ಆನ್ ಲೈನ್ ಮೂಲಕ ದೇಣಿಗೆ ನೀಡಿ: ದಾನಿಗಳಿಗೆ ಮುಖ್ಯಮಂತ್ರಿ ಮನವಿ
Team Udayavani, Apr 25, 2020, 9:48 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ, ಚಿಕಿತ್ಸಾ ಸೌಲಭ್ಯಗಳಿಗೆ ಸರಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರೊಂದಿಗೆ ಲಾಕ್ ಡೌನ್ ಕಾರಣ ಸಂಕಷ್ಟದಲ್ಲಿ ಸಿಲುಕಿರುವ ಬಡವರು ಹಾಗೂ ಕಾರ್ಮಿಕರಿಗೂ ನೆರವಿನ ಹಸ್ತ ಚಾಚಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ದಾನಿಗಳು ಸಾಧ್ಯವಾದಷ್ಟು ಆನ್ ಲೈನ್ ಮೂಲಕವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಾನವೀಯ ನೆಲೆಯಲ್ಲಿ ಸರ್ಕಾರದ ವಿವಿಧ ನಿಗಮ/ಮಂಡಳಿಗಳು, ಉದ್ಯಮಿಗಳು, ಸಂಘ-ಸಂಸ್ಥೆಗಳು, ದಾನಿಗಳು ದೇಣಿಗೆಯನ್ನು ಚೆಕ್/ಡಿ.ಡಿ.ಗಳ ಮೂಲಕ ನೀಡಿ ಸರ್ಕಾರದೊಂದಿಗೆ ಕೈಜೋಡಿಸುತ್ತಿರುವುದಕ್ಕೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಸಮುದಾಯದ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯವಶ್ಯಕವಾಗಿ ಇರುವುದರಿಂದ ದಾನಿಗಳು ಮುಖ್ಯಮಂತ್ರಿಯವರನ್ನು ಖುದ್ದಾಗಿ ಭೇಟಿ ಮಾಡಿ ದೇಣಿಗೆಯನ್ನು ನೀಡುವುದರ ಬದಲಾಗಿ ಈ ಕೆಳಕಂಡ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ ಖಾತೆಗೆ ಆನ್ ಲೈನ್ ಮುಖಾಂತರ ದೇಣಿಗೆಯನ್ನು ನೀಡುವಂತೆ ಮನವಿ ಮಾಡಿದ್ದಾರೆ.
Account Name: Chief Minister Relief Fund Covid-19
Bank Name: State Bank of India (SBI)
Branch: Vidhana Soudha, Bangalore
Account No: 39234923151
IFSC Code: SBIN0040277
MICR No: 560002419
ಇದಲ್ಲದೆ cmrf.karnataka.gov.in ವೆಬ್ಸೈಟ್ ನಲ್ಲಿ ಯು ಪಿ ಐ ಆ್ಯಪ್ ಗಳ ಮೂಲಕ ಪಾವತಿಸಲು ಸಹ ಅವಕಾಶವಿದೆ.
ಆನ್‍ಲೈನ್ ಮೂಲಕ ದೇಣಿಗೆಯನ್ನು ಪಾವತಿಸಲು ಸಾಧ್ಯವಾಗದವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಅಥವಾ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ದೇಣಿಗೆಯನ್ನು ನೀಡಬಹುದಾಗಿದೆ.
ಕೋವಿಡ್-19 ನಿಧಿಗೆ ಸೇವಾ ಮನೋಭಾವದಿಂದ ದೇಣಿಗೆ ನೀಡುವ ಪ್ರತಿಯೊಬ್ಬ ದಾನಿಯನ್ನು ಕೋವಿಡ್-19 ವೈರಾಣುವಿನ ಹರಡುವಿಕೆಯು ನಿಯಂತ್ರಣಕ್ಕೆ ಬಂದ ನಂತರ ಸಂಪರ್ಕಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್
ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್
ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ
ರಾಗಿ ಖರೀದಿ ಟೋಕನ್ ನೀಡುವಲ್ಲಿ ತಾರತಮ್ಯ : ಆಕ್ರೋಶಿತ ರೈತರಿಂದ ಹೆದ್ದಾರಿ ತಡೆ
ಕೋವಿಡ್ ನಿಯಮ ಉಲ್ಲಂಘನೆ: ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್