ಕಾಮಾಲೆ ಕಣ್ಣಿಂದ ಬಜೆಟ್‌ ನೋಡ್ಬೇಡಿ

Team Udayavani, Jul 6, 2018, 6:00 AM IST

u-40.jpg

ಬೆಂಗಳೂರು : ಬಜೆಟ್‌ ಬಗ್ಗೆ ಕೆಲವರಿಗೆ ತಪ್ಪು ಗ್ರಹಿಕೆ ಇದ್ದು ಕಾಮಾಲೆ ಕಣ್ಣಿನಿಂದ ನೋಡುವುದನ್ನು ಬಿಟ್ಟು ಸಮಗ್ರ ದೃಷ್ಟಿಕೋನದಿಂದ ನೋಡಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.  ಬಜೆಟ್‌ ಮಂಡನೆ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ತಾವು ಮಂಡಿಸಿರುವ ಬಜೆಟ್‌ ಹಾಸನ, ಮಂಡ್ಯಕ್ಕೆ ಮಾತ್ರ ಸೀಮಿತವಾಗಿದೆ ಎನ್ನುವುದನ್ನು ಅಲ್ಲಗಳೆದಿದ್ದು, ಸಂಕಷ್ಟದಲ್ಲಿರುವ ರೈತರ 34 ಸಾವಿರ ಕೋಟಿ ಸಾಲ ಮನ್ನಾ ಮಾಡಲು ಸಾಕಷ್ಟು ಶ್ರಮ ವಹಿಸಿದ್ದು, ಸಾಲ ಮನ್ನಾ ಮಾಡಿಯೂ ಮಿಗತೆ ಬಜೆಟ್‌ ಮಂಡಿಸಿದ್ದು, ಆರ್ಥಿಕ ಶಿಸ್ತು ಕಾಪಾಡಿಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.

ಬಜೆಟ್‌ ಬಗ್ಗೆ ಬಿಜೆಪಿ ನಾಯಕರು ಮಾಡಿರುವ ಪ್ರತಿಕ್ರಿಯೆಗೆ ಖಾರವಾಗಿ ವಾಗ್ಧಾಳಿ ನಡೆಸಿರುವ ಅವರು, ರೈತರನ್ನು ಋಣ ಮುಕ್ತರನ್ನಾಗಿ ಮಾಡಲು, 2018 ರ ಫೆಬ್ರವರಿಯಲ್ಲಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್‌ನ ಎಲ್ಲ ಅಂಶಗಳನ್ನೂ ಮುಂದುವರೆಸಲು ತೀರ್ಮಾನಿಸಿದ್ದು, ಧರ್ಮ ಒಡೆಯುವ ವಿಷಬೀಜ ಬಿತ್ತುವ ಬಿಜೆಪಿಯ ಪೊಳ್ಳು ಮಾತುಗಳಿಗೆ ಕರಾವಳಿ ಭಾಗದ ಜನರು ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಬೆಂಗಳೂರಿಗೂ ಸಾಕಷ್ಟು ಕೊಡುಗೆಗಳನ್ನು ನೀಡಲಾಗಿದ್ದು, ನಾಲ್ಕೂ ದಿಕ್ಕುಗಳನ್ನು ಸಂಪರ್ಕಿಸುವ ಎಲಿವೇಟೆಡ್‌ ಕಾರಿಡಾರ್‌, ಪೆರಿಫೆರಲ್‌ ರಿಂಗ್‌ ರಸ್ತೆ, ಮೆಟ್ರೋ ಯೋಜನೆ ವಿಸ್ತರಣೆ ಸೇರಿದಂತೆ ನಗರದ ಜನತೆ ಟ್ರಾಫಿಕ್‌ ಸಮಸ್ಯೆಯಿಂದ ಬಳಲುವುದನ್ನು ತಪ್ಪಿಸಲು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಎಲ್ಲವನ್ನೂ ಹಾಸನ, ಮಂಡ್ಯಕ್ಕೆ ಮಾತ್ರ ನೀಡಲಾಗಿದೆ ಎಂದು ಆರೋಪಿಸುತ್ತಿ ದ್ದಾರೆ. ಸಾಲ ಮನ್ನಾ ಯೋಜನೆಯಲ್ಲಿ ಯಾವ ಜಿಲ್ಲೆಯ ರೈತರಿಗೆ ಎಷ್ಟು ಅನುಕೂಲವಾಗುತ್ತದೆ ಎಂದು ಬಜೆಟ್‌ ಮೇಲಿನ ಚರ್ಚೆಯ ಸಂದರ್ಭದಲ್ಲಿ ಉತ್ತರಿಸುತ್ತೇನೆ. ಕೌಶಲ್ಯಾಭಿವೃದ್ಧಿ
ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು, ಉತ್ತರ ಕರ್ನಾಟಕ ಭಾಗದ ಬೆಳಗಾವಿ, ವಿಜಯಪುರ, ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ದೊರೆಯುವಂತೆ ಮಾಡಿದ್ದೇವೆ.

ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಮಾಡಿದ್ದರೂ ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಬೆಲೆ ಕಡಿಮೆ ಇದೆ ಎಂದು ಸಮ ರ್ಥನೆ ಮಾಡಿಕೊಂಡ ಮುಖ್ಯ ಮಂತ್ರಿ ಕುಮಾರ ಸ್ವಾಮಿಯವರು ಕೇಂದ್ರದ ಎನ್‌ಡಿಎ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ತೈಲದ ಮೇಲಿನ ತೆರಿಗೆಯನ್ನು
ಶೇ.238ರಷ್ಟು ಹೆಚ್ಚಿಸಿದೆ ಎಂದು ಟೀಕಿಸಿದರು.

ಹಿಂದಿನ ಎಲ್ಲ ಯೋಜನೆಗಳನ್ನು ಮುಂದುವರೆಸಿ, ಇಷ್ಟೊಂದು ಸವಾಲು ಮೈಮೇಲೆ ಹಾಕಿಕೊಂಡು ಪೂರ್ಣ ಬಜೆಟ್‌ ಮಂಡಿಸಿದ್ದೇನೆ. ಇದರ ಬಗ್ಗೆ ಚರ್ಚಿಸಲು ಜನರ ಬಳಿಗೆ ಹೋಗೋಣ ನಡೀರಿ. 
ಎಚ್‌. ಡಿ. ಕುಮಾರಸ್ವಾಮಿ, ಸಿಎಂ

ಟಾಪ್ ನ್ಯೂಸ್

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

1-sadsadsad

Revanna; ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ: ಸೂರಜ್ ಜುಲೈ 1ರವರೆಗೆ ಸಿಐಡಿ ವಶಕ್ಕೆ

1-woqf

Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.