ಅಶ್ವತ್ಥ್ ನಾರಾಯಣ್ – ಎಂ.ಬಿ. ಪಾಟೀಲ್ ಭೇಟಿ ಈ ಬಗ್ಗೆ ಡಿಕೆಶಿ ಹೇಳಿದ್ದೇನು ?

Team Udayavani, May 10, 2022, 3:02 PM IST

ಅಶ್ವತ್ಥ್ ನಾರಾಯಣ್ – ಎಂ.ಬಿ. ಪಾಟೀಲ್ ಭೇಟಿ ಈ ಬಗ್ಗೆ ಡಿಕೆಶಿ ಹೇಳಿದ್ದೇನು ?

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತಬಾರದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಎಂ.ಬಿ. ಪಾಟೀಲ್ ಅವರ ನಿವಾಸಕ್ಕೆ ಸಚಿವ ಅಶ್ವತ್ಥ್ ನಾರಾಯಣ್ ಅವರ ಭೇಟಿ ಕುರಿತು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಮಂಗಳವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಅವರು ಸಹಜವಾಗಿಯೇ ಇದೊಂದು ಖಾಸಗಿ ಭೇಟಿ. ನಾವು ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಸಲಹೆ ಪಡೆಯಲು ಎಂ ಬಿ ಪಾಟೀಲರ ಮನೆಗೆ ಹೋಗಿದ್ದೆ ಎಂಬ ಸಬೂಬು ನೀಡುತ್ತಾರೆ. ಈಗ ಈ ವಿಚಾರವಾಗಿ ಚರ್ಚೆ ಮಾಡುವುದು ಬೇಡ. ಈ ವಿಚಾರವಾಗಿ ಅವರನ್ನೇ ಕೇಳಿ’ ಎಂದರು.

ಧ್ವನಿವರ್ಧಕದಲ್ಲಿ ಹನುಮ ಚಾಲೀಸ ಪಠಿಸುವ ವಿಚಾರವಾಗಿ ಬಿ.ಕೆ. ಹರಿಪ್ರಸಾದ್ ಅವರು ಹಿಂದೂ ಭಯೋತ್ಪಾದಕರು ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ಬಿ.ಕೆ. ಹರಿಪ್ರಸಾದ್ ಅವರು ಹಿರಿಯ ನಾಯಕರು. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಅವರ ಹೇಳಿಕೆಗಳನ್ನು ಮಾಧ್ಯಮಗಳು ತಿರುಚಬಾರದು. ಭಯೋತ್ಪಾದಕರು ಎಂದರೆ ಅಶಾಂತಿ ಮಾಡಿಸುವವರು, ಎರಡು ಜಾತಿಗಳ ನಡುವೆ, ಎರಡು ಧರ್ಮಗಳ ನಡುವೆ ದ್ವೇಷದ ಕಿಚ್ಚು ಹಚ್ಚುವವರು ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ಒಂದು ಕಡೆ ಮಗುವನ್ನು ಜಿಗುಟಿ, ಮತ್ತೊಂದು ಕಡೆ ತೊಟ್ಟಿಲು ತೂಗುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಸರ್ಕಾರ ಹಾಗೂ ಗೃಹ ಇಲಾಖೆ ಸರಿಯಾದ ರೀತಿಯಲ್ಲಿ ಕಾನೂನು ಕ್ರಮ ಕೈಗೊಂಡರೆ ಇಂತಹ ಘಟನೆಗಳು ಹೇಗೆ ನಡೆಯುತ್ತವೆ? ಸರ್ಕಾರ ಕೇವಲ ಚುನಾವಣೆ ದೃಷ್ಟಿಕೋನದಲ್ಲಿ ಈ ಪ್ರಕರಣ ನೋಡಬಾರದು. ರಾಜ್ಯದ ಇತಿಹಾಸ, ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಬಗ್ಗೆ ಸರ್ಕಾರ ಗಮನಹರಿಸಬೇಕು. ರಸಗೊಬ್ಬರ ಬೆಲೆ ಏರಿಕೆ, ರೈತರಿಗೆ ನೀಡುವ ಬೆಂಬಲ ಬೆಲೆ, ರೈತರಿಂದ ಖರೀದಿ ಮಾಡುವ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ಗಮನ ಹರಿಸಲಿ. ಅಡುಗೆ ಅನಿಲ ₹50 ಹೆಚ್ಚಿಸುತ್ತಿರುವಾಗ, ಹಾಲು ಉತ್ಪಾದಕರಿಗೆ ಸರ್ಕಾರ ನಾಲ್ಕು ರುಪಾಯಿ ಹೆಚ್ಚು ನೀಡಿದ್ದರೆ ಏನಾಗುತ್ತದೆ? ಗೋವುಗಳಿಗೆ ಹಾಕುವ ಫೀಡ್ಸ್ ಗಳು 600 ರೂಪಾಯಿಂದ ಸಾವಿರದ ಇನ್ನೂರು ರೂಪಾಯಿಗೆ ಏರಿಕೆಯಾಗಿದೆ. ಇದಕ್ಕೆಲ್ಲಾ ಹೊಣೆ ಯಾರು? ರೈತರು ಬದುಕುವುದಾದರೂ ಹೇಗೆ? ಹೈನೋದ್ಯಮದಲ್ಲಿ ಎಷ್ಟು ಉದ್ಯೋಗ ಸೃಷ್ಟಿಯಾಗುತ್ತದೆ, ರೈತರನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ಸರ್ಕಾರ ಚಿಂತಿಸುತ್ತಿಲ್ಲ. ಕೇವಲ ಲಂಚ ಹಣದ ಬಗ್ಗೆ ಮಾತ್ರ ಸರ್ಕಾರ ಗಮನ ಹರಿಸುತ್ತಿದೆ’ ಎಂದರು.

ಶಿವಮೊಗ್ಗ ಪ್ರವಾಸ ಈಶ್ವರಪ್ಪನವರ ವಿರುದ್ಧದ ಪ್ರತಿಭಟನೆಯೇ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಯಾವುದೇ ಒಬ್ಬ ವ್ಯಕ್ತಿ ವಿರುದ್ಧ ಪ್ರತಿಭಟನೆಗೆ ಹೋಗುತ್ತಿಲ್ಲ. ನಾವು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ವಿಚಾರವಾಗಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತಿದ್ದು, ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಈ ಪ್ರಕರಣದಲ್ಲಿ ಈಶ್ವರಪ್ಪನವರು ರಾಜೀನಾಮೆ ನೀಡಿದ್ದು, ನಾವು ಬಿಜೆಪಿ ಸರ್ಕಾರದ ಎಲ್ಲಾ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿದ್ದೇವೆ. ಪಕ್ಷದ ವತಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಿದ್ದರಾಮಯ್ಯನವರು ಮಂಡ್ಯ ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು,  ನಾನು ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ ಜಿಲ್ಲೆಗಳನ್ನು ವಹಿಸಿಕೊಂಡಿದ್ದೆ. ನಾನು ಹೋಗುವ ಸಂದರ್ಭದಲ್ಲಿ ಕೋಮುಗಲಭೆ ಇದ್ದ ಕಾರಣ ನನಗೆ ತಡವಾಗಿ ದಿನಾಂಕ ಕೊಡಿ ಎಂದು ಕೇಳಿದರು. ಹೀಗಾಗಿ ಇಂದು ಶಿವಮೊಗ್ಗ ಪ್ರವಾಸ ಮಾಡುತ್ತಿದ್ದೇನೆ’ ಎಂದು ಉತ್ತರಿಸಿದರು.

ಇದನ್ನೂ ಓದಿ: ಭ್ರಷ್ಟಾಚಾರದ ವಿಚಾರವಾಗಿ ಬಿಜೆಪಿ ಸುಮ್ಮನಿರುವುದು ಅಪರಾಧ: ಎಂ. ಬಿ.ಪಾಟೀಲ್

ವಿವಿಧ ಇಲಾಖೆಗಳ ಅಕ್ರಮ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕೇವಲ ಕೆಪಿಎಸ್ಸಿ ಮಾತ್ರವಲ್ಲ. ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಬಮೂಲ್, ಸಹಕಾರ ಸಂಘಗಳಲ್ಲಿನ ಅವ್ಯವಹಾರ ಕುರಿತು ಮಾಧ್ಯಮಗಳಲ್ಲಿ ವರದಿ ಬರುತ್ತಿವೆ. ವಿವಿಧ ಇಲಾಖೆಗಳ ಸರ್ಕಾರಿ ಹುದ್ದೆಗಳಿಗೆ ಎಷ್ಟೆಷ್ಟು ಹಣ ನಿಗದಿಯಾಗಿದೆ ಎಂದು ಪತ್ರಿಕೆಗಳಲ್ಲಿ ಪಟ್ಟಿಗಳು ಪ್ರಕಟವಾಗಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ಇವರಿಗೆ ನೋಟಿಸ್ ನೀಡಲಿ. ಸಹಕಾರ ಸಂಘದಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಸಚಿವ ಸೋಮಶೇಖರ್ ಅವರ ಜೊತೆ ಮಾತನಾಡಿದ್ದು ಇಲಾಖೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ. ಆದರೆ ನಮಗೂ ಬೇರೆ, ಬೇರೆ ಕಡೆಗಳಿಂದ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ. ಮಾಧ್ಯಮಗಳು ತನಿಖಾ ವರದಿಗಾರಿಕೆ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಪ್ರಕಟಿಸುತ್ತವೆ. ನಿನ್ನೆ 300 ರೂಪಾಯಿಗೆ ರಸಗೊಬ್ಬರ ಖರೀದಿ ಮಾಡಿ ಸಾವಿರ ರೂಪಾಯಿಗೆ ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಹೀಗೆ ಪ್ರತಿಯೊಂದು ಹಂತದಲ್ಲೂ ಅವ್ಯವಹಾರ, ಭ್ರಷ್ಟಾಚಾರಗಳು ನಡೆಯುತ್ತಿವೆ. ಸರ್ಕಾರ ರೈತರಿಂದ ಸೊಸೈಟಿಗಳ ಮೂಲಕ ಹಣ ಪಡೆದು ಅವರ ಜೊತೆ ಶಾಮೀಲಾಗಿ ಬೆಳೆ ವಿಮೆಯನ್ನು ನೀಡುತ್ತಿಲ್ಲ. ಈ ಸರ್ಕಾರದಲ್ಲಿ ಕಾಸಿಲ್ಲದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಈ ವಿಚಾರವಾಗಿ ನಾವು ಮುಂದಿನ ದಿನಗಳಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಮಾಧ್ಯಮಗಳು ನಮಗಿಂತ ಹೆಚ್ಚಿನ ಮಾಹಿತಿಯನ್ನು ಜನರಿಗೆ ತಿಳಿಸಿವೆ. ಪಿಎಸ್ಐ ನೇಮಕಾತಿ ಹಗರಣವನ್ನು ತೆಗೆದುಕೊಂಡರೆ ಮಲ್ಲೇಶ್ವರಂ ಕ್ಷೇತ್ರದಲ್ಲಿ ಒಂದು ಹೆಣ್ಣುಮಗಳಿಗೆ ಸಹಾಯ ಮಾಡಬೇಕು ಎಂದು ಆದೇಶವನ್ನೇ ಬದಲಿಸಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಅನ್ಯಾಯಕ್ಕೊಳಗಾದ ಜನರೇ ನಮಗೆ ಮಾಹಿತಿ ನೀಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.