ಡಿನೋಟಿಫೈ ಪ್ರಕರಣ:ಬಿಎಸ್ವೈ ಸದ್ಯ ನಿರಾಳ
Team Udayavani, Sep 1, 2017, 7:26 AM IST
ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ನಾಲ್ಕು ದಿನದ ಮಟ್ಟಿಗೆ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ (ಸೆ.4) ಮುಂದೂಡಿತು.
ಹೀಗಾಗಿ, ದೂರಿನ ಸಂಬಂಧ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶನ ನೀಡಿ ಆ.23ಕ್ಕೆ ಹೈಕೋರ್ಟ್ ನೀಡಿದ್ದ ಆದೇಶ ಸೆ.4ರವರೆಗೆ ವಿಸ್ತರಣೆಯಾಗಲಿದೆ. ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್, ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆಯನ್ನು ಸೆ.4ಕ್ಕೆ ಮುಂದೂಡಿದರು.
ಗುರುವಾರದ ವಿಚಾರಣೆ ವೇಳೆ ಎಸಿಬಿ ಪರ ವಾದ ಮಂಡಿಸಿದ ಪ್ರೊ. ರವಿವರ್ಮ ಕುಮಾರ್, ವಿವಿಧ ಡಿನೋಟಿಫಿಕೇಷನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಕೈಗೊಳ್ಳಲಾದ ಕ್ರಮಗಳನ್ನು ನ್ಯಾಯಪೀಠದ ಮುಂದೆ ವಿವರಿಸಿದರು. ವಾದ ಮಂಡನೆಗೆ ಇನ್ನಷ್ಟು ಕಾಲಾವಕಾಶ ಬೇಕು ಎಂದು ಎರಡೂ ಕಡೆಯ ವಕೀಲರು ಕೇಳಿಕೊಂಡಿ ದ್ದಕ್ಕೆ ನ್ಯಾಯಮೂರ್ತಿಯವರು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ