ಕೋವಿಡ್‌ ಸಂಕಷ್ಟ ಕಾಲದಲ್ಲಿ ಹಣ ಸುಲಿಗೆ ಮಾಡಿದರೆ ಜೈಲಿಗೆ ಅಟ್ಟುತ್ತೇವೆ: ಅಶ್ವತ್ಥನಾರಾಯಣ


Team Udayavani, May 5, 2021, 8:31 PM IST

ಕೋವಿಡ್‌ ಸಂಕಷ್ಟ ಕಾಲದಲ್ಲಿ ಹಣ ಸುಲಿಗೆ ಮಾಡಿದರೆ ಜೈಲಿಗೆ ಅಟ್ಟುತ್ತೇವೆ:  ಅಶ್ವತ್ಥನಾರಾಯಣ

ಬೆಂಗಳೂರು: ಯಾರಾದರೂ ಕೋವಿಡ್‌ ಪರಿಸ್ಥಿತಿಯ ದುರ್ಲಾಭವನ್ನು ಪಡೆದುಕೊಂಡು ಹಣ ಸುಲಿಗೆ ಮಾಡಲೆತ್ನಸಿದರೆ ಮುಲಾಜಿಲ್ಲದೆ ಕ್ರಮ ಕೈಕೊಳ್ಳಲಾಗುವುದು ಹಾಗೂ ಬಂಧಿಸಿ ಜೈಲಿಗಟ್ಟಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಎಚ್ಚರಿಕೆ ನೀಡಿದರು.

ಬುಧವಾರ ಬೆಳಗ್ಗೆಯೇ ಮಲ್ಲೇಶ್ವರ ವಿಧಾನಸಭೆ  ಕ್ಷೇತ್ರದ ಕೋವಿಡ್‌ ಪರಿಸ್ಥಿತಿಯನ್ನು ಅವಲೋಕನ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ಬಗ್ಗೆ ಪೊಲೀಸ್‌ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಯಾರಾದರೂ ಆಮ್ಲಜನಕ, ಹಾಸಿಗೆಗಳು, ರೆಮಿಡಿಸ್ವಿರ್‌, ಆಂಬ್ಯುಲೆನ್ಸ್‌, ಚಿತಾಗಾರ ಮತ್ತಿತರೆ ಯಾವುದೇ ಇರಲಿ, ಪರಿಸ್ಥಿತಿಯ ದುರ್ಲಾಭ ಮಾಡಿಕೊಳ್ಳಲು ಯತ್ನಸಿದರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಅತ್ಯಂತ ಕಠಿಣ ಕ್ರಮ ಜರುಗಿಸುತ್ತೇವೆ” ಎಂದರು.

ಯಾರಿಗೆ ಸಮಸ್ಯೆಯಾದರೂ ಹೆಲ್ಪ್‌ಲೈನ್‌ ಸಂಖ್ಯೆ 112ಕ್ಕೆ ಕರೆ ಮಾಡಿದರೆ ಸಾಕು. ತತ್‌ಕ್ಷಣವೇ ಸ್ಪಂದನೆ ಸಿಗುತ್ತದೆ. ಯಾರಾದರೂ ಹಣಕ್ಕೆ ಡಿಮಾಂಡ್‌ ಮಾಡಿದರೆ ದೂರು ನೀಡಬಹುದು. ಅಲ್ಲಿ ದೂರು ನೀಡಿದರೆ ಖಂಡಿತವಾಗಿಯೂ ಕ್ರಮ ಜರುಗಿಸಲಾಗುವುದು ಎಂದು ನಾನು ಖಾತರಿ ಕೊಡುತ್ತೇನೆ ಎಂದರು.

ಪ್ರಾಥಮಿಕ ಹಂತದಲ್ಲಿ ರೆಮಿಡಿಸ್ವಿರ್‌ ಬೇಡ:

ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಪಾಸಿಟೀವ್‌ ಬಂದರೆ ಅವರಿಗೆ ಕೂಡಲೇ ರೆಮಿಡಿಸ್ವಿರ್‌ ಕೊಡುವ ಅಗತ್ಯವಿಲ್ಲ ಎಂದ ಡಿಸಿಎಂ, ಅನಗತ್ಯ ಗಾಬರಿ ಬೇಡ. ಆರಂಭದಿಂದಲೇ ಚಿಕಿತ್ಸೆ ಪಡೆದರೆ ಯಾವ ಸಮಸ್ಯೆಯೂ ಆಗುವುದಿಲ್ಲ ಎಂದು ಜನರಿಗೆ ಧೈರ್ಯ ತುಂಬಿದರು.

ಸದ್ಯದ ಸ್ಥಿತಿಯಲ್ಲಿ ಪ್ರತಿದಿನ 24,000 ವೈಲ್‌ ರೆಮಿಡಿಸ್ವಿರ್‌ ಕೊಡಲು ಸಾಧ್ಯವಾಗುತ್ತದೆ. ಅದು ಸದ್ಬಳಕೆ ಆಗುವ ಹಾಗೂ ಅಗತ್ಯವಿರುವವರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಔಷಧಿ ಕೊರತೆ ಆಗದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ : ಆಕ್ಸಿಜನ್ ಕೊರತೆ : ಎಲ್ಲಾ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ : BSY

ರಾಮನಗರ ಜಿಲ್ಲಾಸ್ಪತ್ರೆಗೆ 10 ದಿನದಲ್ಲಿ ಆಕ್ಸಿಜನ್‌ ಸಂಗ್ರಹ ಘಟಕ:

ರಾಮನಗರ ಜಿಲ್ಲೆಯಲ್ಲಿ ಪರಿಸ್ಥಿತಿ ದಿನೇದಿನೆ ಹದಗೆಡುತ್ತಿದ್ದು ಆಮ್ಲಜನಕದ ಕೊರತೆ ಆಗುತ್ತಿದೆ  ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ಡಿಸಿಎಂ, ನಿನ್ನೆ ಒಂದೇ ದಿನ 550 ಸೋಂಕಿತರು ಪತ್ತೆಯಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ 3,000 ಸೋಂಕಿತರು ಇದ್ದಾರೆ. ಈ ಪ್ರಮಾಣದಲ್ಲಿ ಕೇವಲ ಶೇ.10ರಷ್ಟು ಸೋಂಕಿತರಿಗೆ ಆಕ್ಸಿಜನ್‌ ಬೆಡ್‌ಗಳ ಅಗತ್ಯವಿದೆ. ಆದರೆ, ಸರಕಾರ ಶೇ.20-30ರಷ್ಟು ಸೋಂಕಿತರಿಗೂ ಆಕ್ಸಿಜನ್‌ ಬೆಡ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಮನಗರ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಕೋವಿಡ್‌ ಕಾಲ್‌ ಸೆಂಟರ್‌ ಮಾಡುತ್ತಿದ್ದೇವೆ. ಇನ್ನು ಹತ್ತೇ ದಿನದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಂಗ್ರಹಕ್ಕೆ ಟ್ಯಾಂಕ್‌ನ್ನು ಅಳವಡಿಸಲಾಗುತ್ತಿದೆ ಹಾಗೂ ಪ್ರತಿ ನಿಮಿಷಕ್ಕೆ 1000 ಕೆಎಲ್‌ ಆಮ್ಲಜನಕ ಪೂರೈಕೆ ಮಾಡುವ ಆಕ್ಸಿಜನ್‌ ಜನರೇಟರ್‌ ಹಾಕಲಿಕ್ಕೂ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಕೆಲ ದಿನಗಳಲ್ಲೇ ಇವೆಲ್ಲ ಸೌಲಭ್ಯಗಳು ಕಾರ್ಯಾಚರಣೆಗೆ ಬರಲಿವೆ ಎಂದು ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.