DNA Test: ಮುನಿರತ್ನಗೆ ಡಿಎನ್‌ಎ ಟೆಸ್ಟ್: ಎಸ್‌ಐಟಿ ನಿರ್ಧಾರ
ರಕ್ತ ಮಾದರಿ ಸಂಗ್ರಹಕ್ಕೆ ವೈದ್ಯರನ್ನು ನ್ಯಾಯಾಲಯಕ್ಕೆ ಕರೆ ತಂದಿದ್ದ ಎಸ್‌ಐಟಿ ; ವಕೀಲರ ಆಕ್ಷೇಪ ; ಜಾಮೀನು ಅರ್ಜಿ ಇಂದು ವಿಚಾರಣೆ
Team Udayavani, Oct 4, 2024, 11:55 AM IST
ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕೇಳಿ ಬಂದಿ ರುವ ಅತ್ಯಾಚಾರ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಮುನಿ ರತ್ನಗೆ ಡಿಎನ್‌ಎ ಟೆಸ್ಟ್‌ಗೆ ಮುಂದಾಗಿದೆ. ಈ ಸಂಬಂಧ ಗುರುವಾರ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಮುನಿರತ್ನರನ್ನು ಹಾಜರು ಪಡಿಸಿದ ಎಸ್‌ಐಟಿಯು ಡಿಎನ್‌ಎ ಟೆಸ್ಟ್ ನಡೆಸಲು ಅನುಮತಿ ಕೇಳಿದೆ. ಕೋರ್ಟ್ ಶುಕ್ರವಾರದವರೆಗೆ ಅನುಮತಿ ಕಾಯ್ದಿರಿಸಿದೆ. ಮತ್ತೂಂದೆಡೆ ಮುನಿರತ್ನ ಜಾಮೀನು ಅರ್ಜಿ ವಿಚಾರಣೆಯನ್ನೂ ಶುಕ್ರವಾರಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಎಸ್‌ಐಟಿ ಅಧಿಕಾರಿಗಳು ಗುರುವಾರ 42ನೇ ಎಸಿಎಂಎಂ ಕೋರ್ಟ್‌ಗೆ ಶಾಸಕ ಮುನಿರತ್ನ ಅವರನ್ನು ಹಾಜರುಪಡಿಸಿದರು. ಮುನಿರತ್ನ ಅವರನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವಂತೆ ನ್ಯಾಯಾ ಲಯಕ್ಕೆ ಮನವಿ ಕೇಳಿದರು. ಈ ನಡುವೆ “ಪೊಲೀಸರಿಂದ ಏನಾದರೂ ಸಮಸ್ಯೆ ಆಯಿತಾ’ ಎಂದು ಮುನಿ ರತ್ನರನ್ನು ನ್ಯಾಯಾಧೀಶರು ಕೇಳಿದರು. “ಯಾವುದೇ ಸಮಸ್ಯೆ ಇಲ್ಲ. ಆದರೆ, ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ’ ಎಂದು ಮುನಿರತ್ನ ಮತ್ತೆ ಹಿಂದಿನ ಅಳಲನ್ನೇ ತೋಡಿಕೊಂಡರು. ನಂತರ ಡಿಎನ್‌ಎ ಪರೀಕ್ಷೆಗೆ ನ್ಯಾಯಾಲಯವು ಅನುಮತಿ ನೀಡಿತು. ಮುನಿರತ್ನರ ರಕ್ತದ ಮಾದರಿ ಸಂಗ್ರಹಿಸುವ ಉದ್ದೇಶದಿಂದ ಎಸ್‌ಐಟಿ ತಂಡವು ವೈದ್ಯರನ್ನೂ ಕೋರ್ಟ್‌ಗೆ ಕರೆತಂದಿದ್ದರು. ಈ ವೇಳೆ ಮುನಿರತ್ನ ಅವರು, ತಮ್ಮ ವಕೀಲರ ಸಮ್ಮುಖದಲ್ಲಿ ರಕ್ತದ ಮಾದರಿ ತೆಗೆದುಕೊಳ್ಳಬೇಕೆಂದು ಕೋರ್ಟ್ ಮುಂದೆ ಕೇಳಿಕೊಂಡರು. ಇದಕ್ಕೆ ಒಪ್ಪಿದ ಕೋರ್ಟ್, ವಕೀಲರು ಬಂದ ಮೇಲೆ ಸ್ಯಾಂಪಲ್ಸ್ ತೆಗೆದುಕೊಳ್ಳಲು ಎಸ್‌ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಕುರಿತು ಮುನಿರತ್ನ ಪರ ವಕೀಲ ಅಶೋಕ್ ಹಾರನ ಹಳ್ಳಿ ವಾದ ಮಂಡಿಸಿ, ರಕ್ತದ ಮಾದರಿ ಸಂಗ್ರಹಿಸಲು ನಮ್ಮ ಅಭ್ಯಂತರವಿಲ್ಲ. ಆದರೆ, ಯಾವ ಕಾರಣಕ್ಕಾಗಿ ಇದನ್ನು ತೆಗೆದುಕೊಳ್ಳುತ್ತಿದ್ದಾರೆ ಎಂಬುದನ್ನು ಹೇಳಬೇಕು. ರಕ್ತದ ಮಾದರಿ ತೆಗೆದುಕೊಳ್ಳುವ ಮುನ್ನ ನಮ್ಮ ಗಮನಕ್ಕೆ ತರಲಿಲ್ಲ. ಎಫ್ಎಸ್‌ಎಲ್‌ಗೆ ರವಾನಿಸಲಾದರೆ ತೆಗೆದುಕೊಳ್ಳಲಿ. ಸೆಂಟ್ರಲ್ ಏಜೆನ್ಸಿಗೆ ಪರೀಕ್ಷೆ ನಡೆಸಲು ರವಾನಿಸಬೇಕು ಎಂದು ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ಪ್ರಕರಣ ತನಿಖಾ ಹಂತದಲ್ಲಿದ್ದು, ಆರೋಪಿ ಎಸ್‌ಐಟಿ ವಶದಲ್ಲಿದ್ದಾರೆ. ತನಿಖಾಧಿಕಾರಿಗಳ ಮನವಿಗೆ ಸ್ಪಂದಿಸಿ, ಆದೇಶ ಮಾಡಲಾಗಿದೆ. ನೀವು ಆಕ್ಷೇಪಣೆ ಸಲ್ಲಿಸುವುದಾದರೆ ಸಲ್ಲಿಸಬಹುದು ಎಂದು ರಕ್ತದ ಮಾದರಿ ಸಂಗ್ರಹಿಸುವ ಪ್ರಕ್ರಿಯೆಯನ್ನು ಕೋರ್ಟ್ ಶುಕ್ರವಾರ ಬೆಳಗ್ಗೆಗೆ ಮುಂದೂಡಿದೆ. ಮಧ್ಯಾಹ್ನದ ನಂತರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರಿಗೆ ಸೂಚಿಸಲಾಗಿದೆ.
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ವಿಚಾರಣೆ ನಡೆಸಿದೆ. ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ಎಸ್‌ಐಟಿ ಪರ ಎಸ್‌ಪಿಪಿ ಪ್ರದೀಪ್ ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಯಿತು.
ಅತ್ಯಾಚಾರ ಕೇಸ್: ಗೋದಾಮಿನಲ್ಲಿ ಮಹಜರು
ಶಾಸಕ ಮುನಿರತ್ನ ವಿರುದ್ಧದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಹಲವು ಮಾಹಿತಿ ಕಲೆ ಹಾಕಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಸಂತ್ರಸ್ತೆಯನ್ನು ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ದು ಗುರುವಾರ ಮಹಜರು ನಡೆಸಿದೆ. ಮುನಿರತ್ನ ಅತ್ಯಾಚಾರ ನಡೆಸಿದ್ದರು ಎನ್ನಲಾದ ಜೆಪಿ ಪಾರ್ಕ್ ಬಳಿಯ ಗೋದಾಮಿಗೆ ಎಸ್‌ಐಟಿ ಅಧಿಕಾರಿಗಳು ಗುರುವಾರ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದ್ದಾರೆ. ಜೊತೆಗೆ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಪಿ ಪಾರ್ಕ್‌ನ ಬಾಡಿಗೆ ಮನೆಯೊಂದರಲ್ಲಿ ಮಹಜರು ನಡೆಸಿದ್ದಾರೆ. ಪ್ರಭಾವಿಗಳನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮಹಜರು ನಡೆಸಿ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿದೆ.
ಸಂತ್ರಸ್ತೆಯ ಮೊಬೈಲ್ ಜಪ್ತಿ ಮಾಡಿರುವ ಎಸ್‌ಐಟಿ ಅಧಿಕಾರಿಗಳು ಅದನ್ನು ರೀಟ್ರೈವ್ ಮಾಡಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್‌ಎಲ್) ರವಾನಿಸಿದ್ದಾರೆ. ಸಂತ್ರಸ್ತೆ ಕೆಲ ವಿಡಿಯೋ ಹಾಗೂ ಕೆಲ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಜೊತೆಗೆ ಮಾಜಿ ಕಾರ್ಪೊರೇಟರ್‌ವೊಬ್ಬರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
ಇದಲ್ಲದೇ, ಮುನಿರತ್ನ ಆಪ್ತ ಸಹಾಯಕನ ವಿಚಾರಣೆ ನಡೆಸಲಾಗಿದೆ. ಇನ್ನು ಪ್ರಕರಣದಲ್ಲಿ ಶಾಸಕ ಮುನಿರತ್ನ ಸೇರಿ ಒಟ್ಟು 7 ಆರೋಪಿಗಳ ಹೆಸರನ್ನು ಕಗ್ಗಲೀಪುರದಲ್ಲಿ ದಾಖಲಾದ ಎಫ್ಐಆರ್‌ನಲ್ಲಿ ಉಲ್ಲೇಖೀಸಲಾಗಿದೆ. ಮುನಿರತ್ನ ಹೊರತುಪಡಿಸಿ ಇನ್ನುಳಿದ 6 ಆರೋಪಿಗಳಿಗೆ ಎಸ್‌ಐಟಿ ಶೋಧ ನಡೆಸುತ್ತಿದೆ. ಇನ್ನು ಮುನಿರತ್ನರ ವಿಚಾರಣೆಯನ್ನು ಎಸ್‌ಐಟಿ ಮುಂದುವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Wayanad; ಪ್ರಿಯಾಂಕಾ ಬಿರುಸಿನ ಪ್ರಚಾರ: ತಿರುನೆಲ್ಲಿ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ
Maharashtra polls; ಉಲೇಮಾ ಕೌನ್ಸಿಲ್‌ನ ಬೇಡಿಕೆಯನ್ನು ಕಾಂಗ್ರೆಸ್ ಒಪ್ಪಿದೆ: ಶಾ ಕಿಡಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Jharkhand Elections; ರಾಂಚಿಯಲ್ಲಿ 3 ಕಿಮೀ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ
SP ಗಲಭೆಕೋರರು, ಅಪರಾಧಿಗಳ ನಿರ್ಮಾಣ ಸಂಸ್ಥೆ,ಅಖಿಲೇಶ್ ಸಿಇಒ: ಯೋಗಿ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.