ಡಿಐಜಿ ರಮೇಶ್‌ ನಿಧನ

Team Udayavani, Aug 27, 2019, 3:02 AM IST

ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಡಿಐಜಿ ಆರ್‌. ರಮೇಶ್‌ (54) ಸೋಮವಾರ ನಿಧನ ಹೊಂದಿ ದ್ದಾರೆ. ಅನಾರೋಗ್ಯದಿಂದ ಬಳಲು ತ್ತಿದ್ದ ಡಿಐಜಿ ರಮೇಶ್‌ ಅವರು ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು. ಆದರೆ, ಚಿಕಿತ್ಸೆ ಫ‌ಲಿಸದೆ ಸೋಮವಾರ ಬೆಳಗ್ಗೆ 7.45ರ ಸುಮಾರಿಗೆ ಮೃತ ಪಟ್ಟಿ ದ್ದಾರೆಂದು ಪೊಲೀಸ್‌ ಇಲಾಖೆ ತಿಳಿಸಿದೆ.

ಪ್ರಾಮಾಣಿಕತೆ ಹಾಗೂ ಸರಳ ವ್ಯಕ್ತಿತ್ವ ಹೊಂದಿದ್ದ ಅಧಿಕಾರಿ ಎಂದೇ ಇಲಾಖೆಯಲ್ಲಿ ಗುರುತಿಸಿ ಕೊಂಡಿದ್ದ ರಮೇಶ್‌ ಅವರ ಅಕಾಲಿಕ ನಿಧನಕ್ಕೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌. ರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಸಂತಾಪ ಸೂಚಿ ಸಿದ್ದು, ಕಂಬನಿ ಮಿಡಿದಿದ್ದಾರೆ. ದಾಬಸ್‌ ಪೇಟೆಯ ಸಮೀ ಪದ ಮೈಲನ ಹಳ್ಳಿಯಲ್ಲಿ ರಮೇಶ್‌ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಸರ್ಕಾರಿ ಗೌರವ ಗಳೊಂದಿಗೆ ನೆರವೇರಿತು.

ಸರಳ ವ್ಯಕ್ತಿತ್ವದ ಅಧಿಕಾರಿ: 1990ರ ಬ್ಯಾಚ್‌ನ ಕೆಎಸ್‌ಪಿಎಸ್‌ ಅಧಿಕಾರಿ ರಮೇಶ್‌ ಅವರು ಆರಂಭದಲ್ಲಿ ಕಾರ್ಕಳ ಉಪವಿಭಾಗದ ಡಿಎಸ್‌ಪಿ ಆಗಿ ಸೇವೆ ಸಲ್ಲಿಸಿದ್ದರು. 2005ರಲ್ಲಿ ಐಪಿಎಸ್‌ಗೆ ಮುಂಬಡ್ತಿ ಪಡೆದ ಅವರು ರಾಜ್ಯ ಗುಪ್ತಚರ ದಳ, ಮಂಗಳೂರು ಡಿಸಿಪಿ, ಉತ್ತರ ಕನ್ನಡ ಎಸ್ಪಿ, ಬೆಂಗ ಳೂರು ಅಪರಾಧ ವಿಭಾಗದ ಡಿಸಿಪಿ ಸೇರಿ ಹಲವೆಡೆ ಗಮನಾರ್ಹ ಕಾರ್ಯ ನಿರ್ವಹಿಸಿದ್ದರು. 2016ರಲ್ಲಿ ಡಿಐಜಿ ಹುದ್ದೆಗೆ ಮುಂಬಡ್ತಿ ಪಡೆದ ಅವರು ಸದ್ಯ ಪೊಲೀಸ್‌ ಪ್ರಧಾನ ಕಚೇರಿಯ ಯೋಜನೆ ಮತ್ತು ಆಧು ನಿಕರಣ ವಿಭಾಗದ ಡಿಐಜಿ ಆಗಿ ಸೇವೆ ಸಲ್ಲಿಸುತ್ತಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ