ಮತ್ತೆ 38 ಜನರಿಗೆ ಸೋಂಕು: ರಾಜ್ಯದಲ್ಲಿ 350 ದಾಟಿದ ಸೋಂಕಿತರ ಸಂಖ್ಯೆ
Team Udayavani, Apr 17, 2020, 12:43 PM IST
ಬೆಂಗಳೂರು: ಕೋವಿಡ್-19 ವೈರಸ್ ಸೋಂಕು ರಾಜ್ಯದಲ್ಲಿ ಮತ್ತಷ್ಟು ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಮಧ್ಯಾಹ್ನದವರೆಗೂ ಹೊಸದಾಗಿ 38 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಮೂಲಕ ರಾಜ್ಯದ ಸೋಂಕಿತರ ಸಂಖ್ಯೆ 352 ಕ್ಕೆ ಏರಿಕೆಯಾಗಿದೆ.
ಇಂದು ಬಳ್ಳಾರಿಯಲ್ಲಿ 7, ಬೆಂಗಳೂರು 9, ಮೈಸೂರಲ್ಲಿ 12, ಮಂಡ್ಯ, ಚಿಕ್ಕಬಳ್ಳಾಪುರ ತಲಾ 3, ವಿಜಯಪುರ 2, ಬೀದರ್ ಹಾಗೂ ದಕ್ಷಿಣ ಕನ್ನಡ ತಲಾ ಒಂದು ಕೋವಿಡ್-19 ಸೋಂಕು ಪ್ರಕರಣ ದೃಢಪಟ್ಟಿದೆ.
ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಸೋಂಕಿತ ವ್ಯಕ್ತಿಯ ನೇರ ಸಂಪರ್ಕದಿಂದಲೇ ಕೋವಿಡ್-19 ಸೋಂಕು ತಗುಲಿದೆ.
ಇಂದಿನ 38 ಪ್ರಕರಣಗಳ ಪೈಕಿ ಮೂವರು 10 ವರ್ಷ ಕೆಳಗಿನ ಮಕ್ಕಳಿದ್ದರೆ, ಇಬ್ಬರು 60 ವರ್ಷಕ್ಕಿಂತ ಮೇಲ್ಪಟ್ಟ ಸೋಂಕಿತರಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಗುರುವಾರ 36 ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಶುಕ್ರವಾರ ಇದುವರೆಗೆ 38 ಹೊಸ ಪ್ರಕರಣಗಳು ದೃಢವಾಗಿದೆ.
ರಾಜ್ಯದಲ್ಲಿ ಒಟ್ಟು 353 ಸೋಂಕು ಪ್ರಕರಣಗಳಿದ್ದು, ಅದರಲ್ಲಿ 23 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 82 ಪ್ರಕರಣಗಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ