ಮೃತ ಬಾಲಕಲಾವಿದೆ ಸಮನ್ವಿ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ
Team Udayavani, Jan 18, 2022, 5:02 PM IST
ಬೆಂಗಳೂರು: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲ ಕಲಾವಿದೆ, ಕಿರುತೆರೆ ನಟಿ ಅಮೃತಾ ಅವರ ಪುತ್ರಿ, ಖ್ಯಾತ ಹರಿಕಥಾ ವಿದ್ವಾಂಸ ಗುರುರಾಜಲು ನಾಯ್ಡು ಅವರ ಮರಿ ಮೊಮ್ಮಗಳು ಸಮನ್ವಿಯ ಗುಬ್ಬಲಾಳ ಸಮೀಪದ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಭೇಟಿ ನೀಡಿ, ಆಕೆಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಭೇಟಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಸಾಂಸ್ಕೃತಿಕ ಕ್ಷೇತ್ರದಿಂದ ಜನರ ಮನಗೆದ್ದು ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಳು. ಚಿಕ್ಕ ವಯಸ್ಸಿನಲ್ಲಿ ಇಂತಹ ಪ್ರತಿಭೆ ಎಲ್ಲರಿಗೂ ಸಿಗುವುದಿಲ್ಲ. ಆಕೆಗೆ ಇಷ್ಟು ಸಣ್ಣ ವಯಸ್ಸಿನಲ್ಲೇ ಈ ರೀತಿ ಆಗಬಾರದಿತ್ತು. ಯಮ ನಿಷ್ಕರುಣಿ” ಎಂದು ದುಃಖ ವ್ಯಕ್ತಪಡಿಸಿದರು.
ಇದನ್ನೂ ಓದಿ:ಮರಳು ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಜಿಲ್ಲಾ ಆಡಳಿತ ವೈಫಲ್ಯ: ಗುತ್ತಿಗೆದಾರರ ಸಂಘ ಆಕ್ರೋಶ
“ಆಕೆಯ ತಂದೆ ನನಗೆ ತುಂಬಾ ಪರಿಚಯ. ನಾವೆಲ್ಲ ವಿದ್ಯಾರ್ಥಿ ಕಾಲದಿಂದಲೂ ಪರಿಚಿತರು. ಈ ಸಮಯದಲ್ಲಿ ವೈಯಕ್ತಿಕವಾಗಿ ಹಾಗೂ ಪಕ್ಷದ ಅಧ್ಯಕ್ಷನಾಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಚಿಕ್ಕ ವಯಸ್ಸಿನಲ್ಲೇ ಅದ್ಭುತ ಪ್ರತಿಭೆಯೊಂದು ಮಾಯವಾಗಿದೆ. ಆಕೆಯ ತಂದೆ, ತಾಯಿ ಬಹಳ ನೋವಿನಲ್ಲಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಇದು ಬಹಳ ದುಃಖಕರ ಸಮಯ. ಅವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ತಪ್ಪಿಸಿಕೊಳ್ಳಬಾರದೆಂದು ಮಕ್ಕಳನ್ನು ಸರಪಳಿಯಲ್ಲಿ ಕಟ್ಟಿದ ಮದರಸಾದ ಮೌಲಾನಾ
ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ