ಆದಾಯ ಮೀರಿ ಆಸ್ತಿ ಪ್ರಕರಣ: ಡಿಕೆಶಿ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
Team Udayavani, Aug 8, 2022, 8:16 PM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.
ಅರ್ಜಿಯು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಆಗ, ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಅರ್ಜಿಯ ಅಂಶಗಳ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಬೇಕಾಗಿರುವುದರಿಂದ ಆಕ್ಷೇಪಣೆ ಸಲ್ಲಿಸಲು ಇನ್ನಷ್ಟು ಸಮಯ ಬೇಕು ಎಂದು ಕೋರಿದರು.
ಅದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?