ವಿಕಾಸಸೌಧದ ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢ
Team Udayavani, Jun 16, 2020, 5:12 PM IST
ಬೆಂಗಳೂರು: ವಿಕಾಸಸೌಧದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ, ಹೀಗಾಗಿ ಈಕೆ ಕೆಲಸ ಮಾಡುವ ಆಹಾರ ಇಲಾಖೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ವಿಕಾಸ ಸೌಧ ನೆಲಮಹಡಿಯಲ್ಲಿರುವ ಆಹಾರ ಇಲಾಖೆಯ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು.
ಮಹಿಳಾ ಸಿಬ್ಬಂದಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ವಿಕಾಸಸೌಧ ಹಾಗೂ ವಿಧಾನಸೌಧದ ನೌಕರರು ಆತಂಕಕ್ಕೊಳಗಾಗಿದ್ದಾರೆ. ಆಹಾರ ಇಲಾಖೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.