ಫೇಸ್ಬುಕ್ನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿ ಬಂಧನ
Team Udayavani, Mar 1, 2022, 9:15 PM IST
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪರಿಚಯವಾದ ಮಹಿಳೆಯರ ಬಗ್ಗೆಯೇ ಅಶ್ಲೀಲವಾಗಿ ಪೋಸ್ಟ್ ಮಾಡುತ್ತಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗಲಗುಂಟೆ ನಿವಾಸಿ ಚಂದ್ರಶೇಖರ (35) ಬಂಧಿತ. ಫೇಸ್ಬುಕ್ನಲ್ಲಿ ಪರಿಚಯವಾಗುವ ಮಹಿಳೆಯರ ಜತೆ ಚಾಟಿಂಗ್ ಆರಂಭಿಸುತ್ತಿದ್ದ ಆರೋಪಿ, ಅವರ ಮೊಬೈಲ್ ಪಡೆದುಕೊಳ್ಳುತ್ತಿದ್ದ. ನಂತರ ಅವರೊದಿಗೆ ಆತ್ಮೀಯತೆ ಬೆಳೆಯುತ್ತಿದ್ದಂತೆ ಅಶ್ಲೀಲವಾಗಿ ಮಾತನಾಡುತ್ತಿದ್ದ. ಅದಕ್ಕೆ ಬೇಸರಗೊಂಡ ಮಹಿಳೆಯರು ಆತನನ್ನು ದೂರ ಇಟ್ಟಿದ್ದರು. ಅದರಿಂದ ಆಕ್ರೋಶಗೊಂಡ ಆರೋಪಿ ಮಹಿಳೆಯರ ಮೊಬೈಲ್ ನಂಬರ್ ಮತ್ತು ಪೋಟೋ ಹಾಕಿ ಕೆಳಗಡೆ ಅಶ್ಲೀಲವಾಗಿ ಬರೆಯುತ್ತಿದ್ದ. ಕಾಲ್ ಗರ್ಲ್ಸ್ ಎಂದೆಲ್ಲ ಕೆಟ್ಟದಾಗಿ ಬರೆಯುತ್ತಿದ್ದ. ನಂತರ ಆ ಮಹಿಳೆಯರಿಗೆ ಕರೆ ಮಾಡಿ, ತಾನು ಹೇಳಿದಂತೆ ಕೇಳದಿದ್ದರೆ ಫೋಟೋ ತೆಗೆಯುವುದಿಲ್ಲ ಎಂದು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಇತ್ತೀಚೆಗೆ ಆತನ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಚಂದ್ರಶೇಖರ್ ಯಾವುದೇ ಕೆಲಸಕ್ಕೆ ಹೋಗದೆ ದುಶ್ಚಟಗಳ ವ್ಯಸನಿಯಾಗಿ ಸುತ್ತಾಡುತ್ತಿದ್ದಾನೆ. ಜತೆಗೆ ಮಹಿಳೆಯರಿಗೆ ಕಿರುಕುಳ ಕೊಡುವುದನ್ನು ಕಾಯಕ ಮಾಡಿಕೊಡಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ