ಕಾರ್ಯಕ್ರಮಕ್ಕೆ ಸಿಎಂ ಅನುಮತಿ ಕೊಟ್ಟಿದ್ದಾರೆ, ಪೊಲೀಸರು ಅಡಚಣೆ ಮಾಡುವಂತಿಲ್ಲ: ಡಿಕೆಶಿ

Team Udayavani, Jul 1, 2020, 1:51 PM IST

ಕಾರ್ಯಕ್ರಮಕ್ಕೆ ಸಿಎಂ ಅನುಮತಿ ಕೊಟ್ಟಿದ್ದಾರೆ, ಪೊಲೀಸರು ಅಡಚಣೆ ಮಾಡುವಂತಿಲ್ಲ: ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಪ್ರತಿಜ್ಞಾಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದು, ಪೊಲೀಸರು ಈ ಕಾರ್ಯಕ್ರಮಕ್ಕೆ ಅಡ್ಡಿ ಮಾಡುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ಮಾಧ್ಯಮಗಳಿಗೆ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನಾಳೆ ನಡೆಯಲಿರುವ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಕೆಲವು ಕಡೆಗಳಲ್ಲಿ ಪೊಲೀಸರು ತೊಂದರೆ ನೀಡುತ್ತಿದ್ದಾರೆ ಎಂಬ ಕರೆಗಳು ಬಂದಿವೆ. ಮುಖ್ಯಮಂತ್ರಿಗಳೇ ಕಾರ್ಯಕ್ರಮ ಮಾಡಿಕೊಳ್ಳಿ ಎಂದು ಅನುಮತಿ ಕೊಟ್ಟಿದ್ದಾರೆ. ನಾನು ಈ ಸಂಬಂಧ ಗೃಹ ಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರ ಜತೆ ಮಾತನಾಡಿದ್ದೇನೆ. ಯಾರು ಧೃತಿಗೆಡುವ ಅಗತ್ಯವಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿಗಳು ಹೇಳಿಕೆಯಲ್ಲಿ ಅನುಮತಿ ನೀಡಿದ್ದು, ಈ ಕಾರ್ಯಕ್ರಮಕ್ಕೆ ಲಿಖಿತ ಅನುಮತಿ ಬೇಕಿಲ್ಲ. ನಿಮ್ಮ ನಿಮ್ಮ ಪ್ರದೇಶಗಳಲ್ಲೇ ಇದ್ದು ಸುದ್ದಿ ವಾಹಿನಿಗಳಲ್ಲಿ ಬರುವ ಕಾರ್ಯಕ್ರಮ ನೇರ ಪ್ರಸಾರ ವೀಕ್ಷಿಸಿ. ನಾನು ಆಮಂತ್ರಣ ನೀಡಿರುವವರನ್ನು ಬಿಟ್ಟು ಇನ್ಯಾರು ಇಲ್ಲಿಗೆ ಬರಬೇಡಿ. ಕಟ್ಟಡ ನಿರ್ವಹಣೆಯನ್ನು ಪೊಲೀಸರು ಹಾಗೂ ಸೇವಾದಳದವರಿಗೆ ವಹಿಸಿದ್ದು, ಅನಗತ್ಯವಾಗಿ ಬಂದು ತೊಂದರೆ ಅನುಭವಿಸುವುದು ಬೇಡ ಎಂದರು.

ನಮ್ಮ ಜತೆ ನೀವು ಟಿವಿ ಹಾಗೂ ಜೂಮ್ ಮೂಲಕ ನಿಮ್ಮ ಪ್ರದೇಶಗಳಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ತಾವೆಲ್ಲಾ ಸಹಕಾರ ನೀಡಬೇಕು. ಕಾರ್ಯಕರ್ತರು ಹಗಲು ರಾತ್ರಿ ದುಡಿಯುತ್ತಿದ್ದಾರೆ. ಎಲ್ಲಾ ಮಠ ಹಾಗೂ ಸಮುದಾಯದ ಗುರು ಹಿರಿಯರು ಆಶೀರ್ವಾದ ಮಾಡಬೇಕು ಎಂದು ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ. ಜನರು ಕೂಡ ನಾವು ನೀಡಿರುವ ಸಂಖ್ಯೆಗೆ ಮಿಸ್ ಕಾಲ್ ನೀಡಿ ಆ ಮೂಲಕ ಆಶೀರ್ವಾದ ನೀಡಬಹುದು.

ನಾವು ಇಲ್ಲಿಗೆ ಬರುವವರಿಗೆ ಪಾಸ್ ನೀಡಿದ್ದು, ನನ್ನ ಮನೆಯಿಂದ ಇಬ್ಬರು ಮಾತ್ರ ಬರುತ್ತಿದ್ದೇವೆ. ಕೆಲವು ನಾಯಕರು, ಹೊರ ರಾಜ್ಯದಿಂದ ನಾಲ್ಕೈದು ಜನ ಹಾಗೂ ಮಾಧ್ಯಮದವರಿಗೆ ಮಾತ್ರ ಈ ಪಾಸ್ ನೀಡಲಾಗಿದೆ. ಅವರು ಮಾತ್ರ ಇಲ್ಲಿಗೆ ಬರಲು ಅವಕಾಶವಿದೆ. ಹೀಗಾಗಿ ಹೆಚ್ಚಿನ ಜನ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.