ಬಹಿರಂಗ ಚರ್ಚೆಗೆ ಬರಲು ಸಚಿವ ಈಶ್ವರಪ್ಪಗೆ ಡಿ ಕೆ ಶಿವಕುಮಾರ್ ಸವಾಲು

Team Udayavani, Apr 27, 2020, 2:40 PM IST

ಬಹಿರಂಗ ಚರ್ಚೆಗೆ ಬರಲು ಸಚಿವ ಈಶ್ವರಪ್ಪಗೆ ಡಿ ಕೆ ಶಿವಕುಮಾರ್ ಸವಾಲು

ಬೆಂಗಳೂರು: ನರೇಗಾ ಯೋಜನೆ ಹಾಗೂ ಅದರ ವಿಚಾರದಲ್ಲಿ ನಾನು ಏನೆಲ್ಲಾ ಮಾಡಿದ್ದೇನೆ ಎಂಬುದರ ಕುರಿತು ಬಹಿರಂಗ ಚರ್ಚೆ ನಡೆಸಲು ಸಿದ್ಧನಿದ್ದೇನೆ. ಈಶ್ವರಪ್ಪನವರು ಯಾವ ಸಮಯ ನಿಗದಿ ಮಾಡುತ್ತಾರೋ ಆಗ ನಾನು ಎಲ್ಲ ಮಾಧ್ಯಮಗಳಲ್ಲಿ ಚರ್ಚೆಯಲ್ಲಿ ಭಾಗವಹಿಸಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಕೋವಿಡ್ ಕುರಿತ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಭೆಗೂ ಮುನ್ನ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಹಾಗೂ ಆರೋಗ್ಯ ಸಿಬ್ಬಂದಿಗೆ ಸಾಂಕೇತಿಕವಾಗಿ ಸುರಕ್ಷತಾ ಕಿಟ್ ವಿತರಣೆ ಮಾಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಮ್ಮ ವಿರುದ್ಧ ಮಾಡಿರುವ ಟೀಕೆಗೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್, ‘ಈಶ್ವರಪ್ಪನಿಗೆ ಶಕ್ತಿ ಇದ್ದರೆ, ಮಾಹಿತಿ ಇದ್ದರೆ ನಾನು ಎಲ್ಲಿ ಮಲಗಿದ್ದೇನೆ ಎಂದು ಹೇಳಲಿ. ನಾನು ಈ ಹಿಂದೆ ಅವರು ಮಲಗಿದ್ದಾರೆ ಎಂದು ಹೇಳಿದ್ದರ ಅರ್ಥವನ್ನು ಗ್ರಹಿಸಲು ಅವರಿಗೆ ಸಾಧ್ಯವಾಗಿಲ್ಲ. ಈಶ್ವರಪ್ಪನವರೇ ನರೇಗಾ ವಿಚಾರದಲ್ಲಿ ಬೇಕಾದಷ್ಟು ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆದೇಶಿಸಿದ್ದಾರೆ. ನರೇಗಾ ಯೋಜನೆಗೆ ಎಷ್ಟು ಶಕ್ತಿ ಇದೆ ಅಂತಾ ಈಶ್ವರಪ್ಪನವರಿಗೆ ಗೊತ್ತಿಲ್ಲ. ಈ ಯೋಜನೆಯನ್ನು ದೇಶದಲ್ಲೇ ಹೆಚ್ಚು ಪರಿಣಾಮಕಾರಿಯಾಗಿ ಕನಕಪುರದಲ್ಲಿ ಬಳಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವೇ ನನಗೆ ಪ್ರಶಸ್ತಿ ನೀಡಿದೆ. ಈ ಬಗ್ಗೆ ಈಶ್ವರಪ್ಪನವರಿಗೆ ಗೊತ್ತಿಲ್ಲ ಎಂದು ಛೇಡಿಸಿದರು.

ಯುಪಿಎ ಸರ್ಕಾರ ನರೇಗಾ ಮೂಲಕ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಈ ಯೋಜನೆಯನ್ನು ಒಂದು ಕುಟುಂಬ ಹೇಗೆ ಬಳಸಿಕೊಳ್ಳಬಹುದು, ವೈಯಕ್ತಿಕವಾಗಿ ಈ ಯೋಜನೆ ಕುಟುಂಬಗಳಿಗೆ ಹೇಗೆ ಆಸರೆಯಾಗುತ್ತದೆ ಎಂದು ನಾನು ಹಿಂದೆ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದೆ. ಈಶ್ವರಪ್ಪನವರು ಈ ವಿಚಾರವಾಗಿ ಯಾವ ಮಾಧ್ಯಮದಲ್ಲಾದರೂ ಬಹಿರಂಗ ಚರ್ಚೆಗೆ ಬರಲಿ. ಎಲ್ಲ ಮಾಧ್ಯಮಗಳಲ್ಲೂ ಚರ್ಚೆ ಆಗಲಿ. ನಾನು ಅದನ್ನು ಎದುರಿಸಲು ಸಿದ್ಧ. ಅವರಿಗೆ ಯಾವ ಮಾಹಿತಿ ಬೇಕೋ ಕೊಡುತ್ತೇನೆ ಎಂದರು.

ವಿರೋಧ ಪಕ್ಷದ ಅಧ್ಯಕ್ಷನಾಗಿ ನಾನು ಪ್ರಚಾರ ಪಡೆಯುವ ಅಗತ್ಯ ನನಗಿಲ್ಲ. ನಾನು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ನನಗೆ ರಾಜಕಾರಣ ಹೇಗೆ ಮಾಡಬೇಕು ಅಂತಾನೂ ಗೊತ್ತಿದೆ. ಇದು ದೇಶ ಹಾಗೂ ಮಾನವೀಯತೆಯ ವಿಚಾರ. ಒಂದು ಪಕ್ಷದ ಅಧ್ಯಕ್ಷನಾಗಿ ನರೇಗಾ ಹಣವನ್ನು ಹೇಗೆ ಬಳಸಿಕೊಳ್ಳಬೇಕು ಅಂತಾ ಸಲಹೆ ನೀಡಿದ್ದೇನೆ ಎಂದು ತಿಳಿಸಿದರು.

ನನ್ನ ಘನತೆ ಕಡಿಮೆಯಾದರೂ ಪರ್ವಾಗಿಲ್ಲ. ನಾನು ಈಶ್ವರಪ್ಪನಿಗೆ ಉತ್ತರ ಕೊಡಲು ಸಿದ್ಧನಿದ್ದೇನೆ. ಸುಮ್ಮನೆ ಮಾತನಾಡಿ ಓಡಿ ಹೋಗುವ ವ್ಯಕ್ತಿ ನಾನಲ್ಲ. ನೀವು ಸಮಯ ನಿಗದಿ ಮಾಡಿ, ನಾನು ಬಂದು ಉತ್ತರ ನೀಡುತ್ತೇನೆ. ನನಗೆ ಈ ವಿಚಾರದಲ್ಲಿನ ಮಾಹಿತಿಗಳು ಬೆರಳ ತುದಿಯಲ್ಲಿವೆ ಎಂದರು.

ಹೈಕಮಾಂಡ್ ಮನವಿಗೆ ನಾವು ಬದ್ಧ
ನಮ್ಮ ಪಕ್ಷದ ಹೈಕಮಾಂಡ್ ನೀಡಿರುವ ಹೇಳಿಕೆಗೆ ನಾವು ಬದ್ಧನಾಗಿದ್ದೇವೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನಾವು ಕೆಲಸ ಮಾಡಬೇಕಿದೆ. ರಾಷ್ಟ್ರಮಟ್ಟದಲ್ಲಿ ನಮ್ಮ ನಾಯಕರು ಪ್ರಧಾನ ಮಂತ್ರಿಗಳಿಗೆ ಮಾಡಿರುವ ಮನವಿಗೆ ನಮ್ಮ ರಾಜ್ಯ ಘಟಕ ಕೂಡ ಬದ್ಧವಾಗಿದೆ ಎಂದರು.

ಸುರಕ್ಷತಾ ಕಿಟ್ ವಿತರಣೆ
ವೈದ್ಯರು ಹೊರತಾಗಿ ಆಶಾ ಕ್ರಾಯಕರ್ತರು, ಪೌರ ಕಾರ್ಮಿಕರು ಹಾಗೂ ಆರೋಗ್ಯ ಸಿಬ್ಬಂದಿಗಳಲ್ಲಿ ಯಾರಿಗೆ ಸುರಕ್ಷಾ ಕಿಟ್ ಸಿಕ್ಕಿಲ್ಲವೋ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಸುರಕ್ಷಾ ಕಿಟ್ ನೀಡಲು ನಿರ್ಧರಿಸಲಾಗಿದೆ. ಇವತ್ತು ಸುರಕ್ಷತಾ ಸಾಮಾಗ್ರಿ ನೀಡುವ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ನಾವೆಲ್ಲರೂ ಜಾಗ್ರತೆಯಿಂದ ಇರಬೇಕಾಗಿದೆ. ಸ್ವಲ್ಪ ಕಡಿಮೆ ಆಯ್ತು ಅಂತಾ ಲಾಕ್ ಡೌನ್ ಸಡಿಲ ಮಾಡಿದ್ದಾರೆ ಎಂದು ನಾವು ಯಾಮಾರುವುದು ಬೇಡ. ಸೋಂಕು ಹೆಚ್ಚಾಗುವ ವಾತಾವರಣವಿದೆ. ಹೆಚ್ಚು ಪರೀಕ್ಷೆ ನಡೆದಂತೆ ಸೋಂಕು ಪ್ರಕರಣ ಪತ್ತೆಯಾಗಲಿದೆ ಎಂಬ ಮಾಹಿತಿ ಇದೆ. ಆ ದೃಷ್ಟಿಯಿಂದ ನಾವು ನಮ್ಮ ಅಂತರ ಕಾಯ್ದುಕೊಳ್ಳುವುದು ಸೂಕ್ತ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.