ಕೋವಿಡ್ ಸೋಂಕಿತ ವಿದ್ಯಾರ್ಥಿಗೆ ಪರೀಕ್ಷೆಗೆ ನಿರ್ಬಂಧ, ಮತ್ತೊಮ್ಮೆ ಅವಕಾಶ
Team Udayavani, Dec 8, 2021, 9:00 PM IST
ಬೆಂಗಳೂರು: ಕೋವಿಡ್ ಸೋಂಕಿತ ಹಾಗೂ ಇನ್ನಿತರ ಗಂಭೀರ ಅರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಇಂದಿನಿಂದ (ಡಿ.9) ಆರಂಭವಾಗುತ್ತಿರುವ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆಗೆ ನಿರ್ಬಂಧ ಹೇರಲಾಗಿದ್ದು, ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಮಾಡಿಕೊಡುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಮಧ್ಯ ವಾರ್ಷಿಕ ಪರೀಕ್ಷೆ ನಡೆಯುತ್ತಿದೆ. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಿದೆ. ಹೀಗಾಗಿ, ಕೊರೊನಾ ಸೋಂಕು ಕಾಣಿಸಿಕೊಂಡಿರುವ ವಿದ್ಯಾರ್ಥಿಗಳು ಕಾಲೇಜು ಗಮನಕ್ಕೆ ತಂದು ಕ್ವಾರಂಟೈನ್ನಲ್ಲಿರಬೇಕು. ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೊಮ್ಮೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಪಿಯು ಇಲಾಖೆ ಪರೀಕ್ಷಾ ಜಂಟಿ ನಿರ್ದೇಶಕಿ ಶೈಲಜಾ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸಮಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲು ಅನುಸರಿಸಿದ್ದ ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಪ್ರತಿ ದಿನ ಪರೀಕ್ಷಾ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡುವುದು, ವಿದ್ಯಾರ್ಥಿಗಳು ಗುಂಪು ಸೇರದಂತೆ ನೋಡಿಕೊಳ್ಳುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಕೋವಿಡ್ ಮತ್ತು ಗಂಭೀರ ಆರೋಗ್ಯ ಸಮಸ್ಯೆ ಇರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ. ಯಾವ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂಬುದನ್ನು ಇನ್ನಷ್ಟೇ ನಿರ್ಧರಿಸಬೇಕಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು