ಯಾವುದೇ ಅನುಮಾನವಿಲ್ಲ, ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ: ಅಶ್ವಥ್ ನಾರಾಯಣ
Team Udayavani, Jun 16, 2021, 2:53 PM IST
ಬೆಂಗಳೂರು: ನಮ್ಮ ಪಕ್ಷಕ್ಕೆ ಪ್ಲಾನೆಟ್ ನಿಂದ ಯಾರೂ ಬಂದಿಲ್ಲ. ನಮ್ಮಲ್ಲಿ ಹೊರಗಿನವರು ಯಾರೂ ಇಲ್ಲ, ಎಲ್ಲರೂ ನಮ್ಮವರೆ. ನಮ್ಮ ಸರ್ಕಾರದ ಅಂಗವಾಗಿದ್ದಾರೆ, ಪಕ್ಷದ ಭಾಗವಾಗಿದ್ದಾರೆ. ಈಗ ನಮ್ಮ ಜೊತೆ ಇದ್ದಾರೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.
ಸಚಿವ ಈಶ್ವರಪ್ಪ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಂದವರು ನಮ್ಮ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ. ಬೇರೆ ಪಕ್ಷ ತ್ಯಜಿಸಿ ಬಂದವರೆಲ್ಲಾ ನಮ್ಮವರೇ. ಇವತ್ತೇ ಅಲ್ಲಾ ಮೊದಲಿನಿಂದಲೂ ಇದನ್ನೇ ಹೇಳುತ್ತಿದ್ದೇನೆ. ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದ ಅವರು, ಹಿರಿಯ ನಾಯಕರ ಹೇಳಿಕೆ ಬಗ್ಗೆ ಹೆಚ್ಚು ಮಾತನ್ನಾಡುವುದಿಲ್ಲ ಎಂದರು.
ಇದನ್ನೂ ಓದಿ:ರಾಜ್ಯಕ್ಕಿಂದು ‘ಅರುಣಾ’ಗಮನ: ಕಮಲ ಪಾಳಯದಲ್ಲಿ ಕಳವಳ, ಬಿರುಸುಗೊಂಡ ಚಟುವಟಿಕೆ
ಅರುಣ್ ಸಿಂಗ್ ರಾಜ್ಯ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಸಮಾಲೋಚನೆ ನಡೆಯುವುದು ಸಹಜ. ಅದರಂತೆ ಈಗ ಶಾಸಕರ ಜೊತೆ ಸಮಾಲೋಚನೆ ನಡೆಯುತ್ತಿದೆ. ಕೋರ್ ಕಮಿಟಿ ಮೀಟಿಂಗ್ ನಡೆಯಲಿದೆ. ಆಡಳಿತಾತ್ಮಕವಾಗಿ ಹೇಗೆ ನಡೆಯುತ್ತಿದೆ, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಇದರಲ್ಲಿ ವಿಶೇಷ ಏನೂ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?