ಕೊಂಡಂಗೇರಿಯ 1054 ಮಂದಿಗೆ ಸಂಪರ್ಕ ನಿಷೇಧ
Team Udayavani, Mar 21, 2020, 3:04 AM IST
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೇತುಮೊಟ್ಟೆ ಗ್ರಾಮಕ್ಕೆ ಬಂದಿರುವ ವ್ಯಕ್ತಿಯೋರ್ವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ, ಈ ಗ್ರಾಮದ 500 ಮೀಟರ್ ವ್ಯಾಪ್ತಿಯ ಭೌಗೋಳಿಕ ಪ್ರದೇಶವನ್ನು ನಿರ್ಬಂಧಿತ ಪ್ರದೇಶ (ಕಂಟೈನ್‌ಮೆಂಟ್ ಏರಿಯಾ) ಎಂದು ಘೋಷಿಸಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.
ಕೇತುಮೊಟ್ಟೆ ಗ್ರಾಮದಲ್ಲಿ ಒಟ್ಟು 75 ಮನೆಗಳಲ್ಲಿ 304 ಮಂದಿ ವಾಸಿಸುತ್ತಿದ್ದಾರೆ. ಇವರ ಜತೆ ಕೊಂಡಂಗೇರಿ ಗ್ರಾಮದಲ್ಲಿರುವ 247 ಮನೆಗಳಲ್ಲಿ 1,054 ಮಂದಿ ವಾಸಿಸುತ್ತಿದ್ದು, ಈ ಗ್ರಾಮ ವ್ಯಾಪ್ತಿಯ ಭೌಗೋಳಿಕ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ. ಇಲ್ಲಿನ ನಿವಾಸಿಗಳು ಹೊರ ಪ್ರದೇಶಕ್ಕೆ ಹೋಗುವಂತಿಲ್ಲ, ಹೊರಗಿನವರು ಈ ಪ್ರದೇಶಕ್ಕೆ ಆಗಮಿಸುವಂತಿಲ್ಲ. ಈ ಪ್ರದೇಶದಲ್ಲಿ ಕ್ರೀಡೆ, ಸಭೆ, ಸಮಾರಂಭ, ಮದುವೆ ಮುಂತಾದ ಜನ ಗುಂಪು ಸೇರುವಂತಹ ಎಲ್ಲಾ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ.ಕೆ.ಶಿ ಆಪ್ತ ಕೆ.ಜಿ.ಎಫ್ ಬಾಬು ಮನೆ ಮೇಲೆ ಆದಾಯ ತೆರಿಗೆ ದಾಳಿ
ಭಟ್ಕಳ : ರಾಷ್ಟ್ರೀಯ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಚಾಲಕ ಗಂಭೀರ, ಸಂಚಾರ ವ್ಯತ್ಯಯ
ಈಡೇರದ ಬೇಡಿಕೆ : 67ನೇ ದಿನಕ್ಕೆ ಕಾಲಿಟ್ಟ ಮೊಗೇರ ಸಮುದಾಯದ ಧರಣಿ ಸತ್ಯಾಗ್ರಹ
ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು
ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ