ಟಿಕೆಟ್‌ ಹಂಚಿಕೆ ಬಳಿಕ ಅಭ್ಯರ್ಥಿಗಳ ಘೋಷಣೆ

Team Udayavani, Feb 24, 2019, 1:42 AM IST

ರಾಯಚೂರು: ಟಿಕೆಟ್‌ ಹಂಚಿಕೆ ಬಳಿಕವೇ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರಿವರ್ತನೆ ಯಾತ್ರೆ ಸಮಾವೇಶ ಆರಂಭಿಸಲಾಗಿದೆ.

ಮೈತ್ರಿ ಸರ್ಕಾರದಿಂದ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸುತ್ತಿದ್ದೇವೆ. ಟಿಕೆಟ್‌ ಹಂಚಿಕೆ ಅಂತಿಮಗೊಳಿಸಿದ ಬಳಿಕವೇ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಮೈತ್ರಿಯಲ್ಲಿ ನಮ್ಮದು ಜವಾಬ್ದಾರಿಯುತ ನಡತೆ. ಅಮಿತ್‌ ಶಾ ಕರ್ನಾಟಕಕ್ಕೆ ಬಂದು ಆಪರೇಷನ್‌ ಕಮಲ ಬೇಡ ಲೋಕಸಭೆ ಚುನಾವಣೆ ಮುಗಿದ ಮೇಲೆ ನೋಡೋಣ ಎಂದಿದ್ದಾರೆ. ಅಂಥವರಿಗೆ ಮಹಾಘಟ ಬಂಧನ್‌ ಬಗ್ಗೆ ಟೀಕಿಸುವ ಯಾವ ನೈತಿಕತೆಯೂ ಇಲ್ಲ. ಮೈತ್ರಿಬಗ್ಗೆ ವ್ಯಂಗ್ಯವಾಗಿ ಮಾತನಾಡುವವರು ತಮಿಳುನಾಡು, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿ ಏಕೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಕೇವಲ ನೀತಿಗೆಟ್ಟ ರಾಜಕಾರಣ ಮಾಡುತ್ತಿದೆ. ಸರ್ಜಿಕಲ್‌ ಸ್ಟ್ರೆಕ್‌ನಲ್ಲಿ ಸಫಲಾರಾಗಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುವವರು, ಪುಲ್ವಾಮಾ ದುರ್ಘ‌ಟನೆಯ ವೈಫಲ್ಯದ ಹೊಣೆಯನ್ನೂ ಹೊತ್ತುಕೊಳ್ಳಲಿ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ