ಬರ ಪರಿಹಾರ ತಾರತಮ್ಯ ಪಿಎಂಗೆ ದಿನೇಶ್‌ ಪತ್ರ

Team Udayavani, Feb 4, 2019, 1:52 AM IST

ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿದ್ದು, ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ 23 ಜಿಲ್ಲೆಗಳ ನೂರು ತಾಲೂಕು ಬರಗಾಲಕ್ಕೆ ತುತ್ತಾಗಿದ್ದು, 2,434 ಕೋಟಿ ರೂ. ನಷ್ಟ ಉಂಟಾಗಿದೆ. ಈ ಕುರಿತು ಎನ್‌ಡಿಆರ್‌ಎಫ್ ನಿಧಿಯಿಂದ ರಾಜ್ಯಕ್ಕೆ ಕೇವಲ 949.49 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಒಟ್ಟು ನಷ್ಟದ ಶೇ. 40ರಷ್ಟು ಪರಿಹಾರ ನೀಡಿದಂತಾಗಿದೆ. ಕರ್ನಾಟಕಕ್ಕೆ ಇನ್ನೂ ಸುಮಾರು 500 ರಿಂದ 600 ಕೋಟಿ ರೂ. ಕೇಂದ್ರ ಸರ್ಕಾರ ಬರ ಪರಿಹಾರವಾಗಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ