ತೆರಿಗೆ ವಂಚನೆ: 3 ಪ್ರಕರಣಗಳಲ್ಲಿ ಡಿಕೆಶಿ ದೋಷಮುಕ್ತ
Team Udayavani, Mar 1, 2019, 12:30 AM IST
ಬೆಂಗಳೂರು: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ದಾಖಲಿಸಿಕೊಂಡಿದ್ದ ಮೂರು ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ದೋಷಮುಕ್ತಗೊಳಿಸಿದೆ.
ಆದಾಯ ತೆರಿಗೆ ಇಲಾಖೆ ದಾಖಲಿಸಿಕೊಂಡಿರುವ ಪ್ರಕರಣಗಳನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಫೆ.6ಕ್ಕೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ, ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಮರ್ಪಕ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಕೈಬಿಟ್ಟಿರುವ ನ್ಯಾಯಾಲಯ, ಸೂಕ್ತ ದಾಖಲೆಗಳೊಂದಿಗೆ ಮತ್ತೂಮ್ಮೆ ಪ್ರಕರಣ ದಾಖಲಿಸಿ ಕೊಳ್ಳಲು ಅವಕಾಶ ನೀಡಿ ಆದೇಶಿಸಿದೆ.
ಪ್ರಕರಣದಲ್ಲಿ ವಾದ ಮಂಡಿಸಿದ ಡಿಕೆಶಿ ಪರ ವಕೀಲರು, ತಮ್ಮ ಕಕ್ಷಿದಾರರ ವಿರುದಟಛಿ ದೂರು ಸಲ್ಲಿಸಿದ ಅಧಿಕಾರಿಗೆ ಅಂತಹ ಅಧಿಕಾರ ವಿರಲಿಲ್ಲ. ಹೀಗಾಗಿ ದೂರು ದಾಖಲು ಕಾನೂನು ಬಾಹಿರ ಹಾಗೂ ಆಧಾರ ರಹಿತ. ಈ ಅಂಶಗಳನ್ನು ಪರಿಗಣಿಸಿ ದೂರನ್ನು ರದ್ದು ಮಾಡ ಬೇಕು ಎಂದು ನ್ಯಾಯಾಲಯಕ್ಕೆ ವಿವರಿಸಿದ್ದರು.
2017ರ ಆಗಸ್ಟ್ನಲ್ಲಿ ಡಿ.ಕೆ.ಶಿವಕುಮಾರ್ ಮತ್ತವರ ಸಂಬಂಧಿಕರು, ಸ್ನೇಹಿತರಿಗೆ ಸಂಬಂಧಪಟ್ಟ ಸ್ಥಳಗಳ ಮೇಲೆ ಐಟಿ ದಾಳಿ ನಡೆಸಲಾಗಿತ್ತು. 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿ 300 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಲಾಗಿತ್ತು. 2016, 2017 ಮತ್ತು 2018ನೇ ಆರ್ಥಿಕ ವರ್ಷದ ತೆರಿಗೆಯನ್ನು ಪಾವತಿಸದೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!