ವೇತನ ವಿಳಂಬವಿಲ್ಲದೇ ಪಾವತಿಸಲು ನಿರ್ದೇಶನ
Team Udayavani, Dec 23, 2019, 3:00 AM IST
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ವೇತನ ವಿಳಂಬವಾಗದಂತೆ ಇನ್ನು ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ.
ಶಿಕ್ಷಕರ ವೇತನ ಪಾವತಿಗಾಗಿ ಜಿಲ್ಲೆ ಅಥವಾ ತಾಲೂಕು ಪಂಚಾಯಿತಿಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರು (ಡಿಡಿಪಿಐ)ಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಂದ ಪ್ರಸ್ತಾವನೆ ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು.
ಇದರಿಂದ ವೇತನ ಪಾವತಿ ವಿಳಂಬವಾಗುವುದನ್ನು ತಡೆಯಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಕಾರ್ಯದರ್ಶಿಯವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಶಿಕ್ಷಕರ ವೇತನ ಪಾವತಿ ವಿಳಂಬ ಎಂಬುದು ಸಾಮಾನ್ಯ ಸಂಗತಿಯಾಗಿದ್ದು, ರಾಜ್ಯದ ಹಲವಾರು ಕಡೆಗಳಲ್ಲಿ ಆಕ್ಷೇಪಗಳು ಕೇಳಿ ಬರುತ್ತಿವೆ.
ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಗೆ ಒಳಪಟ್ಟ ಶಿಕ್ಷಕರ ಗೋಳು ಇನ್ನಷ್ಟು ಹೆಚ್ಚಿದೆ. ವೇತನ ವಿಳಂಬವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರೂ ಸೂಚನೆ ನೀಡಿದ್ದರು. ಅದರ ಫಲವಾಗಿ, ಡಿಡಿಪಿಐಗಳು ಸರಿಯಾಗಿ ಕಾರ್ಯ ನಿರ್ವಹಿಸಿದರೆ ವೇತನ ಪಾವತಿ ವಿಳಂಬವಾಗುವುದಿಲ್ಲ ಎಂಬ ಭರವಸೆಯನ್ನು ಪ್ರಧಾನ ಕಾರ್ಯದರ್ಶಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ