ನಲಪಾಡ್ ಹಲ್ಲೆ ಪ್ರಕರಣ ಡಿಕೆಶಿ ಸಂಧಾನ
Team Udayavani, Mar 18, 2020, 3:03 AM IST
ಬೆಂಗಳೂರು: ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್, ಸಚಿನ್ ಎನ್ನುವವರ ಮೇಲೆ ನಡೆಸಿದ ಹಲ್ಲೆ ಪ್ರಕರಣವನ್ನು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಧಾನ ಮಾಡಿಸುವ ಮೂಲಕ ಅಂತ್ಯಗೊಳಿಸಿದ್ದಾರೆ.
ಭಾನುವಾರ ಸಂಜೆ ನಡೆದ ಗಲಾಟೆಯಲ್ಲಿ ಸಚಿನ್ ಮೇಲೆ ಮೊಹಮದ್ ನಲಪಾಡ್ ಹಲ್ಲೆ ನಡೆಸಿದ್ದಾರೆಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣವನ್ನು ರಾಜಿ ಸಂಧಾನ ಮಾಡಿಸುವಂತೆ ಶಾಸಕ ಹ್ಯಾರಿಸ್, ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರಿಂದ ಸೋಮವಾರ ರಾತ್ರಿ ನಲಪಾಡ್ ಹಾಗೂ ಸಚಿನ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಧಾನ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಚಿನ್ ಬಳಿ ನಲಪಾಡ್ ಕ್ಷಮೆ ಕೋರಿದ್ದಾರೆ. ಅಲ್ಲದೆ ನಲಪಾಡ್‌ಗೆ ಎಚ್ಚರಿಕೆ ನೀಡಿದ್ದು, ಮುಂದೆ ಈ ರೀತಿಯ ಗಲಾಟೆ ಮಾಡಿಕೊಂಡರೆ ಪಕ್ಷದಿಂದ ಉಚ್ಚಾಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ
ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ
ಅಕ್ಬರ್,ಟಿಪ್ಪು,ಅಲೆಗ್ಸಾಂಡರನ್ನು ಮಾತ್ರ ಮಹಾನ್ ಎಂದು ಚಿತ್ರಿಸಿದ್ದೇಕೆ?:ಬಿಜೆಪಿ ಪ್ರಶ್ನೆ
ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ