ಶಿಕ್ಷಣ ನೀತಿ ಜಾರಿ: ರಾಜ್ಯಪಾಲರ ಜತೆ DCM ಅಶ್ವತ್ಥನಾರಾಯಣ ಮಹತ್ವದ ಚರ್ಚೆ


Team Udayavani, Aug 28, 2020, 10:14 PM IST

ಶಿಕ್ಷಣ ನೀತಿ ಜಾರಿ: ರಾಜ್ಯಪಾಲರ ಜತೆ DCM ಅಶ್ವತ್ಥನಾರಾಯಣ ಮಹತ್ವದ ಚರ್ಚೆ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು.

ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ ಸಂಗತಿಗಳ ಬಗ್ಗೆ ರಾಜ್ಯಪಾಲರ ಜತೆ ವಿಚಾರ ವಿನಿಮಯ ಮಾಡಿಕೊಂಡರು.

ಇಡೀ ದೇಶದಲ್ಲಿಯೇ ಇತರೆ ರಾಜ್ಯಗಳಿಗಿಂತ ಮೊದಲು ಶಿಕ್ಷಣ ನೀತಿಯನ್ನು ಜಾರಿ ಮಾಡುವುದು ಸರಕಾರದ ಉದ್ದೇಶವಾಗಿದೆ. ಅದಕ್ಕಾಗಿ ಬೇಕಾಗಿರುವ ಎಲ್ಲ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

ಇದುವರೆಗೂ ಕಾರ್ಯಪಡೆ ಹಾಗು ಕಾರ್ಯಪಡೆಯ ಉಪ ಸಮಿತಿಗಳು ನೀಡಿರುವ ಸಲಹೆಗಳು ಮತ್ತು ವರದಿಗಳು ಸೇರಿದಂತೆ ಹತ್ತು ಹಲವು ಸಂಗತಿಗಳ ಬಗ್ಗೆ ಚರ್ಚಿಸಿರುವ ಅಂಶಗಳ ಬಗ್ಗೆ ಉಪಮುಖ್ಯಮಂತ್ರಿ ಅವರು ರಾಜ್ಯಪಾಲರಿಗೆ ವಿವರಿಸಿದರು.

ನೀತಿಯಲ್ಲಿ ಅಡಕವಾಗಿರುವ ಪ್ರಮುಖ ವಿಷಯಗಳು, ಅವುಗಳ ಜಾರಿಯಿಂದ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಆಗಲಿರುವ ಮಹತ್ವದ ಬದಲಾವಣೆಗಳ ಬಗ್ಗೆಯೂ ಅವರು ರಾಜ್ಯಪಾಲರಿಗೆ ವಿವರಣೆ ನೀಡಿದರಲ್ಲದೆ, ಈ ಸಂಬಂಧ ರಾಜ್ಯ ಸರಕಾರ ತರಲಿಚ್ಛಿಸಿರುವ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಬದಲಾವಣೆಗಳ ಬಗ್ಗೆಯೂ ಮಾಹಿತಿ ನೀಡಿದರು.

ಸಲಹೆ ನೀಡಿದ ರಾಜ್ಯಪಾಲರು:
ಇದೇ ವೇಳೆ ಶಿಕ್ಷಣ ನೀತಿ ಜಾರಿಯ ನಿಟ್ಟಿನಲ್ಲಿ ವೇಗವಾಗಿ ಹೆಜ್ಜೆಗಳನ್ನು ಇಡುತ್ತಿರುವ ಸರಕಾರದ ಬಗ್ಗೆ ಹರ್ಷ ವ್ಯಕ್ತಪಡಿಸಿದ ರಾಜ್ಯಪಾಲರು, ಕೆಲ ಮಹತ್ವದ ಸಲಹೆಗಳನ್ನು ನೀಡಿದರು. ಜತೆಗೆ, ಡಿಸಿಎಂ ಜತೆಯಲ್ಲೇ ತಮ್ಮನ್ನು ಭೇಟಿಯಾಗಿದ್ದ ಶಿಕ್ಷಣನೀತಿ ನಿರೂಪಣಾ ಸಮಿತಿ ಸದಸ್ಯ ಹಾಗೂ ಅಜೀಂ ಪ್ರೇಮ್ ಜೀ ವಿವಿಯ ಉಪ ಕುಲಪತಿ ಪ್ರೊ. ಅನುರಾಗ್ ಬೇಹರ್ ಅವರಿಂದ ನೀತಿಯಲ್ಲಿರುವ ಮತ್ತಷ್ಟು ಅಂಶಗಳ ಬಗ್ಗೆ ವಿವರಣೆ ಪಡೆದರು. ಜತೆಗೆ, ಡಿಸಿಎಂ ಅವರಿಗೆ ಕೆಲ ಮುಖ್ಯ ಸಲಹೆಗಳನ್ನೂ ನೀಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಆದಷ್ಟು ಬೇಗ ಹಂತ ಹಂತವಾಗಿ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಪಡೆಯು ನೀತಿಯ ಜಾರಿಯ ಬಗ್ಗೆ ಅಂತಿಮ ನೀಲನಕ್ಷೆಯನ್ನು ನೀಡುವುದು ಬಾಕಿ ಇದ್ದು, ಅದು ಕೈಸೇರಿದ ಕೂಡಲೇ ಅನುಷ್ಟಾನದ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಡಿಸಿಎಂ ಅವರು ರಾಜ್ಯಪಾಲರಿಗೆ ತಿಳಿಸಿದರು. ಈ ಭೇಟಿಯ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಅವರು ಹಾಜರಿದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.