ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಿ: ಎಚ್ ಡಿಕೆ ಆಗ್ರಹ
Team Udayavani, Jun 27, 2020, 5:35 PM IST
ಬೆಂಗಳೂರು: ರಾಜ್ಯದ ದೃಶ್ಯ ಮತ್ತು ಮುದ್ರಣದ ಕಾರ್ಯನಿರತ ಪತ್ರಕರ್ತರನ್ನು ಕೋವಿಡ್-19 ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ ಡಿಕೆ, ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೋವಿಡ್-19 ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದಿದ್ದಾರೆ.
ಕೋವಿಡ್-19 ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ ಎಂದು ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.
ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು.
ಕೊರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ.— H D Kumaraswamy (@hd_kumaraswamy) June 27, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…