ಮೀನುಗಾರರ ಸಹಾಯಧನ ನಿಯಮ ಬದಲಾವಣೆಗೆ ನಿರ್ಧಾರ: ಸಚಿವ ಅಂಗಾರ
Team Udayavani, Sep 19, 2021, 6:30 AM IST
ದಾವಣಗೆರೆ: ಒಳನಾಡು ಮೀನುಗಾರಿಕೆ ನಡೆಸುವವರಿಗೆ ಸಹಾಯಧನ ನೀಡುವ ಯೋಜನೆಯ ನಿಯಮಗಳನ್ನು ಬದಲಾಯಿಸಲು ಉದ್ದೇಶಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಹೇಳಿದರು.
ಶನಿವಾರ ಹರಿಹರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಒಂದು ಹೆಕ್ಟೇರ್ನಲ್ಲಿ ಮೀನುಗಾರಿಕೆ ಕೈಗೊಳ್ಳುವವರಿಗೆ ಸಹಾಯಧನ ನೀಡಲಾಗುತ್ತಿದೆ. ಇದರಿಂದ ಸಣ್ಣ ಪ್ರಮಾಣದಲ್ಲಿ ಮೀನುಗಾರಿಕೆ ಮಾಡುವವರಿಗೆ ಸಹಾಯಧನ ನೀಡಲು ತೊಂದರೆ ಇದೆ. ಹೀಗಾಗಿ ಶೀಘ್ರದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಗಳ ಬದಲಾಯಿಸಲಾಗುವುದು ಎಂದರು.
ಮಂಗಳೂರಿನಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಸಚಿವರು ಹೇಳಿದರು.