ನನ್ನ ಜನ್ಮದಿನ ಆಚರಣೆ ಬೇಡ : ಡಿ.ಕೆ. ಶಿವಕುಮಾರ್ ಮನವಿ
Team Udayavani, May 13, 2021, 5:57 PM IST
ಬೆಂಗಳೂರು: ಕೋವಿಡ್ ಸೋಂಕಿನ ರೂಪಾಂತರಿ ಅಲೆ ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ವರ್ಷ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ.
ಮಾಧ್ಯಮ ಹೇಳಿಕೆಯಲ್ಲಿ ಡಿಕೇಶಿ, ‘ರಾಜ್ಯ ತೀವ್ರ ಸಂಕಷ್ಟ ಸಮಯ ಎದುರಿಸುತ್ತಿದೆ. ಕೋವಿಡ್ ನ ಸ್ಥಿತಿ ಚಿಂತಾಜನಕವಾಗಿದೆ. ಈ ಸಮಯದಲ್ಲಿ ಸಂಭ್ರಮಾಚರಣೆ ಹಿತವಲ್ಲ. ಹೀಗಾಗಿ ಈ ಬಾರಿ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ನೀವೂ ಸಹ ನನ್ನ ಜನ್ಮದಿನ ಆಚರಿಸುವುದಾಗಲಿ, ಶುಭಾಶಯ ಕೋರುವುದಾಗಲಿ, ಶುಭಾಶಯ ಕೋರಲು ದೂರವಾಣಿ ಕರೆ ಮಾಡುವುದಾಗಲಿ ಬೇಡ ಎಂದಿದ್ದಾರೆ.
ಇನ್ನು, ನಾನು ಆ ದಿನ ಊರಲ್ಲಿ ಇರುವುದಿಲ್ಲ. ಹೀಗಾಗಿ ಯಾರೂ ಕೂಡ ಶುಭಾಶಯ ಕೋರಲು ನಿವಾಸದ ಬಳಿ ಬರುವುದು ಬೇಡ. ಮಾಧ್ಯಮಗಳಲ್ಲಿ ನನಗೆ ಶುಭಾಶಯ ಕೋರಿ ಯಾರೊಬ್ಬರೂ ಜಾಹೀರಾತು ನೀಡಬಾರದು ಎಂದು ಅವರು ಕೋರಿಕೊಂಡಿದ್ದಾರೆ.
ಪರಿಸ್ಥಿತಿಯ ಗಂಭೀರತೆ ಅರಿತು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯಾರು ಕೂಡ ಈ ವಿಚಾರದಲ್ಲಿ ತಪ್ಪು ಭಾವಿಸಬಾರದು. ನಿಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ನನ್ನ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಪಾಸಿಟಿವ್ ಬಂದ 1 ಗಂಟೆಯೊಳಗೆ ಹೋಂ ಐಸೊಲೇಷನ್ ಆದವರಿಗೆ ಮೆಡಿಕಲ್ ಕಿಟ್ : ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..