ರಾಜ್ಯದಲ್ಲೂ ದಲಿತ ಸಿಎಂ ಕೂಗು ಜೀವಂತ

ಪಂಜಾಬ್‌ನಲ್ಲಿ ಚರಣ್‌ಜಿತ್‌ಸಿಂಗ್‌ ಛನ್ನಿಗೆ ಮುಖ್ಯಮಂತ್ರಿ ಪಟ್ಟ ; ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿ ಬೇಡಿಕೆಗೆ ಮರು ಜೀವ

Team Udayavani, Sep 22, 2021, 2:49 PM IST

ರಾಜ್ಯದಲ್ಲೂ ದಲಿತ ಸಿಎಂ ಕೂಗು ಜೀವಂತ

ಬೆಂಗಳೂರು: ಪಂಜಾಬ್‌ನಲ್ಲಿ ದಲಿತ ಸಮುದಾಯದ ಚರಣ್‌ಜಿತ್‌ಸಿಂಗ್‌ ಛನ್ನಿ ಅವರಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಬೇಡಿಕೆಗೆ ಮರು ಜೀವ ಬಂದಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದರೆ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯತಂತ್ರ ರೂಪಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ.

ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಸೇರಿ ಕಾಂಗ್ರೆಸ್‌ನಲ್ಲಿರುವ ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿಗಳಲ್ಲಿ ಪಂಜಾಬ್‌ ವಿದ್ಯಮಾನದ ನಂತರ ಆಸೆ ಚಿಗುರೊಡೆದಿದ್ದು ಕರ್ನಾಟಕದಲ್ಲೂ ಯಾಕೆ ಆ ಪ್ರಯೋಗ ನಡೆಯಬಾರದು ಎಂಬ ಚರ್ಚೆಯೂ ಆರಂಭವಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಪಕ್ಷವು ಚುನಾವಣೆ ಸಾಮೂಹಿಕ ನೇತೃತ್ವದಲ್ಲಿಯೇ ಎದುರಿಸಿ ಅವಕಾಶ ಸಿಕ್ಕರೆ ದಲಿತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬೇಡಿಕೆ ಜೀವಂತ ಇಟ್ಟು ಕೊಳ್ಳುವ ಬಗ್ಗೆಯೂ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಸ್ತುತ ಕಾಂಗ್ರೆಸ್‌ನಿಂದ ಗೆದ್ದಿರುವ ದಲಿತ ಸಮುದಾಯಕ್ಕೆ ಸೇರಿರುವ ಶಾಸಕರು ಹಾಗೂ ಮುಖಂಡರು ಮುಂಬರುವ ದಿನಗಳಲ್ಲಿ ಒಗ್ಗೂಡಿ ಇಂತದ್ದೊಂದು ಬೇಡಿಕೆಯನ್ನು ಹೈಕಮಾಂಡ್‌ ಮುಂದೆಯೂ ಇಡುವ ಚಿಂತನೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಯಾಗಬೇಕು ಎಂಬ ಅಭಿಪ್ರಾಯ ಪಕ್ಷದ ವಲಯದಲ್ಲಿ ಮೊದಲಿನಿಂದಲೂ ಇದ್ದು, ಕೇವಲ ದಲಿತ ಸಮು ದಾಯದ ಶಾಸಕರಷ್ಟೇ ಅಲ್ಲದೆ ಇತರೆ ಸಮು ದಾಯದ ಶಾಸಕರು ಆ ಬಗ್ಗೆ ಪ್ರಶ್ನಾತೀತ ಅಭಿಪ್ರಾಯ ಹೊಂದಿದ್ದಾರೆ.

2006 ಹಾಗೂ 2018 ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಯಾದಾಗ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬಂದಿತ್ತಾದರೂ ಅವಕಾಶ ಸಿಗಲಿಲ್ಲ. 2013ರಲ್ಲಿ ಕಾಂಗ್ರೆಸ್‌ ಸ್ವಂತ ಶಕ್ತಿ ಮೇಲೆ ಸರ್ಕಾರ ರಚನೆ ಮಾಡಿದಾಗಲೂ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ, ಸಹಜವಾಗಿ ಸಮುದಾಯದಲ್ಲಿ ಆ ಕೊರಗಿದೆ. ಮುಂದೆ ಪಕ್ಷ ಅಧಿಕಾರಕ್ಕೆ ಬಂದರೆ ಅವ ಕಾಶ ಸಿಗಬೇಕಾಗುತ್ತದೆ ಎಂದು ಹೆಸರು ಹೇಳಲು ಇಚ್ಛಿಸದಕಾಂಗ್ರೆಸ್‌ ನಾಯಕರೊಬ್ಬರು ಹೇಳುತ್ತಾರೆ.

ಇದನ್ನೂ ಓದಿ:ವೈಜೆಡ್‌ಎಫ್-ಆರ್‌15 ವಿ4.0 ಯಮಹಾ ಬೈಕುಗಳ ಬಿಡುಗಡೆ

ಅವಕಾಶ ಸಿಗಬೇಕು: 2023ರ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯಕ್ಕೆ ಅವಕಾಶ ಸಿಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಪರಿಸ್ಥಿತಿ ಮತ್ತು ಸಂದರ್ಭವೂ ಒದಗಿಬರಬೇಕಾಗುತ್ತದೆ. ಜತೆಗೆ, ಅಂತಹ ಸಮಯ ದಲ್ಲಿ ಒಗ್ಗಟ್ಟು ಮುಖ್ಯ, ಪಕ್ಷದ ಇತರೆ ನಾಯಕರು ದೊಡ್ಡ ಮನಸ್ಸು ಮಾಡಬೇಕಾಗುತ್ತದೆ ಎಂದು ತಿಳಿಸುತ್ತಾರೆ.

ಕಾಂಗ್ರೆಸ್‌ನಲ್ಲಿ ದಲಿತ ಸಮುದಾಯದ ಮುಂಚೂ ಣಿ ನಾಯಕರಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ ಅವರ ಹೆಸರು ಕೇಳಿಬರುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರಂತೂ ದಲಿತ ಸಮುದಾಯ ಎಂದು ಅವಕಾಶ ಬೇಡ. ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲ ಸಮುದಾಯದ ನಾಯಕ ಎಂದು ಪರಿಗಣಿಸಿ ಅವಕಾಶ ಕೊಡಿ ಎಂದು ಹಲವಾರು ಬಾರಿ ಹೇಳಿದ್ದಾರೆ. ಡಾ.ಜಿ. ಪರಮೇಶ್ವರ್‌ ಅವರು ಸಹ, ಯಾಕೆ ಅವಕಾಶ ಸಿಗುವು ದಿಲ್ಲ ಎಂಬ ನೋವು ಪದೇಪದೆ ಕಾಡಿದ್ದುಂಟು ಎಂದು ಹಲವು ಸಮಾರಂಭಗಳಲ್ಲಿ ಹೇಳಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ನಲ್ಲಿ ದಲಿತ ಸಿಎಂ ಬೇಡಿಕೆ ಜೀವಂತ ಇಟ್ಟುಕೊಂಡು ವಿಧಾನಸಭೆ ಚುನಾವಣೆ ವೇಳೆಯೂ ಆ ನಿಟ್ಟಿನಲ್ಲಿ ಪಕ್ಷ ಹಾಗೂ ನಾಯಕರ ಮೇಲೆ ಒತ್ತಡ ಹಾಕುವ ಬಗ್ಗೆ ತೆರೆಮರೆಯ ಸಿದ್ಧತೆಗಳು ನಡೆದಿವೆ ಎಂದು ತಿಳಿದು ಬಂದಿದೆ.

ನಮ್ಮ ಹೈಕಮಾಂಡ್‌ ಬೇರೆ ಬೇರೆ ರಾಜ್ಯಗಳಲ್ಲಿ ಹಂತ ಹಂತವಾಗಿ ದಲಿತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದೆ. ಪಂಜಾಬ್‌ನ ತೀರ್ಮಾನ ಸ್ವಾಗತಾರ್ಹ. ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲೂ ಸಂದರ್ಭ ನೋಡಿಕೊಂಡು ತೀರ್ಮಾನ ಕೈಗೊಳ್ಳಲಿದೆ. ಹಲವು ವರ್ಷಗಳಿಂದಲೂ ದಲಿತ ಸಿಎಂ ಬೇಡಿಕೆ ಇದೆ. ಇಡೀ ದಲಿತ ಸಮುದಾಯವೂ ಎದುರು ನೋಡುತ್ತಿದೆ. ಇಲ್ಲಿ ಪರಮೇಶ್ವರ್‌ ಅಪ್ರಸ್ತುತ, ಸಮುದಾಯ ಪ್ರಸ್ತುತ. 2023ಕ್ಕೆ ನಾವು ಅಧಿಕಾರಕ್ಕೆ ಬರಬೇಕಾಗಿದೆ.
-ಡಾ.ಜಿ.ಪರಮೇಶ್ವರ್‌, ಮಾಜಿ ಉಪ ಮುಖ್ಯಮಂತ್ರಿ

-ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.