ಕ್ಷೇತ್ರವಾರು ಹೊಣೆಗಾರಿಕೆಗೆ ತೀರ್ಮಾನ
Team Udayavani, Nov 16, 2019, 3:03 AM IST
ಬೆಂಗಳೂರು: ಉಪ ಚುನಾವಣೆಯಲ್ಲಿ ವಿಧಾನಸಭೆ ಹಾಗೂ ಪರಿಷತ್ ಸದಸ್ಯರಿಗೆ ಕ್ಷೇತ್ರವಾರು ಹೊಣೆಗಾರಿಕೆ ನೀಡಲು ಜೆಡಿಎಸ್ ಶಾಸಕಾಂಗ ಪಕ್ಷ ತೀರ್ಮಾನಿಸಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವ ಪ್ರತಿ ಕ್ಷೇತ್ರಕ್ಕೆ ಮೂವರು ಶಾಸಕರು ಹಾಗೂ ಇಬ್ಬರು ಪರಿಷತ್ ಸದಸ್ಯರಿಗೆ ಉಸ್ತುವಾರಿ ವಹಿಸಲು ನಿರ್ಧರಿಸಲಾಯಿತು.
ಯಾವ್ಯಾವ ಕ್ಷೇತ್ರಕ್ಕೆ ಯಾರ್ಯಾರು ಉಸ್ತು ವಾರಿ ಎಂಬುದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಜತೆ ಚರ್ಚಿಸಿ ಶನಿವಾರ ಸಂಜೆ ಅಂತಿಮಗೊಳಿ ಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಉಪ ಚುನಾವಣೆಯಲ್ಲಿ ನಾವು ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದ ವಿರುದ್ಧ ಹೋರಾಟ ಮಾಡಬೇಕು. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳಲು ಶ್ರಮ ಹಾಕಲೇಬೇಕು ಎಂದು ಹೇಳಿದರು.
ಉಪ ಚುನಾವಣೆ ನಂತರ ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗಲಿದ್ದು, ಜೆಡಿಎಸ್ಗೆ ಉತ್ತಮ ಭವಿಷ್ಯ ಇದೆ. ಉಪ ಚುನಾವಣೆ ನಂತರದ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷವು ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಹೀಗಾಗಿ, ಎಲ್ಲರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ