ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್ ಗುಂಡೂರಾವ್
Team Udayavani, Aug 18, 2022, 10:30 PM IST
ಬೆಂಗಳೂರು: ಮಡಿಕೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಮೊಟ್ಟೆ ಎಸೆದಿರುವುದು ಹೇಡಿಗಳ ಲಕ್ಷಣ ಎಂದು ಶಾಸಕ ಹಾಗೂ ಎಐಸಿಸಿಯ ತಮಿಳುನಾಡು ಮತ್ತು ಗೋವಾ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಕೃತ್ಯ ಬಿಜೆಪಿಯವರ ಹತಾಶೆ ತೋರಿಸುತ್ತಿದೆ. ಸಿದ್ದರಾಮಯ್ಯ ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಇಂತಹ ಹೀನ ನಡೆ ಪ್ರದರ್ಶಿಸುತ್ತಿದೆ. ಇದೊಂದು ಸರ್ಕಾರಿ ಪ್ರಾಯೋಜಿತ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಗೂಂಡಾವರ್ತನೆ ತೋರಿದ್ದಾರೆ. ವಿಪಕ್ಷದ ನಾಯಕರಿಗೆ ಈ ರಾಜ್ಯದಲ್ಲಿ ಭದ್ರತೆ ಇಲ್ಲ. ಹೀಗಿರುವಾಗ ಜನಸಾಮಾನ್ಯರ ರಕ್ಷಣೆ ಎಲ್ಲಿ? ಇದು ಗಂಭೀರ ಸ್ವರೂಪದ ಲೋಪ ಎಂದು ಕಿಡಿಕಾರಿದ್ದಾರೆ.
ಇಂತಹ ಕಿಡಿಗೇಡಿ ಕೃತ್ಯ ನಡೆಸುವ ಮೂಲಕ ವಿಪಕ್ಷದ ಬಾಯಿ ಮುಚ್ಚಿಸಬಹುದು ಎಂದು ಸರ್ಕಾರ ಭಾವಿಸಿರಬಹುದು. ಆದರೆ ನಾವು ಹೆದರುವ ಪ್ರಶ್ನೆಯೇ ಇಲ್ಲ. ಸಿದ್ದರಾಮೋತ್ಸವ ಭರ್ಜರಿ ಯಶಸ್ಸಿನ ನಂತರ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಆರೋಪಿಸಿದ್ದಾರೆ
ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಮತ್ತು ಕಪ್ಪು ಬಾವುಟ ಪ್ರದರ್ಶಿಸಿರುವುದು ಖಂಡನೀಯ. ಬಿಜೆಪಿಯ ಮನುವಾದಿಗಳಿಗೆ ಶೂದ್ರರು- ಹಿಂದುಳಿದವರೆಂದರೆ ಕೆಂಡದಂತಹ ಕೋಪ ಎಂಬುದಕ್ಕೆ ಇದೇ ಸಾಕ್ಷಿ. ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಲಾದೆ ಹೀನ ಕೃತ್ಯಗಳ ಮೂಲಕ ತಮ್ಮ ಸಂಸ್ಕೃತಿಯನ್ನು ಬಿಜೆಪಿಗರು ತೋರಿದ್ದಾರೆ.-ಎಂ.ಬಿ.ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್