ಉಡುಪಿಯಲ್ಲಿ ಕೋವಿಡ್ 19 ಸೋಂಕಿಗೆ ಮೊದಲ ಬಲಿ
Team Udayavani, May 17, 2020, 7:30 AM IST
ಸಾಂದರ್ಭಿಕ ಚಿತ್ರ
ಉಡುಪಿ: ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬರು ಮೇ 14ರಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು ಅವರಿಗೆ ಕೋವಿಡ್ 19 ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ಮುಂಬಯಿಯಿಂದ ಬಂದ ಕುಂದಾಪುರ ತಾಲೂಕು ಮೂಲದ 54 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕುಂದಾಪುರದಲ್ಲಿ ಕ್ವಾರಂಟೈನ್ನಲ್ಲಿದ್ದರು. ಮೇ 13ರಂದು ಅವರಿಗೆ ಹೃದಯಾಘಾತವಾದಾಗ ಕುಂದಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು.
ಬಳಿಕ ಆರೋಗ್ಯ ಸ್ಥಿತಿ ಗಂಭೀರ ಇದ್ದ ಕಾರಣ ಸುಧಾರಿತ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರಲಾಯಿತು. ಅವರಿಗೆ ಉಸಿರಾಟದ ಸಮಸ್ಯೆ ಇದ್ದ ಕಾರಣ ಪ್ರತ್ಯೇಕವಾಗಿ ಐಸೊಲೇಶನ್ ವಾರ್ಡ್ಗೆ ದಾಖಲಿಸಲಾಗಿತ್ತು. ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಿದ ಬಳಿಕ ಅವರು ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಅವರು ಮುಂಬಯಿಂದ ಬಂದ ಕಾರಣ ಕೋವಿಡ್ 19 ಸೋಂಕು ಇದೆಯೇ ಎಂದು ಪರೀಕ್ಷಿಸಲು ನಿರ್ಧರಿಸಿದೆವು. ಇದೀಗ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ