2021ರ ಆರಂಭದಲ್ಲೇ ರಾಜ್ಯದ ಜನರಿಗೆ ಸಿಗಲಿದೆ ಕೋವಿಡ್ ಲಸಿಕೆ: ಸಚಿವ ಸುಧಾಕರ್

Team Udayavani, Oct 27, 2020, 1:35 PM IST

2021ರ ಆರಂಭದಲ್ಲೇ ರಾಜ್ಯದ ಜನರಿಗೆ ಸಿಗಲಿದೆ ಕೋವಿಡ್ ಲಸಿಕೆ: ಸಚಿವ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲೇ ಕೋವಿಡ್ -19 ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ ಎಂಡಿ ಗಗನ್ ದೀಪ್ ಸೇರಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅಕ್ಸಫರ್ಡ್ ವಿವಿ ಲಸಿಕೆ ಪ್ರಯೋಗ ಮೊದಲ ಹಂತ ಮುಕ್ತಾಯವಾಗಿದ್ದು, 2021 ಆರಂಭದಲ್ಲೇ ರಾಜ್ಯದ ಜನತೆಗೆ ಕೋವಿಡ್ ಲಸಿಕೆ ಸಿಗಲಿದೆ ಎಂದರು.

ಆಕ್ಸಫರ್ಡ್ ವಿವಿ ಅಸ್ಟ್ರಾಜನಿಕಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಸಂಶೋಧನೆ ಮಾಡುತ್ತಿದ್ದಾರೆ. ಇಂದು ಅವರ ಜೊತೆಗೆ ನಡೆಸಿದ ಸಮಾಲೋಚನೆ ತೃಪ್ತಿದಾಯಕವಾಗಿದೆ. ಆದಷ್ಟು ಬೇಗ ಈ ಲಸಿಕೆ ಬರುವ ವಿಶ್ವಾಸ ಇದೆ. 2021ರ ಆರಂಭದಲ್ಲಿಯೇ ಈ ರೋಗಕ್ಕೆ ಲಸಿಕೆ ಬರುವ ಸಾಧ್ಯತೆ ಇದೆ ಎಂದರು.

ಭಾರತದಲ್ಲಿ 1600 ಜನರಿಗೆ ಲಸಿಕೆ ನೀಡಿ ಪ್ರಯೋಗ ಮಾಡಲಾಗುತ್ತಿದೆ. ಐದು ವರ್ಷದವರಿಂದ ಹಿಡಿದು ವಯೋವೃದ್ದರವರೆಗೂ ಎಲ್ಲ ವಯೋಮಾನದವರಿಗೆ ಲಸಿಕೆ ನೀಡುವ ಪ್ರಯೋಗ ಮಾಡಲಾಗುತ್ತಿದೆ. ಲಸಿಕೆ ಕೊಟ್ಟ 28 ದಿನದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುವ ಸಾಧ್ಯತೆ ಇದೆ. ಎರಡು ಮತ್ತು ಮೂರನೇ ಹಂತದಲ್ಲಿ ಮತ್ತೊಂದು ರೀತಿ ನೀಡಿ ಪ್ರಯೋಗ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ:ಕೋವಿಡ್‌ ಹಿನ್ನೆಲೆ: ಧಾರವಾಡ ಬಂಡೆಮ್ಮ ದೇವಸ್ಥಾನದಲ್ಲಿ ಕೃತಕ ಆನೆ ಬಳಸಿ ಜಂಬೂ ಸವಾರಿ!

ಯಾವುದೇ ರೋಗಕ್ಕೆ ಲಸಿಕೆ ಕಂಡು ಹಿಡಿಯಲು ಕನಿಷ್ಠ 5-6 ವರ್ಷ ಬೇಕಾಗುತ್ತದೆ. ಆದರೆ, ನಮ್ಮ ದೇಶದಲ್ಲಿಏಳೆಂಟು ತಿಂಗಳಲ್ಲಿ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಮಾಡಲಾಗುತ್ತಿದೆ. ಹೈದರಾಬಾದ್ ಸಂಸ್ಥೆಯೂ ಪ್ರಯೋಗ ಮಾಡುತ್ತಿದೆ. ಅವರ ಜೊತೆಯೂ ಚರ್ಚೆ ಮಾಡುತ್ತೇವೆ ಎಂದರು.

ಲಸಿಕೆಗೆ ದರ ನಿಗದಿ ಮಾಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಇಲ್ಲ. ಇನ್ನೂ ಪ್ರಯೋಗದ ಹಂತದಲ್ಲಿದೆ.  ಸಂಸ್ಥೆಯವರು ಇದರಲ್ಲಿ ಯಾವುದೇ ಲಾಭ ಪಡೆಯುವುದಿಲ್ಲ. ಲಸಿಕೆಗೆ ತಗಲುವ ವೆಚ್ಚವನ್ನು ಮಾತ್ರ ಪಡೆಯುವುದಾಗಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಮಾತನಾಡಿ ದರ ನಿಗದಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ರಾಜ್ಯ ಸರ್ಕಾರ ಕೋವಿಡ್ ಚಿಕಿತ್ಸೆಗೆ ಇದುವರೆಗೂ ಯಾವುದೇ ದರ ವಿಧಿಸಿಲ್ಲ. ಲಸಿಕೆ ಬಂದ ಮೇಲೆ ಮುಂದಿನ ತೀರ್ಮಾನ ಮಾಡಲಾಗುವುದು. ಲಸಿಕೆ ಯಾವಾಗ ಸಿಗುತ್ತದೆ ಎನ್ನುವ ಬಗ್ಗೆ ಸ್ಪಷ್ಟವಾಗಿ ಹೇಳಲಾಗುವುದಿಲ್ಲ ಎಂದು ಸುಧಾಕರ್ ಹೇಳಿದರು.

ಕೋವಿಡ್ ವಾರಿಯರ್ಸ್ ಗೆ ಮೊದಲು ಚಿಕಿತ್ಸೆ: ಎಪಿಡಾಮಿಕ್ ಟೆಕ್ನಿಕ್ ಸಮಿತಿ ರಚನೆ ಮಾಡಲು ತೀರ್ಮಾನಿಸಲಾಗಿದೆ. ಕೋವಿಡ್ ವಾರಿಯರ್ಸ್ ಮೊದಲು ಈ ಚಿಕಿತ್ಸೆಗೆ ಒಳ ಪಡುತ್ತಾರೆ. ಯಾರಿಗೆ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆಯೋ ಅವರಿಗೆ ಮೊದಲು ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.