ಎಕ್ಸ್‌ ರೇ ಯಿಂದಲೇ ಕೋವಿಡ್‌ ಪತ್ತೆ: ಕನ್ನಡಿಗ ಸಂಶೋಧಕರ ಮಹತ್ವದ ಸಾಧನೆ


Team Udayavani, Jul 7, 2020, 4:21 PM IST

ಎಕ್ಸ್‌ ರೇ ಯಿಂದಲೇ ಕೋವಿಡ್‌ ಪತ್ತೆ: ಕನ್ನಡಿಗ ಸಂಶೋಧಕರ ಮಹತ್ವದ ಸಾಧನೆ

ಬೆಂಗಳೂರು: ಇದುವರೆಗೂ ವಿದೇಶಗಳಿಂದ ಮಾತ್ರ ಆಮದು ಮಾಡಿಕೊಂಡು ಕೋವಿಡ್- 19 ಸೋಂಕನ್ನು ಹತ್ತಿಕ್ಕಲು ಉಪಯೋಗಿಸಲಾಗುತ್ತಿದ್ದ ಆರು ಪ್ರಮುಖ ಉತ್ಪನ್ನಗಳನ್ನು ಇದೀಗ ದೇಶಿಯವಾಗಿಯೇ ಬೆಂಗಳೂರಿನ, ಅದರಲ್ಲೂ ಕನ್ನಡದ ವಿಜ್ಞಾನಿಗಳು ಮತ್ತು ಸಂಶೋಧಕರು ಅಭಿವೃದ್ಧಿಪಡಿಸಿದ್ದಾರೆ. ಇದರೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ರಾಜ್ಯಕ್ಕೆ ಮಹತ್ವದ ಮುನ್ನಡೆ ಸಿಕ್ಕಿದೆ.

ರಾಜ್ಯದ ಐಟಿ- ಬಿಟಿ ಇಲಾಖೆ ವ್ಯಾಪ್ತಿಯ ಬೆಂಗಳೂರು ಬಯೋ ಇನ್ನೋವೇಷನ್‌ ಕೇಂದ್ರದ ಅಡಿಯಲ್ಲಿ ಸಂಶೋಧನೆಯಲ್ಲಿ ನಿರತವಾಗಿರುವ ವಿವಿಧ ಸ್ಟಾರ್ಟ್‌ಅಪ್‌ ಗಳು ಈ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದರಿಂದಾಗಿ ನಾವು ಬಹುತೇಕ ವಿದೇಶಿ ಅವಲಂಬನೆಯನ್ನು ತಗ್ಗಿಸಬಹುದಾಗಿದೆ. ಜತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಪರಿಕಲ್ಪನೆಯ ಸ್ಫೂರ್ತಿಯಿಂದ ಇವೆಲ್ಲ ಸಿದ್ಧವಾಗಿವೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ತಿಳಿಸಿದರು.

ಈ ಆರೂ ಉತ್ಪನ್ನಗಳನ್ನು ಬಿಡುಗಡೆ ಮಾಡಿದರಲ್ಲದೆ, ಇವುಗಳಿಗೆ ಐಸಿಎಂಆರ್ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಮಾನ್ಯತೆ ಸಿಕ್ಕಿದೆ ಎಂದರು. ಈ ಕ್ಷಣದಿಂದಲೇ ಇವೆಲ್ಲವನ್ನು ಎಲ್ಲರೂ ಬಳಸಬಹುದು, ಖರೀದಿ ಮಾಡಬಹುದು. ಜತೆಗೆ ಸರಕಾರವು ಈ ಉತ್ಪನ್ನಗಳಿಗೆ ಎಲ್ಲ ರೀತಿಯ ಪ್ರೋತ್ಸಾಹ ನೀಡಲಿದೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಅತ್ಯಂತ ಅಲ್ಪಾವಧಿಯಲ್ಲಿಯೇ ನಮ್ಮ ಯುವ ಸಂಶೋಧಕರು, ವಿಜ್ಞಾನಿಗಳು ಈ ಉತ್ಪನ್ನಗಳನ್ನು ತಯಾರಿಸಿದ್ದಾರೆ. ಇವು ವಿದೇಶಗಳಿಂದ ನಾವು ಆಮದು ಮಾಡಿಕೊಳ್ಳುತ್ತಿದ್ದ ಉತ್ಪನ್ನಗಳಿಗಿಂತ ಉತ್ತಮ ಗುಣಮಟ್ಟದವು, ಮತ್ತೂ ಅವುಗಳಿಗಿಂತ ಮುಂದುವರೆದ ತಂತ್ರಜ್ಞಾನವನ್ನು ಹೊಂದಿವೆ. ಕರ್ನಾಟಕ ಮಾತ್ರವಲ್ಲದೆ, ಭಾರತ ನಡೆಸುತ್ತಿರುವ ಕೋವಿಡ್ ವಿರುದ್ಧದ ಹೋರಾಟಕ್ಕೆ ಇದರಿಂದ ದೊಡ್ಡ ಬಲ ಬಂದಂತೆ ಆಗಿದೆ. ಇದಕ್ಕಾಗಿ ನಾನು ಸಂಬಂಧಪಟ್ಟ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಡಿಸಿಎಂ ಹೇಳಿದರು.

ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಮಣರೆಡ್ಡಿ, ಬೆಂಗಳೂರು ಬಯೊ ಇನ್ನೊವೇಷನ್‌ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಡಾ.ಜಿತೇಂದ್ರ ಕುಮಾರ್‌, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ್‌ ಮತ್ತಿತರರು ಇದ್ದರು.

1.ಶೀಲೆಡೆಕ್ಸ್ 24
ಕೋವಿಡ್ 19 ಅನ್ನು ಪರಿಣಾಮಕಾರಿಯಾಗಿ ನಿರ್ಮೂಲನೆ ಮಾಡುವ ಸಾಧನವಿದು. ‌ಇದು ಮೈಕ್ರೋವೇವ್ ಬಾಕ್ಸ್ ರೀತಿಯಲ್ಲಿ ವಿವಿಧ ಗಾತ್ರಗಳಲ್ಲಿ ಇರುತ್ತದೆ. (ಒಂದು ಫ್ರಿಜ್ ಗಾತ್ರದಲ್ಲೂ ಇದೆ) ಇದರಲ್ಲಿ ಅಲ್ಟ್ರಾವೈಲೇಟ್ ರೇಸ್ ಇರುತ್ತದೆ, ಈ ರೇಸ್ ಬಿದ್ದಾಗ ವೈರಸ್ ಕೇವಲ 15 ಸೆಕೆಂಡುಗಳಲ್ಲಿ ಸಾಯುತ್ತದೆ. ಈ ಉತ್ಪನ್ನವನ್ನು  ಬಯೋ ಫೀ ಕಂಪನಿಯ ರವಿಕುಮಾರ್ ಅವರು ಸಂಶೋಧಿಸಿ ತಯಾರಿಸಿದ್ದಾರೆ.

2. ಫ್ಲೋರೋಸೆನ್ಸ್ ಪ್ರೋಬ್ಸ್
ಇದು ಕೋವಿಡ್ ಕಿಟ್ ನಲ್ಲಿ ಇರಬಹುದಾದ ಪ್ರಮುಖ ಅಂಗ. ಇದು ಇಲ್ಲದಿದ್ದರೆ ವೈರಸ್ ಅನ್ನು ಪತ್ತೆ ಮಾಡಲು ಸಾಧ್ಯವಿಲ್ಲ. ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಫ್ಲೋರೋಸೆನ್ಸ್ ಪ್ರೋಬ್ಸ್ ಅನ್ನು ಬಳಸಲಾಗುತ್ತದೆ. ಇದನ್ನು ವಿಎನ್ ಐಆರ್ ಸಂಸ್ಥೆಯ ಡಾ. ಗೋವಿಂದರಾಜು ಮತ್ತು ಡಾ. ಮೆಹರ್ ಪ್ರಕಾಶ್ ಅಭಿವೃದ್ಧಿಪಡಿಸಿದ್ದಾರೆ.

3. ಭ್ರೂಣ ನಿಗಾ ಯಂತ್ರ (ಫೀಟೆಲ್ ಮಾನಿಟರಿಂಗ್ ಡಿವೈಸ್)
ಕೋವಿಡ್ ಇದ್ದಾಗ ಗರ್ಭಿಣಿಯರು ನೇರವಾಗಿ ವೈದ್ಯರನ್ನು ಭೇಟಿಯಾಗಲು ಸಾಧ್ಯವಿಲ್ಲ. ಪಟ್ಟಿಯಾಕಾರಾದ ಈ ಉಪಕರಣದ ಮೂಲಕ ಭ್ರೂಣದ ಹೃದಯ ಬಡಿತವನ್ನೂ ವೈದ್ಯರು ತಿಳಿಯಬಹುದು. ಗರ್ಭಿಣಿ ಮಹಿಳೆ ಈ ಉಪಕರಣವನ್ನು ತಮ್ಮ ಹೊಟ್ಟೆ ಮೇಲಿಟ್ಟುಕೊಂಡರೆ ವೈದ್ಯರಿಗೆ ಎಲ್ಲ ಮಾಹಿತಿಯೂ ತಿಳಿಯುತ್ತದೆ. ಜೆನಿತ್ರೀ ಕಂಪನಿಯ ಡಾ. ಅರುಣ್ ಅಗರವಾಲ್ ಇದನ್ನು ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ.

4. ವಿಟಿಎಂ (ವೈರಲ್ ಟ್ರಾನ್ಸ್ ಪೋರ್ಟ್ ಮೀಡಿಯಾ)
’ಡೇಕೊಂತೋ’ ಎಂಬ ಹೆಸರಿನ ಈ ಉತ್ಪನ್ನವನ್ನು ಡಿನೋವೋ ಬಯೋಲ್ಯಾಬ್ಸ್ ನ ಐಬಿಎಬಿಯ ಮಂಜುನಾಥ್ ಹಾಗೂ ದಿನೇಶ್ ಅವರು ಸಂಶೋಧಿಸಿ ತಯಾರಿಸಿದ್ದಾರೆ.  ಇದು ಸದ್ಯದ ಸ್ಥಿತಿಯಲ್ಲಿ ಅತ್ಯಂತ ಮಹತ್ವದ ಸಂಶೋಧನೆಯಾಗಿದೆ. ಸೋಂಕಿತರಿಂದ ಗಂಟಲು ದ್ರವ ಮತ್ತಿತರೆ ಸ್ಯಾಂಪಲ್‌ ಗಳನ್ನು ಪಡೆದು ಟಿಸ್ಟಿಂಗ್ ಲ್ಯಾಬಿಗೆ ಕಳಿಸುವ ಪ್ರಕ್ರಿಯೆಯಲ್ಲಿ ಈ ಉಪಕರಣ ಅತ್ಯಗತ್ಯವಾಗಿ ಬೇಕಿತ್ತು. ಏಕೆಂದರೆ, ಇದು ಜೀವಂತ ವೈರಸ್ ಅನ್ನು ಸಾಗಿಸುತ್ತದೆ. ಜೀವಂತ ವೈರಸ್ ಅನ್ನು ಒಂದು ಕಡೆಯಿಂದ ಇನ್ನೊಂದಡೆಗೆ ಸಾಗಿಸುವುದು ಅತ್ಯಂತ ಸವಾಲಿನದ್ದು, ಅಪಾಯಕಾರಿ ಕೂಡ. ಈ ಉಪಕರಣವನ್ನು ವಿದೇಶಗಳಿಂದ ದುಬಾರಿ ಬೆಲೆ ತೆತ್ತು ಆಮದು ಮಾಡಿಕೊಳ್ಳಬೇಕಾಗಿತ್ತು.

5.ಕೋವ್-ಆಸ್ತ್ರ
ಈ ಸಂಶೋಧನೆ ಬಹಳ ವಿಶೇಷವಾಗಿದೆ. ಇದುವರೆಗೂ ನಾವು ಗಂಟಲು ದ್ರವ ಮತ್ತಿತರ ಮಾದರಿಗಳನ್ನು ಪಡೆದು ಕೋವಿಡ್ ಪತ್ತೆ ಮಾಡುತ್ತಿದ್ದೆವು. ಈಗ ಕೋವ್ – ಅಸ್ತ್ರದ ಮೂಲಕ ಕೇವಲ ರೋಗಿಯ ಎದೆಯ ಭಾಗದ ಎಕ್ಸ್ ರೇ ತೆಗೆದು ವೈರಸ್ ಇದೆಯೇ ಇಲ್ಲವೇ ಎಂಬುದನ್ನು ಪತ್ತೆ ಮಾಡಬಹುದಾಗಿದೆ. ಸುಮಾರು 4 ರಿಂದ 5 ಸಾವಿರ ರೂಪಾಯಿ ವೆಚ್ಚವನ್ನು ಕಡಿಮೆ ಮಾಡಿ ಕೇವಲ 150ರಿಂದ 200 ರೂಪಾಯಿ ಎಕ್ಸ್ ರೇ ಯಿಂದ ಸೋಂಕನ್ನು ಪತ್ತೆ ಮಾಡಬಹುದು. ಇದನ್ನು ಅಯಿಂದ್ರ ಕಂಪನಿಯ ಆದರ್ಶ್ ನಟರಾಜನ್ ಅವರು ಇದನ್ನು ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ.

6. ಆಂಟಿ ಮೈಕ್ರೋಬಿಯಲ್ ಫೇಸ್ ವಾಶ್
ಮುಖದ ಮೇಲೆ ಕೂರುವ ಕೋವಿಡ್ ವೈರಸ್ ಜತೆಗೆ ಬೇರೆ ಯಾವುದೇ ವೈರಾಣುವನ್ನು ಸೆಕೆಂಡುಗಳಲ್ಲಿ ನಾಶ ಮಾಡುವ ಫೇಸ್ ವಾಶ್ ಇದಾಗಿದೆ. ಇದನ್ನು ಗಿಡಮೂಲಿಕೆಗಳಿಂದ ತಯಾರಿಸಲಾಗಿದೆ. ಇದನ್ನು ಆಟ್ರಿಮ್ಡ್ ಕಂಪನಿಯ ಡಾ. ಲತಾ ಡ್ಯಾಮಲ್ ಅವರು ಸಂಶೋಧಿಸಿ ಅಭಿವೃದ್ಧಿಪಡಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.