ಸಿದ್ದರಾಮಯ್ಯ ಜೊತೆ ಕೂತು ಪರಿಷತ್ ಟಿಕೆಟ್ ಶಿಫಾರಸು ಅಂತಿಮಗೊಳಿಸಿದ್ದೇವೆ: ಡಿ.ಕೆ.ಶಿವಕುಮಾರ್
Team Udayavani, May 22, 2022, 11:54 AM IST
ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ಅವೆಲ್ಲ ಹೆಸರು ನಾವು ಕಳುಹಿಸಿದ್ದೇವೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶಿಫಾರಸು ಮಾಡಿದ್ದನ್ನು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಇಬ್ಬರು (ಸಿದ್ದರಾಮಯ್ಯ) ಕೂತುಕೊಂಡೇ ಒಮ್ಮತವಾಗಿಯೇ ಶಿಫಾರಸು ಮಾಡಿದ್ದೇವೆ ಎಂದರು.
ಇದನ್ನೂ ಓದಿ:ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು; ಮುಖ್ಯಮಂತ್ರಿ ಬೊಮ್ಮಾಯಿ
ಇರುವುದೇ ಎರಡು ಸ್ಥಾನ, ಅದಕ್ಕೆ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಶಿಫಾರಸು ಮಾಡಿದ್ದೇವೆ. ರಾಜ್ಯಸಭೆಯ ಟಿಕೆಟ್ ಬಗ್ಗೆ ಇನ್ನೂ ಏನೂ ತೀರ್ಮಾನವಾಗಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.