Constitution ರಾಷ್ಟ್ರೀಯ ಏಕತಾ ರ‍್ಯಾಲಿ; ಸರ್ವಾಧಿಕಾರ ಜಾರಿಗೆ ಹುನ್ನಾರ:ಖರ್ಗೆ


Team Udayavani, Feb 26, 2024, 1:08 AM IST

1-wqeqewqwqew

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲದಿದ್ದರೆ ದೇಶದಲ್ಲಿ ಸರ್ವಾಧಿಕಾರತ್ವ ಬರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಸಿದ್ದಾರೆ.

ರವಿವಾರ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಸಮಾನತೆ ತೆಗೆದುಹಾಕಬೇಕೆಂಬ ಸಂವಿ ಧಾನದ ಆಶಯ ಹಾಗೂ ನಮ್ಮ ಬೇಡಿಕೆಯನ್ನು ತಿರುಚಿ ಜನರ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ, ಎಲ್ಲರೂ ಎಚ್ಚರದಿಂದ ಇರಬೇಕು ಎಂದು ಖರ್ಗೆ ಹೇಳಿದ್ದಾರೆ. ದೇಶದಲ್ಲಿ ಪ್ರತ್ಯೇಕ ಸಂವಿಧಾನ ಸ್ಥಾಪಿಸುವ ಚಿಂತನೆಗಳು ಒಳಗೊಳಗೆ ನಡೆಯುತ್ತಿವೆ. ಶರೀರದಲ್ಲಿ ಕೊನೆಯ ಹನಿ ರಕ್ತ ಇರುವವರೆಗೆ ಇದಕ್ಕೆ ಅವಕಾಶ ಕೊಡದೆ ಸಂವಿಧಾನವನ್ನು ರಕ್ಷಣೆ ಮಾಡಬೇಕು. ಪ್ರಧಾನಿ ಮೋದಿ ರಕ್ತ ಹೀರುವ ಕೆಲಸ ಮಾಡುತ್ತಿದ್ದಾರೆ. ಜನರ ತೆರಿಗೆ ಹಣದಲ್ಲಿ ಜಾರಿಯಾದ ಯೋಜನೆಗಳನ್ನು ತನ್ನದೆಂದು ಹೇಳಿಕೊಳ್ಳುವ ಮೂಲಕ ಸರ್ವಾಧಿ ಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾಳಜಿಯುಳ್ಳ ಸರಕಾರವಿಲ್ಲ
ಹೆಣ್ಣು ಮತ್ತು ಗಂಡಿಗೆ ಮತದಾನದ ಸಮಾನ ಹಕ್ಕು ಕೊಟ್ಟಿರುವುದು ನಮ್ಮ ಸಂವಿಧಾನ ಮಾತ್ರ ಎಂದು ಖರ್ಗೆ ಹೇಳಿದ್ದಾರೆ. ಸಂವಿಧಾನ ಉಳಿದರೆ ದೇಶದಲ್ಲಿ ಏಕತೆ ಇರುತ್ತದೆ. ಪ್ರಜಾಪ್ರಭುತ್ವ ಉಳಿದರೆ ಶಾಂತಿ, ನೆಮ್ಮದಿಯಿಂದ ಬಾಳಲು ಸಾಧ್ಯ. ನಾವೆಲ್ಲರೂ ಸಂವಿಧಾನದ ಆಶಯಕ್ಕೆ ತಕ್ಕಂತೆ ಬದುಕಬೇಕು ಎಂದರು.

ಸಂವಿಧಾನ ಬದಲಿಸುವವರನ್ನು ಕಿತ್ತೂಗೆಯಿರಿ: ಸಿಎಂ
ಬೆಂಗಳೂರು: ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೂಗೆಯ ದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರವಿವಾರ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಹಿಂದೆ ಪ್ರಧಾನಿ ಮೋದಿ ಸಚಿವ ಸಂಪುಟ ದಲ್ಲಿ ಇದ್ದ ಅನಂತಕುಮಾರ ಹೆಗಡೆ ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಘೋಷಿಸಿದ್ದರು. ಅದನ್ನು ಪ್ರಧಾನಿ ಮೋದಿಯವರಾಗಲಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಿಜೆಪಿಯಾಗಲಿ, ಆರೆಸ್ಸೆಸ್‌ ಆಗಲಿ ಖಂಡಿಸಲಿಲ್ಲ. ವಿರೋಧಿಸಲೂ ಇಲ್ಲ ಎಂದು ವಾಗ್ಧಾಳಿ ನಡೆಸಿದರು.

ಬಿಜೆಪಿ ಮತ್ತು ಆರೆಸ್ಸೆಸ್‌ ಅಜೆಂಡಾವನ್ನು ಸಂಸದ ಅನಂತಕುಮಾರ ಹೆಗಡೆ ಬಾಯಿಯಲ್ಲಿ ಹೇಳಿಸಿದರು. ಈ ಬಗ್ಗೆ ಇಡೀ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು. ಇಲ್ಲದೆ ಹೋದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದರು.
ಬುದ್ದ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣ ಗುರು, ವಿವೇಕಾನಂದ ಮುಂತಾ ದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನ ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ವಿಶ್ವದ ಸಂವಿಧಾನಗಳನ್ನೆಲ್ಲ ಅಧ್ಯಯನ ಮಾಡಿ ಎಲ್ಲದರ ಅತ್ಯುತ್ತಮ ಸಾರವನ್ನು ತೆಗೆದು ಡಾ| ಅಂಬೇಡ್ಕರ್‌ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ ಎಂದರು.
ಐಎನ್‌ಡಿಐಎ ಒಕ್ಕೂಟದ ಮುಖಂಡರಾದ ಫಾರೂಕ್‌ ಅಬ್ದುಲ್ಲಾ, ಸೀತಾರಾಮ್‌ ಯೆಚೂರಿ ಸೇರಿ 18 ರಾಜ್ಯಗಳ 40 ಮಂದಿ ಮುಖಂಡರು, 12 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.