ರಾಷ್ಟ್ರಪತಿ ಸ್ಥಾನಕ್ಕೆ ದೇವೇಗೌಡರು ಸ್ಪರ್ಧಿಸಲ್ಲ: ಎಚ್.ಡಿ .ಕುಮಾರಸ್ವಾಮಿ
Team Udayavani, Jun 17, 2022, 8:41 PM IST
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ.ದೇವೇಗೌಡರು ರಾಷ್ಟ್ರಪತಿ ಹು¨ªೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು. 17 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.
ಜೂನ್ 20ರಂದು ಮತ್ತೂಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಅಂತಿಮ ಮಾಡಲಾಗುತ್ತದೆ ಎಂದು ಹೇಳಿದರು.
ದೇವೇಗೌಡರಿಗೆ ಜೀವನದಲ್ಲಿ ಒಮ್ಮೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ. ಸ್ವತಂತ್ರ ಸರ್ಕಾರದ ಬಗ್ಗೆ ಅವರ ಆಸೆ ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಆದರ ಹೊರತಾಗಿ, ರಾಷ್ಟ್ರಪತಿ ಹುದ್ದೆಯ ಬಗ್ಗೆ ದೇವೇಗೌಡರ ಒಲವು ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ