Udayavni Special

ಸದೃಢ-ಭವ್ಯ ರಾಮ ಮಂದಿರ ನಿರ್ಮಾಣ

Team Udayavani, Feb 22, 2020, 3:06 AM IST

sadrudha

ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರವು ಶತ ಶತಮಾನಗಳ ಕಾಲ ಶಾಶ್ವತವಾಗಿ ಉಳಿಯಬೇಕೆಂಬ ಹಿನ್ನೆಲೆಯಲ್ಲಿ ಕಟ್ಟಡವನ್ನು ಯೋಜನಾಬದ್ಧವಾಗಿ, ಸದೃಢವಾಗಿ, ಭವ್ಯವಾಗಿ ನಿರ್ಮಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್‌ನ ಸದಸ್ಯರಾಗಿರುವ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.

ಹೊಸದಿಲ್ಲಿಯಲ್ಲಿ ಬುಧವಾರ ನಡೆದ ರಾಮ ಮಂದಿನ ಟ್ರಸ್ಟ್‌ನ ಮೊದಲ ಸಭೆಯಲ್ಲಿ ಭಾಗವಹಿಸಿ ವಾಪಸಾದ ಶ್ರೀಗಳು, ಗುರುವಾರ ಪೇಜಾವರದ ಮೂಲ ಮಠ ಮತ್ತು ಶುಕ್ರವಾರ ಬೆಳಗ್ಗೆ ಕಣ್ವತೀರ್ಥದಲ್ಲಿರುವ ಉಪ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಧ್ಯಾಹ್ನ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ರಾಮ ಮಂದಿರ ಟ್ರಸ್ಟ್‌ನಲ್ಲಿ ನಾನು ದಕ್ಷಿಣ ಭಾರತ ಪ್ರತಿನಿಧಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದಕ್ಷಿಣ ಭಾರತದ ಎಲ್ಲ ಆಸ್ತಿಕರ ಸಹಕಾರ ಬೇಕು ಎಂದು ಶ್ರೀಗಳು ಹೇಳಿದರು. ಮಂದಿರ ನಿರ್ಮಾಣಕ್ಕೆ ಬೇಕಾಗಿರುವ ನಿಧಿ ಸಂಚಯನಕ್ಕಾಗಿ ಅಯೋಧ್ಯೆಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ಖಾತೆಯನ್ನು ತೆರೆಯಲಾಗುವುದು. ಬಳಿಕ ಖಾತೆ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಲಾಗುವುದು. ಸಾರ್ವಜನಿಕರು ತಮ್ಮ ದೇಣಿಗೆಯನ್ನು ಈ ಖಾತೆಗೆ ಸಂದಾಯ ಮಾಡಬಹುದಾಗಿದೆ. ಪೇಜಾವರ ಮಠದ ಹೆಸರಿನಲ್ಲಿ 5 ಲಕ್ಷ ರೂ. ಗಳನ್ನು ತಾನು ದಿಲ್ಲಿಯಲ್ಲಿ ಹಸ್ತಾಂತರಿಸಿದ್ದೇನೆ ಎಂದು ಸ್ವಾಮೀಜಿ ವಿವರಿಸಿದರು.

ಪ್ರಧಾನಿ ಮೋದಿ ಅವರ ಆಪ್ತ ನೃಪೇಂದ್ರ ಮಿಶ್ರಾ ಅವರು ಅಧ್ಯಕ್ಷರಾಗಿರುವ ರಾಮ ಮಂದಿರ ನಿರ್ಮಾಣ ಸಮಿತಿಯು ಮಂದಿರದ ರೂಪು-ರೇಷೆ ತಯಾರಿಸಿ, ಯೋಜನಾ ವೆಚ್ಚವನ್ನು ನಿಗದಿಪಡಿಸಿ ಶಂಕು ಸ್ಥಾಪನೆಗೆ ದಿನಾಂಕ ನಿಗದಿಪಡಿಸಲಿದೆ. ಚತುಷ್ಪಥ ರಸ್ತೆ, ವಸತಿ ಸೌಲಭ್ಯ, ಕಲಾ ಭವನ ಇತ್ಯಾದಿಗಳನ್ನು ಮಂದಿರ ಒಳಗೊಂಡಿರುತ್ತದೆ. ಪ್ರಸ್ತುತ 67 ಎಕರೆ ಜಮೀನು ಲಭ್ಯವಿದ್ದು, ಮುಂದೆ ಸುತ್ತಮುತ್ತಲಿನ ಹೆಚ್ಚುವರಿ ಜಮೀನನ್ನು ಪಡೆಯವುದಕ್ಕೆ ಟ್ರಸ್ಟ್‌ ಪ್ರಯತ್ನಿಸಲಿದೆ ಎಂದು ವಿವರಿಸಿದರು.

ಮನೆ ಮನೆಯಲ್ಲಿ ರಾಮ ನಾಮ ಜಪ, ಭಜನೆ: ಹಿಂದೂ ಸಂಸ್ಕೃತಿಯ ಪುನರುಜ್ಜೀವನ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ರಾಮ ಮಂದಿರ ನಿರ್ಮಾಣ ಸಾಂಕೇತಿಕ ಮಾತ್ರ. ಸಾತ್ವಿಕ ಬಲವಾಗಿ ಮನೆ ಮನೆಗಳಲ್ಲಿ 108 ರಾಮ ನಾಮ ಜಪ, ಭಜನೆ, ರಾಮಾಯಣ ವಾಚನ ಮತ್ತು ಪ್ರವಚನ ನಡೆಯಬೇಕು. ಈ ವಿಷಯವನ್ನು ಸಭೆಯಲ್ಲಿ ನಾನೇ ಪ್ರಸ್ತಾವಿಸಿದ್ದು, ಅದಕ್ಕೆ ಒಪ್ಪಿಗೆ ಲಭಿಸಿದೆ ಎಂದರು.

ರಾಮನವಮಿ ದಿನವಾದ ಏ.4ರಂದು ಶಿಲಾನ್ಯಾಸ ನೆರವೇರಿ ಸಲು ಉದ್ದೇಶಿಸಿದ್ದರೂ ಅಂದು 15ರಿಂದ 20 ಲಕ್ಷ ಜನರು ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆ ಇರುವುದರಿಂದ ಅಂದು ಶಂಕುಸ್ಥಾಪನೆ ಬೇಡವೆಂದು ಅಭಿಪ್ರಾಯಪಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು. ಏ.4ರಂದು ಪ್ರತಿ ಜಿಲ್ಲೆಯಲ್ಲಿ ರಾಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತೀಯ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್‌ ತಿಳಿಸಿದರು. ಪ್ರದೀಪ್‌ ಕುಮಾರ್‌ ಕಲ್ಕೂರ, ಕಾರ್ಪೊರೇಟರ್‌ ಶಕೀಲಾ ಕಾವ ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ

ಕೋವಿಡ್ 19 ವಿರುದ್ಧ ಹೋರಾಟ; ಏ.30ರವರೆಗೆ ಲಾಕ್ ಡೌನ್ ಮುಂದುವರಿಕೆ: ಒಡಿಶಾ ಸಿಎಂ ಘೋಷಣೆ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಮೂರು ಮಕ್ಕಳ ದುರ್ಮರಣ

Leopard-climbs-tree

ವಿಡಿಯೋ: ಬೇಟೆಯೊಂದಿಗೆ ಅನಾಯಾಸವಾಗಿ ದೈತ್ಯಗಾತ್ರದ ಮರ ಏರಿದ ಚಿರತೆ, ನೆಟ್ಟಿಗರು ಫುಲ್ ಫಿದಾ

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್

ಲಾಕ್ ಡೌನ್ ಜೊತೆ ನೋ ಮ್ಯಾನ್ ಝೋನ್: ಮಂಗನ ಕಾಯಿಲೆ ತಡೆಗೆ ಮಲೆನಾಡಿನಲ್ಲಿ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಲಾಕ್‌ಡೌನ್‌ ತೆರವಾದರೂ ಮೃಗಾಲಯಗಳು ಲಾಕ್‌?

ರಾಜ್ಯದಲ್ಲಿ ಲಾಕ್‌ಡೌನ್‌ ತೆರವಾದರೂ ಮೃಗಾಲಯಗಳು ಲಾಕ್‌?

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

ಸಚಿವರು, ಶಾಸಕರ ವೇತನದಲ್ಲಿ ಶೇ.30ರಷ್ಟು ಕಡಿತ; ಸುಗ್ರಿವಾಜ್ಞೆ ಮೂಲಕ ಆದೇಶ

state-news-tdy-1

ಮಾಡದ ತಪ್ಪಿಗೆ ಕೂಲಿ ಕಾರ್ಮಿಕರು ಬಂಧಿ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಮೂವರು ಮಕ್ಕಳಿಗೆ ಕೋವಿಡ್-19 ಸೋಂಕು; ರಾಜ್ಯದಲ್ಲಿ 191ಕ್ಕೇರಿದ ಸೋಂಕಿತರ ಸಂಖ್ಯೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

ಲಾಕ್‌ಡೌನ್‌ ಬಿಗಿಗೊಳಿಸಲು ಸಿಎಂ ಸೂಚನೆ

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಆರ್ಥಿಕತೆ ಪುನಶ್ಚೇತನಕ್ಕೆ ಜರ್ಮನಿ ಚಿಂತನೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

ಏ.15ರ ನಂತರ ರೈಲು ಸಂಚಾರ ವರದಿ ಸತ್ಯಕ್ಕೆ ದೂರ: ಭಾರತೀಯ ರೈಲ್ವೆ ಇಲಾಖೆ

09-April-17

ನಗರದಲ್ಲೇ ಸಿದ್ಧಗೊಳ್ಳುತ್ತಿವೆ ವೈದ್ಯರಿಗೆ ಪಿಪಿಇ ಕಿಟ್‌