ಎಚ್‌ಡಿಕೆ, ಡಿಕೆಶಿ ಭೇಟಿ: ಏನಿದು ಮರ್ಮ?


Team Udayavani, Oct 28, 2017, 7:42 AM IST

28-2.jpg

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರು ಶುಕ್ರವಾರ ಜೆಪಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಉಭಯ ನಾಯಕರು ಸುಮಾರು ಒಂದು ಗಂಟೆ ಕಾಲ ಸಮಾಲೋಚನೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಬದ್ಧ ಎದುರಾಳಿಗಳು ಎಂದೇ ಬಿಂಬಿತವಾಗಿರುವ ಡಿ.ಕೆ.ಶಿವಕುಮಾರ್‌ ಹಾಗೂ ಎಚ್‌. ಡಿ.ಕುಮಾರಸ್ವಾಮಿ ಭೇಟಿ ರಾಜಕೀಯ ವಲಯದಲ್ಲಿ ಒಂದಷ್ಟು ಚರ್ಚೆಗೂ ಗ್ರಾಸವಾಗಿದೆ. ಆದರೆ, ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ರಚಿಸಲಾಗಿರುವ ವಿದ್ಯುತ್‌ ಖರೀದಿ ಹಗರಣ ಸಂಬಂಧ ಸದನ ಸಮಿತಿಯ ವರದಿ ಅ.30ರಂದು ಸಲ್ಲಿಸಬೇಕಿದ್ದು, ಆ ಸಮಿತಿ ಸದಸ್ಯರೂ ಆಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರ ಸಹಿ ಪಡೆಯಲು
ಶಿವಕುಮಾರ್‌ ಬಂದಿದ್ದರು. ಅದೇ ಸಂದರ್ಭದಲ್ಲಿ ಆರೋಗ್ಯ ವಿಚಾರಿಸಿದರು.

ವಿದ್ಯುತ್‌ ಖರೀದಿ ಹಗರಣಕ್ಕೆ ಸಂಬಂಧಿಸಿದ ಸದನ ಸಮಿತಿ ಸದಸ್ಯ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದರು. ಅದು ಅಂಗೀಕಾರ ವಾಗದ ಕಾರಣ ಸದಸ್ಯರಾಗಿ ಮುಂದುವರಿದಿದ್ದರು. ಹೀಗಾಗಿ, ವರದಿ ಸಲ್ಲಿಸಲು ಸಮಿತಿ ಸದಸ್ಯರ ಸಹಿ ಅಗತ್ಯವಾಗಿದೆ. ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಕುಮಾರಸ್ವಾಮಿಯವರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಹೇಳಿಕೆ ನೀಡಿರುವ ಕುಮಾರಸ್ವಾಮಿ, ವಿದ್ಯುತ್‌ ಖರೀದಿ ಅಕ್ರಮಗಳನ್ನು ದಾಖಲೆ ಸಮೇತ ಸಂಗ್ರಹಿಸಿ ಎರಡು ತಿಂಗಳ ಹಿಂದೆಯೇ ಸಮಿತಿಗೆ ಸಲ್ಲಿಸಿದ್ದೆ. ಇದರಿಂದ ಸರ್ಕಾ ರಕ್ಕೆ ಆದ ಸಾವಿರಾರು ಕೋಟಿ ರೂ. ನಷ್ಟದ ಬಗ್ಗೆಯೂ ಅಂಕಿ-ಅಂಶ ನೀಡಿದ್ದೆ. ಈ ಅಂಶಗಳನ್ನೂ ಸೇರಿಸಿ ಅಧಿಕಾರಿಗಳು ಅಂತಿಮ ವರದಿ ಸಿದ್ಧಪಡಿಸಿದ್ದಾರೆಂದು ಶಿವಕುಮಾರ್‌ ಹೇಳಿದರು.

ಅಂತಿಮ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದರು ಎಂದು ಹೇಳಿದರು. ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಅವರ ವಿರುದ್ಧ ಸಿಬಿಐ ಎಫ್ಐಆರ್‌ ದಾಖಲಿಸಿರುವುದು, ಜಾರ್ಜ್‌ ರಾಜೀನಾಮೆ ಕೊಡಬೇಕಿಲ್ಲ ಎಂದು ಕುಮಾರಸ್ವಾಮಿ ಬ್ಯಾಟಿಂಗ್‌ ಮಾಡಿರುವುದು. ಇದರ ಬೆನ್ನಲ್ಲೇ ಡಿ.ಕೆ. ಶಿವಕುಮಾರ್‌ ಕುಮಾರಸ್ವಾಮಿ ಅವರನ್ನು ಸಹಿ ಪಡೆಯುವ ನೆಪದಲ್ಲಿ ಭೇಟಿಯಾಗಿರುವುದು
ರಾಜಕೀಯ ವಲಯಗಳಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ನೀವು ರಾಜಕಾರಣದಲ್ಲಿ ಹೋಗುತ್ತಿರುವ ಸ್ಪೀಡು ಜಾಸ್ತಿ ಇದೆ. ಆರೋಗ್ಯದ ಬಗ್ಗೆ ಗಮನ ನೀಡಿ ಎಂದು ಡಿ.ಕೆ.ಶಿವಕುಮಾರ್‌ ನನಗೆ ಸಲಹೆ ನೀಡಿದ್ದಾರೆ. ವಿದ್ಯುತ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಸದನ ಸಮಿತಿ ಕರಡು ತೋರಿಸಿ ಸಹಿ ಪಡೆದಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ವಿಷಯವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್‌ ಚರ್ಚೆ ಮಾಡಲಿಲ್ಲ.
●ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ 

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.