ಬೆಂಗಳೂರು ಹೆಸರಿಗೆ ಮಸಿ ಬಳಿಯಲು ಯತ್ನ; DJ ಡೇವಿಡ್ ಕಾರ್ಯಕ್ರಮ ರದ್ದು

Team Udayavani, Jan 12, 2017, 3:14 PM IST

David-Guetta-live-at-.jpg

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆಯಬೇಕಾಗಿದ್ದ ಫ್ರೆಂಚ್ ನ ಜನಪ್ರಿಯ  ಡಿಜೆ ಡೇವಿಡ್ ಗುಟ್ಟಾ ಅವರ ಸಂಗೀತ ರಸಮಂಜರಿ ಕಾರ್ಯಕ್ರಮ ರದ್ದುಗೊಂಡಿದೆ. ಅದಕ್ಕೆ ಕಾರಣ, ಸೂಕ್ತ ಭದ್ರತೆ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅನುಮತಿ ನೀಡಲು ನಿರಾಕರಿಸಿರುವುದಾಗಿ ಆಂಗ್ಲ ಮಾಧ್ಯಮಗಳ ವರದಿ ತಿಳಿಸಿದೆ.

ಇತ್ತೀಚೆಗಷ್ಟೇ ಹೊಸ ವರ್ಷಾರಣೆ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ ನಿಟ್ಟಿನಲ್ಲಿ ಬೆಂಗಳೂರು ಸುರಕ್ಷಿತವಲ್ಲ ಎಂದು ವರದಿ ಪ್ರಸಾರ ಮಾಡಿದ್ದವು. ಈಗ ಡೇವಿಡ್ ಗುಟ್ಟಾರಂತಹ ನಂಬರ್ ವನ್ ಸಂಗೀತಗಾರನ ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ನೀಡದಿದ್ದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಪ್ರಕರಣಗಳು ನಡೆಯುವ ಸಂಭವದ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಿಲ್ಲ ಎಂದು ವರದಿ ವಿವರಿಸಿದೆ.

ಪಿಟಿಐ ವರದಿ ಪ್ರಕಾರ, ಕಾನೂನು ಸುವ್ಯವಸ್ಥೆ ಕಾರಣದಿಂದ ಕಾರ್ಯಕ್ರಮ ರದ್ದುಪಡಿಸಲಾಗಿದೆಯಂತೆ. ಹೊಸ ವರ್ಷಾಚರಣೆ ಸಂದರ್ಭ ಸಂಭವಿಸಿದ ಘಟನೆಯಿಂದಾಗಿ, ಇಂದು ನಗರದಲ್ಲಿ ನಡೆಯಬೇಕಿದ್ದ ಡೇವಿಡ್ ಗುಟ್ಟಾ ಸಂಗೀತ ರಸಮಂಜರಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದೆಂದು ಅಧಿಕಾರಿಗಳು ಶಿಫಾರಸು ಮಾಡಿರುವುದಾಗಿ ಹೇಳಿದೆ.

ಯಾವುದೇ ಕಾನೂನು ಬಾಹಿರವಾಗಲಿ, ಗದ್ದಲದಂತಹ ಪರಿಸ್ಥಿತಿಗೆ ಅವಕಾಶ ಕೊಡಲ್ಲ, ಕಾರ್ಯಕ್ರಮವನ್ನು ನಡೆಸುತ್ತೇವೆ ಎಂದು ಮನವರಿಕೆ ಮಾಡಿದ್ದೇವು. ಆದರೆ ಅಧಿಕಾರಿಗಳು ಸಮರ್ಪಕ ಭದ್ರತೆ ನೀಡುವ ಬಗ್ಗೆ ತಯಾರಿ ನಡೆಸಿಲ್ಲ ಎಂಬ ಕಾರಣ ನೀಡಿದ್ದಾರೆ. ಹಾಗಾಗಿ ಇಂದಿನ ಡೇವಿಡ್ ಗುಟ್ಟಾ ಅವರ ಸಂಗೀತ ರಸಮಂಜರಿ ಕಾರ್ಯಕ್ರಮ ರದ್ದುಪಡಿಸಿದ್ದೇವೆ ಎಂದು ಸನ್ ಬರ್ನ್ ಸಿಇಒ ಕಿರಣ್ ಸಿಂಗ್ ಮಾಧ್ಯಮ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಯಾರೀತ ನಂಬರ್ ವನ್ ಡಿಜೆ ಡೇವಿಡ್ ಗುಟ್ಟಾ?
ಕಲಾವಿದನಾಗಿ ವೃತ್ತಿ ಆರಂಭಿಸಿ ನಂತರ ಸಂಗೀತದತ್ತ ಮುಖಮಾಡಿದ ನೆದರ್ಲ್ಯಾಂಡ್‌ನ ಲೇಯ್ಡ್ ಬ್ಯಾಕ್ ಲ್ಯೂಕ್ ಪ್ರಪಂಚದ ನಂಬರ್ ಒನ್ ಡಿಜೆ ಡೇವಿಡ್ ಗುಟ್ಟಾ. ಸ್ಟೀವ್ ಆಂಗೆಲೊ, ಸೆಬಾಸ್ಟಿನ್ ಇಂಗ್‌ರೊಸೊ, ಆಕ್ಸ್‌ವೆಲ್ ಮೊದಲಾದವರೊಂದಿಗೆ ಸೇರಿಕೊಂಡು ಯುರೋಪ್, ಉತ್ತರ ಅಮೆರಿಕೆಯ ದೇಶಗಳಲ್ಲೆಲ್ಲಾ ಸಂಗೀತ ರಸಧಾರೆ ಹರಿಸುವ ಮೂಲಕ ಭಾರೀ ಜನಪ್ರಿಯತೆ ಪಡೆದಿದ್ದಾರೆ.

ಆಯೋಜಕರು ಸುಳ್ಳು ಸುದ್ದಿ ಹಬ್ಬಿಸಿದ್ಯಾಕೆ?
ಫ್ರೆಂಚ್ ಡಿಜೆ ಗುಟ್ಟಾ ಕಾರ್ಯಕ್ರಮಕ್ಕೆ ಭದ್ರತೆ ದೃಷ್ಟಿಯಿಂದ ಅನುಮತಿ ನೀಡಿಲ್ಲ ಎಂಬುದು ಸುಳ್ಳು. ಎಪಿಎಂಸಿ ಚುನಾವಣೆ ಇದ್ದ ಹಿನ್ನೆಲೆಯಲ್ಲಿ ಅನುಮತಿ ನೀಡಿಲ್ಲ. ಅದನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರಣ ನೀಡಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಲು ನಾವು ಬದ್ಧ ಎಂದು ಬೆಂಗಳೂರು ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಜನವರಿ 10ರಂದು ಕಾರ್ಯಕ್ರಮ ನಡೆಸಲು ಅನುಮತಿ ಕೇಳಿದ್ದರು. 15 ಸಾವಿರ ಜನ ಸೇರುವುದಾಗಿ ಸನ್ ಬರ್ನ್ ಹೇಳಿತ್ತು. ಆದರೆ ಆ ಸ್ಥಳದಲ್ಲಿ ಚುನಾವಣೆ ನಡೆಯುತ್ತಿರುವ ನಿಟ್ಟಿನಲ್ಲಿ ಬೇರೆ ದಿನ ಕಾರ್ಯಕ್ರಮ ಆಯೋಜಿಸಿ ಅನುಮತಿ ನೀಡುತ್ತೇವೆ ಎಂದು ಹೇಳಿರುವುದಾಗಿ ವಿವರಿಸಿದ್ದಾರೆ. 
 
ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.