೊದಲು ಆ ಕೆಲಸ ಮಾಡಿ, ಅನಂತರ ಸಿಎಂ ಯಾರು ಎಂದು ನಿರ್ಧಾರವಾಗುತ್ತದೆ ಎಂದು ಮಾಜಿ ಸ್ಪೀಕರ್ ಕೋಳಿವಾಡ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444