ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ಸಿಗರ ಕೈವಾಡ ಸ್ಪಷ್ಟ: ಅಶ್ವತ್ಥನಾರಾಯಣ

Team Udayavani, Nov 11, 2021, 4:05 PM IST

ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ಸಿಗರ ಕೈವಾಡ ಸ್ಪಷ್ಟ: ಅಶ್ವತ್ಥನಾರಾಯಣ

ಬೆಂಗಳೂರು: ಬಿಟ್ ಕಾಯಿನ್ ದಂಧೆ ಬಗ್ಗೆ ಸಿದ್ದರಾಮಯ್ಯವರಿಗೆ ಮಾಹಿತಿ ಇದೆಯೇ? ದಾಖಲೆ ಇದ್ದರೆ, ಅವ್ಯವಹಾರ ಆಗಿದ್ದರೆ ಯಾರಿದ್ದಾರೆಂಬ ಹೆಸರು ಕೊಡಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಬಿ ಸಿಟಿ ಗಲಾಟೆಯಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್‍ರ ವರ ಮಗ ಮಹಮ್ಮದ್ ನಲಪಾಡ್ ಹೆಸರಿತ್ತು. ಇವರ ಜೊತೆ ಬಿಟ್ ಕಾಯಿನ್ ಆರೋಪಿ ಶ್ರೀಕೃಷ್ಣ ಹೆಸರೂ ಇತ್ತು. ಆಗಲೇ ಬಿಟ್ ಕಾಯಿನ್ ವಿಚಾರ ಚರ್ಚೆಗೆ ಬಂದಿತ್ತು. ಈಗ ಶ್ರೀಕೃಷ್ಣನು ಕಾಂಗ್ರೆಸ್ ಶಾಸಕರು, ಶಾಸಕರ ಮಕ್ಕಳ ಹೆಸರು ಹೇಳಿದ್ದಾನೆ. ಮಾಜಿ ಸಚಿವರ ಮಗ ರುದ್ರಪ್ಪ ಲಮಾಣಿ ಹೆಸರು ಹೇಳಿದ್ದಾನೆ. ಇದಕ್ಕೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಸಮಾಜಘಾತುಕ ಚಟುವಟಿಕೆಗಳಲ್ಲಿ ಕಾಂಗ್ರೆಸ್ ಪಕ್ಷದ ಸೆಕೆಂಡ್ ಲೈನ್ ನಾಯಕತ್ವವಿದೆ. ಸ್ಕಿಲ್ ಗೇಮ್, ಕ್ಯಾಸಿನೋ ದಂಧೆ, ಲೈವ್ ಬ್ಯಾಂಡ್, ಬಾರ್ ಗಲಭೆಗಳು ಮತ್ತಿತರ ದಂಧೆಕೋರರು ಕಾಂಗ್ರೆಸ್‍ನಲ್ಲಿದ್ದಾರೆ. ಅಂಥಹ ದಂಧೆಗಳಲ್ಲಿ ಬಿಜೆಪಿಯವರು ಇಲ್ಲ. ಬಿಜೆಪಿ ವಿರುದ್ಧ ದಾಖಲೆ ಇಲ್ಲದೆ ಆರೋಪಿಸುವುದು ಸಲ್ಲದು; ಇದೇ ಪ್ರವೃತ್ತಿ ಮುಂದುವರಿಸಿದರೆ ಸಿದ್ದರಾಮಯ್ಯರ ವಿರುದ್ಧ ಪೊಲೀಸ್ ದೂರು ಕೊಡಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ನಿಂದ ಹಿಟ್ ಆ್ಯಂಡ್ ರನ್ ಕೆಲಸ: ಆರಗ ಜ್ಞಾನೇಂದ್ರ

ಉತ್ತಮವಾಗಿ ಸರಕಾರ ನಡೆಸುತ್ತಿದ್ದೇವೆ. ಆದರೆ, ಸುಳ್ಳು ಆಪಾದನೆ ಮಾಡುವುದು ಸಿದ್ದರಾಮಯ್ಯ ಅವರ ಚಾಳಿ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕಾರದ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಎಲ್‍ಇಡಿ ಪರದೆಯಲ್ಲಿ ಪ್ರಸಾರ ಮಾಡಲಾಗುತ್ತಿತ್ತು. ಇದನ್ನು ಸಹಿಸದ ಸಿದ್ದರಾಮಯ್ಯರವರು ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕೋಟ್ಯಂತರ ಅವ್ಯವಹಾರ ಮಾಡಿದೆ ಎಂದು ಆರೋಪಿಸಿದ್ದರು. ಆದರೆ, ಅದನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡಲಿಲ್ಲ. ಅದಕ್ಕೆ ದಾಖಲೆ ಸಮೇತ ಐದು ಸಚಿವರು ಉತ್ತರವನ್ನೂ ನೀಡಿದ್ದರು; ಆದರೆ, ಸಿದ್ದರಾಮಯ್ಯ ಮತ್ತೆ ಮಾತನಾಡಲಿಲ್ಲ ಎಂದು ವಿವರಿಸಿದರು.

ಸಿದ್ದರಾಮಯ್ಯರವರು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿಗಳ ವಿರುದ್ಧ ಸ್ಟೈಲ್ ಆಗಿ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 100 ದಿನಗಳಾದ ಸಂದರ್ಭದಲ್ಲಿ ಏಕವಚನದಲ್ಲಿ ಟೀಕೆ ಮಾಡಿದ್ದರು ಎಂದು ಆಕ್ಷೇಪಿಸಿದರು. ಬಿಟ್ ಕಾಯಿನ್ ಅಂದರೆ ಮೊಬೈಲ್, ಲ್ಯಾಪ್‍ಟಾಪ್‍ಗಳಲ್ಲಿ ನಡೆಯುವವ ಡಿಜಿಟಲ್ ಫೇಕ್ ಟರ್ನ್ ಓವರ್; ಇದರ ಸಂಪೂರ್ಣ ಮಾಹಿತಿ ನಮಗಾಗಲೀ ಸರ್ಕಾರಕ್ಕಾಗಲೀ ಇಲ್ಲ ಎಂದು ತಿಳಿಸಿದರು.

ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರು ಹಾಗೂ ಪಕ್ಷದ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸಿದ್ದರಾಮಯ್ಯ ಸುಳ್ಳುಗಳ ಸರದಾರ. ಬರಿ ಗಾಳಿಯಲ್ಲಿ ಗುಂಡು ಹೊಡೆಯುವ ವ್ಯಕ್ತಿ ಎಂದರು. ದಲಿತರ ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಾರೆ ಎಂಬ ಹೇಳಿಕೆಯ ವಿಡಿಯೋವನ್ನು ತಿರುಚಿಲ್ಲ; ಈ ವಿಚಾರದಲ್ಲಿ ಸಿದ್ದರಾಮಯ್ಯರ ನಾಲಿಗೆ ತಿರುಚಿದೆ ಎಂದು ತಿಳಿಸಿದರು. ಸಿದ್ದರಾಮಯ್ಯರು ನಿಜವಾದ ವಿಡಿಯೋ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

2016-18ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಟ್ ಕಾಯಿನ್ ವಿಚಾರದ ಚರ್ಚೆ ನಡೆಯುತ್ತಿತ್ತು. ಆದರೆ, ನಗದು ಎಲ್ಲಿದೆ, ಖಾತೆ ಎಲ್ಲಿದೆ ಎಂದು ಯಾರಿಗೂ ಗೊತ್ತಿಲ್ಲ. ಸಿದ್ದರಾಮಯ್ಯರ ಕಾಲದಲ್ಲೇ ಈ ದಂಧೆ ನಡೆಯುತ್ತಿತ್ತು. ಆಗ ಐಟಿ, ಬಿಟಿ ಸಚಿವರಾಗಿದ್ದವರನ್ನು ಈಗ ವಿಚಾರಣೆಗೆ ಒಳಪಡಿಸಿದರೆ ನಿಮ್ಮ ಗುಟ್ಟೂ ಹೊರಬರುತ್ತದೆ ಎಂದು ತಿಳಿಸಿದರು.

ಸಿಎಂ ಬದಲಾಗುತ್ತಾರೆ; ಮೂರನೇ ಸಿಎಂ ಬರುತ್ತಾರೆ ಎಂಬುದು ಕೇವಲ ಗುಲ್ಲು. ಇವೆಲ್ಲವೂ ಆಧಾರರಹಿತ ಮಾತುಗಳು ಎಂದ ಅವರು, ದಲಿತ ಸಿಎಂ ವಿಚಾರದಲ್ಲಿ ಸಿದ್ದರಾಮಯ್ಯರ ನಿಜ ಮುಖ ಬಯಲಾಗಿದೆ. ನಾನೂ ದಲಿತನೇ, ನಾನೂ ಮುಸ್ಲಿಮನೇ ಎನ್ನುವ ಮೂಲಕ ನಿಮ್ಮ ನಿಜಬಣ್ಣ ಹೊರಬಿದ್ದಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯರು ತಮ್ಮ ಗೋಮುಖ ವ್ಯಾಘ್ರನ ಕೆಲಸ ನಿಲ್ಲಿಸಲಿ ಎಂದು ಒತ್ತಾಯಿಸಿದರು. ಪ್ರಿಯಾಂಕ ಖರ್ಗೆ ಚೇಂಬರ್ ನಲ್ಲೇ ಬಿಟ್ ಕಾಯಿನ್ ಕುರಿತು 2016-17ರಲ್ಲಿ ಚರ್ಚೆ ನಡೆದಿತ್ತು ಎಂದು ಆರೋಪಿಸಿದರು.

ಸಮರ್ಪಕ ತನಿಖೆ ಮಾಡದೆ ಬಂಧಿಸಿದರೆ ಈ ಪ್ರಕರಣದ ಹಿಂದಿರುವ ಕಾಣದ ಕೈಗಳು ಸಿಗಲಾರವು. ಈ ವಿಚಾರದಲ್ಲಿ ತಾಳ್ಮೆ ಇರಬೇಕು. ಮುಖ್ಯಮಂತ್ರಿಗಳು, ಗೃಹ ಸಚಿವರು ತನಿಖೆ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರ ನೀಡಿದರು

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.