ಹಿಂದುತ್ವದ ವಿನಾಶ ಮಾಡುತ್ತಿರುವ ‘ನಕಲಿ’ಗಳ ಮಾತು ನಂಬಬೇಡಿ: ಜನತೆಗೆ ಎಚ್ ಡಿಕೆ ಕರೆ


Team Udayavani, Apr 2, 2022, 11:12 AM IST

hd-kumarswaamy

ಬೆಂಗಳೂರು: ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ. ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ. ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕುರ್ಚಿ ಹಿಡಿಯಲು ಮನಸುಗಳನ್ನು ಮುರಿಯುತ್ತಿದ್ದಾರೆ. ನಾಳೆ ಮನೆಗಳನ್ನೂ ಒಡೆದು ಅಣ್ಣ-ತಮ್ಮ, ಅಕ್ಕ-ತಂಗಿ ನಡುವೆಯೂ ಬೆಂಕಿ ಇಟ್ಟು ಮನೆ ಮುರುಕರೂ ಆಗುತ್ತಾರೆ. ಹಿಂದುತ್ವದ ಹೆಸರೇಳಿಕೊಂಡು ʼಹಿಂದುತ್ವದ ವಿನಾಶʼ ಮಾಡುತ್ತಿರುವ ಈ ನಕಲಿಗಳ ಮಾತನ್ನು ಯಾರೂ ನಂಬಬಾರದು. ಕರಪತ್ರ ಹಿಡಿದು ಬಂದರೆ ಭಾವೈಕ್ಯತೆಯ ಪಾಠ ಹೇಳಿ ಕಳಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸಿಕ್ಕಿತು ಡಿಎನ್‌ಎ ಪೂರ್ಣ ಲೆಕ್ಕ! ವಾಷಿಂಗ್ಟನ್‌ ವಿವಿಯ ಸಂಶೋಧಕರ ಮಹತ್ವದ ಸಾಧನೆ

ತಲೆತಲಾಂತರಗಳಿಂದ ಯುಗಾದಿ ಇದೆ, ವರ್ಷ ತೊಡಕೂ ಇದೆ, ಹಲಾಲೂ ಇದೆ. ʼಹಲಾಲ್ ಹಾಲಾಹಲʼವನ್ನುಈಗ ಸೃಷ್ಟಿಸಲಾಗಿದೆ. ಹಲಾಲು, ಜಟ್ಕಾ ಎಂದು ಜನರನ್ನು ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು. ಹಿಂದುತ್ವ ಹೆಸರಿನಲ್ಲಿ ರಾಜಕೀಯ ಜನ್ಮ ಪಡೆದು ರಕ್ಕಸರೂಪದಲ್ಲಿ ಬೆಳೆದಿರುವ ಪಕ್ಷದ ಬಾಲಂಗೋಚಿಗಳಿವು. ಇವರು ನೈಜ ಹಿಂದುಗಳೇ ಅಲ್ಲ. ತಲೆತಲಾಂತರಗಳಿಂದ ಇಲ್ಲದ ʼಆಹಾರ ತಾರತಮ್ಯʼ ಈಗೇಕೆ ಬಂತು? 150 ಸ್ಥಾನಗಳ ಗುರಿ ಮುಟ್ಟಲು ರೂಪಿಸಿದ ʼರೋಡ್ ಮ್ಯಾಪ್ʼ ಇದೇ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಸರ್ವಸಮಾನ, ಸರ್ವಹಕ್ಕು, ಸರ್ವಕಲ್ಯಾಣ; ಅಂದರೆ, ʼಸರ್ವೇ ಜನಾಃ ಸುಖಿನೋ ಭವಂತುʼ ಎಂಬ ಆಶಯವುಳ್ಳ ಸಂವಿಧಾನವನ್ನೇ ಮುಗಿಸುವ ರಕ್ಕಸ ಹುನ್ನಾರಕ್ಕೆ ಇದು ನಾಂದಿಯಷ್ಟೇ ಎಂದು ಕಿಡಿಕಾರಿದ್ದಾರೆ.

ಅನ್ನ-ಆಹಾರದಲ್ಲಿ ಅರಾಜಕತೆ ಉಂಟು ಮಾಡಿ ಬೇಳೆ ಬೇಯಿಸಿಕೊಳ್ಳುವವರು ʼಭಾರತಕ್ಕೆ ಮತ್ತು ಭಾವೈಕ್ಯ ಪರಂಪರೆಗೆ ದೊಡ್ಡ ಅಪಾಯ.ʼ ಮನಸುಗಳ ನಡುವೆ ಯುದ್ಧವನ್ನೇ ಸೃಷ್ಟಿಸುತ್ತಿರುವ ಈ ಕಿಡಿಗೇಡಿಗಳು ಯುದ್ಧೋನ್ಮಾದ ಸರ್ವಾಧಿಕಾರಿಗಳಿಗಿಂತಲೂ ವಿನಾಶಕಾರಿ. ಇದನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಯುಗಾದಿ ಹಬ್ಬದ ದಿನ ನೈಜ ಹಿಂದುಗಳು ಯಾರೂ ಮಾಂಸ ಮಾರುವುದಿಲ್ಲ, ಖರೀದಿಸುವುದೂ ಇಲ್ಲ. ಆದರೆ, ಜಟ್ಕಾ ಕಟ್ ಹೆಸರಿನಲ್ಲಿ ಕೆಲವರು ಇವತ್ತೇ ಮಾಂಸದ ಅಂಗಡಿಗಳನ್ನು ತೆರೆದಿದ್ದಾರೆ! ಇವರಾ ಹಿಂದೂಗಳು? ʼಇಂಡಿಯಾದಿಂದಲೇ ಹಿಂದೂ ಧರ್ಮವನ್ನು ಮೂಲೋತ್ಪಾಟನೆ ಮಾಡುವುದೇ ಇವರ ಹಿಡನ್ ಅಜೆಂಡಾ ಆಗಿದೆʼ ಎನ್ನುವುದು ನನ್ನ ಅಭಿಪ್ರಾಯ ಎಂದು ಕಿಡಿಕಾರಿದ್ದಾರೆ.

ಅನಾದಿ ಕಾಲದಿಂದ ಯುಗಾದಿ, ವರ್ಷ ತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷ ಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ. ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.