ಚುನಾವಣಾ ಆಯೋಗ ಅನುಮತಿ ನೀಡಿದರೆ ಸಾರಿಗೆ ನೌಕರರ ಸಂಬಳ ಜಾಸ್ತಿ : ಸವದಿ


Team Udayavani, Apr 5, 2021, 6:14 PM IST

khhytuhfd

ಬೆಂಗಳೂರು : ಸಾರಿಗೆ ನೌಕರರು ದಿಢೀರ್ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು. ಒಕ್ಕೂಟದ ನೌಕರರು ಮತ್ತು ಟ್ರೇಡ್ ಯುನಿಯನ್ ಅವರು  9 ಬೇಡಿಕೆ ಮುಂದಿಟ್ಟರು. ನಾವು ಅವರ ಬೇಡಿಕೆಗಳ ಭರವಸೆ ಪತ್ರವನ್ನು ಲಿಖಿತ ರೂಪದಲ್ಲಿ ನೀಡಿ, ಎಂಟು ಬೇಡಿಕೆ ಈಡೆರಿಸಿ ಆದೇಶ ಹೊರಡಿಸಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಪತ್ರಕರ್ತರ ಜೊತೆ ಮಾತನಾಡಿದ ಅವರು, ಆರೋಗ್ಯ ಭಾಗ್ಯ ಸಂವೀಜಿವಿನಿ ಯೋಜನೆ, ಕೊರೊನಾ ಸೋಂಕಿನಿಂದ ನಿಧನ ಹೊಂದಿದರೆ ಆ ಕುಟುಂಬಕ್ಕೆ 30 ಲಕ್ಷ ಪರಿಹಾರ ನೀಡುವುದು, ನಿಗಮದಲ್ಲಿ ಎಚ್ ಆರ್ ಎಂ ಎಸ್ ಆದೇಶ ಪಾಲಿಸಲು ಬೇಡಿಕೆ ಈಡೇರಿಕೆ, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಬಾಟಾ ನೀಡುವುದು, ಘಟಕದ ವ್ಯಾಪ್ತಿಯಲ್ಲಿ ಮೇಲಾಧಿಕಾರಿಗಳ.ಕಿರುಕುಳ ತಪ್ಪಿಸಲು ಸಮಿತಿ ರಚನೆ, ಎನ್ ಐ ಎನ್ ಸಿ ನಾನ್ ಡ್ಯೂಟಿ ನಾನ್ ಕಲೆಕ್ಟ್ ವ್ಯವಸ್ಥೆ ರದ್ದುಗೊಳಿಸಬೇಕು,  ಹಣ ಪಡೆದು ಟಿಕೆಟ್ ನೀಡದಿರುವವರ ಮೇಲೆ ಮಾತ್ರ ಕ್ರಮ ತೆಗೆದುಕೊಳ್ಳಬೇಕು ಎಂದರು.

ತಾಂತ್ರಿಕ ತೊಂದರೆ ಇದ್ದರೂ ಅವಕಾಶ ನೀಡಲಾಗಿದೆ ಬಿಎಂಟಿಸಿಯಲ್ಲಿ ಶೇ 60 ರಷ್ಟು ಉತ್ತರ ಕರ್ನಾಟಕದವರಿದ್ದಾರೆ. ಪ್ರತಿಶತ ಶೇ 2 ರಷ್ಟು ವರ್ಗಾವಣೆ ಮಾಡಲು ಅವಕಾಶ ನೀಡಲಾಗಿದೆ.  ಎನ್ ಇ.ಆರ್.ಟಿಸಿ ಗೆ ವರ್ಗಾವಣೆ ಮಾಡಿದರೆ ಅರ್ಧ ಹಣವನ್ನು ಎರಡೂ ನಿಗಮಗಳು ನೀಡಬೇಕು. ಈಗ 2 ರಷ್ಟು ವರ್ಗಾವಣೆಗೆ ಒಪ್ಪಿದ್ದೇವೆ. ಇನ್ನು ಹೆಚ್ಚಿಗೆ ಕೇಳಿದರೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಎರಡು ವರ್ಷದ ತರಬೇತಿ ಸಮಯವನ್ನು ಒಂದು ವರ್ಷಕ್ಕೆ ಇಳಿಸಲು ಬೇಡಿಕೆ ಇಟ್ಟುದ್ದು, ಅದನ್ನು ಒಪ್ಪಿಕೊಂಡಿದ್ದೇವೆ. ರಾಜ್ಯ ಸರ್ಕಾರದ ಆರನೇ ವೇತನ ಆಯೋಗದ ಸಮನಾಗಿ ವೇತನ ನೀಡಲು ಆಗ್ರಹ ಮಾಡಿದ್ದಾರೆ. ಹಣಕಾಸಿನ ಇತಿಮಿತಿ ನೋಡಿಕೊಂಡು ನಾವು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕೋವಿಡ್ ಪೂರ್ವದಲ್ಲಿ ಪ್ರತಿ ನಿತ್ಯ 1.ಕೋಟಿ ಜನರು ಸಂಚಾರ ಮಾಡುತ್ತಿದ್ದರು. ಈಗ 65 ರಷ್ಟು ಜನರು ಮಾತ್ರ ಸಂಚಾರ ಮಾಡುತ್ತಿದ್ದಾರೆ. ನಮಗೆ ಇನ್ನೂ 35% ಕೊರತೆ ಇದೆ. ಟಿಕೆಟ್ ಮೂಲಕ ಬರುವ ಆದಾಯ ಇಂಧನ ಮತ್ತು ವೇತನಕ್ಕೆ 1962 ಕೋಟಿ ಕೊರತೆಯಾಗುತ್ತದೆ. ಈ ಕೊರತೆ ಹಣವನ್ನು ರಾಜ್ಯ ಸರ್ಕಾರದ ಬೊಕ್ಕಸದಿಂದ ನೀಡಿದ್ದಾರೆ. ಇದುವರೆಗೂ ಸಂಬಳದಲ್ಲಿ ಕಡಿತ ಮಾಡದೇ ಸಂಬಳ ನೀಡಲಾಗಿದೆ. ಸಂಬಳ ಜಾಸ್ತಿ ಮಾಡುವ ಬೇಡಿಕೆಯನ್ನು ಸಕಾರಾತ್ಮಕವಾಗಿ ಹಣಕಾಸಿನ ತೊಂದರೆ ಇದ್ದರೂ ನಿಮ್ಮ ಮನವಿಗೆ ಸ್ಪಂದಿಸಲು ಕೋಡ್ ಆಫ್ ಕಂಡಕ್ಟ್ ಜಾರಿಯಲ್ಲಿದೆ ಎಂದರು.

ಈಗ ಏನಾದರೂ ಜಾರಿ ಮಾಡಿದರೆ ಚುನಾವಣೆ ನೀತಿ ಸಂಹಿತೆ ಅಡ್ಡಿ ಬರುತ್ತಿದೆ. ಈ ಸಂದರ್ಭದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ಮಾಡುವ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅವರು ಅನುಮತಿ ನೀಡಿದರೆ, ಸಂಬಳ ಹೆಚ್ಚು ಮಾಡುವ ನಿರ್ಣಯ ಕೈಗೊಳ್ಳುತ್ತೇವೆ. ಈಗಾಗಲೇ ಹಣಕಾಸು ಇಲಾಖೆ ಜೊತೆ ಮಾತುಕತೆ ನಡೆಸಿದ್ದೇವೆ ಎಂದರು.

ಪ್ರತಿಭಟನೆ ನಡೆಸಲು ಮುಂದಾಗಿರುವ ಸೌಕರರು ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಕೊರೊನಾ ಎರಡನೇ ಅಲೆ ಹೆಚ್ಚಳ ಅಗಿದ್ದರಿಂದ ಶೇ 5% ರಷ್ಟು ಪ್ರಯಾಣಿಕರ ಕೊರತೆಯಾಗಿದೆ. ನಾಲ್ಕೂ ನಿಗಮದಲ್ಲಿ 3200 ಕೋಟಿ ನಷ್ಟ ಅನುಭವಿಸುತ್ತಿವೆ.  ಈ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡಿದರೆ ಮತ್ತಷ್ಟು ಹೊರೆಯಾಗಲಿದೆ ಆದರೂ ಅವರ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧವಾಗಿದೆ. ಚುನಾವಣಾ ಆಯೋಗದ ಅನುಮತಿ ದೊರೆಯದಿದ್ದರೆ ಮೇ 4 ರ ವರೆಗೆ ಕೋಢ್ ಅಪ್ ಕಂಡಕ್ಟ್ ಇದೆ ಎಂದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.