ಮತದಾರರ ಖರೀದಿಗೆ ಡಿಕೆಶಿ ಯತ್ನ: ಬೊಮ್ಮಾಯಿ

Team Udayavani, May 13, 2019, 3:00 AM IST

ಹುಬ್ಬಳ್ಳಿ: ಸಚಿವ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಕನಕಪುರದ 150ಕ್ಕೂ ಹೆಚ್ಚು ಕಾರ್ಯಕರ್ತರು ಕ್ಷೇತ್ರದಲ್ಲಿದ್ದು, ಮತದಾರರನ್ನು ಖರೀದಿಸಲು ಯತ್ನಿಸುತ್ತಿರುವ ಕುರಿತು ಮಾಹಿತಿ ಬಂದಿದೆ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಿರೇಹರಕುಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಕ್ಷೇತ್ರದಲ್ಲಿ ಹಣದ ಹೊಳೆ ಹರಿಯಲು ಸಾಧ್ಯವಿಲ್ಲ.

ಇಲ್ಲಿನ ಜನರು ಪ್ರಜ್ಞಾವಂತರಿದ್ದು, ಹಣಕ್ಕೆ ಸೊಪ್ಪು ಹಾಕುವುದಿಲ್ಲ ‘ ಎಂದರು. ಮಾಜಿ ಸಚಿವ ದಿ| ಸಿ.ಎಸ್‌. ಶಿವಳ್ಳಿ ಅವರ ನಿಧನದ ನಂತರ ಅನುಕಂಪದ ಅಲೆಯಲ್ಲಿ ಕಾಂಗ್ರೆಸ್‌ ಕುಂದಗೋಳ ಗೆಲ್ಲಲು ಹೊರಟಿದೆ. ಆದರೆ ಕಾಂಗ್ರೆಸ್‌ ಅಭ್ಯರ್ಥಿಗೆ ಅನುಕಂಪ ಸಿಗದು.

ಹಿಂದಿನ ಸಿದ್ದು ಸರ್ಕಾರ ಐದು ವರ್ಷಗಳ ಕಾಲ ಶಿವಳ್ಳಿಗೆ ಸಚಿವ ಸ್ಥಾನ ನೀಡಲಿಲ್ಲ. ಮೈತ್ರಿ ಸರ್ಕಾರ ಬಂದ ನಂತರವೂ ಸಚಿವ ಸ್ಥಾನ ನೀಡಲಿಲ್ಲ. ಕೊನೇ ಗಳಿಗೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲೆಯ ಉಸ್ತುವಾರಿ ಕೊಡದಿರುವುದೂ ಕೂಡ ಶಿವಳ್ಳಿ ಅವರಿಗೆ ಬೇಸರವಿತ್ತು ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ